ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
Rotary Club's New Office Bearers' Installation Ceremony
ಬ್ಯಾಡಗಿ 02 : ಪಟ್ಟಣದ ಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ರೋಟರಿ ಕ್ಲಬ್ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಭಾನುವಾರ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಡಿಸ್ಟ್ರಿಕ್ಟ್ ಗವರ್ನರ್ ನಾಮಿನಿ ವಾಸುಕಿ ಸಂಜೆ ಮಾತನಾಡಿ, "ಈ ಭಾಗದ ರೋಟರಿ ಕ್ಲಬ್ ಸಣ್ಣದಾಗಿದ್ದರೂ, ಅದರ ನಿರಂತರ ಸೇವಾ ಕಾರ್ಯಗಳು ಅತ್ಯುತ್ತಮವಾಗಿವೆ. ಕ್ಲಬ್ ಜಿಲ್ಲಾ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವುದು ಹೆಮ್ಮೆಯ ಸಂಗತಿ. ಸ್ವಂತ ಕಟ್ಟಡ ಹಾಗೂ ಸಭಾಭವನ ನಿರ್ಮಾಣಕ್ಕೆ ಮುಂದಾದರೆ ಸದಸ್ಯರ ಸಂಖ್ಯೆ ಹೆಚ್ಚುವುದರ ಜೊತೆಗೆ ಇನ್ನಷ್ಟು ಜನಪರ ಯೋಜನೆಗಳನ್ನು ಕೈಗೊಳ್ಳಲು ಅನುಕೂಲವಾಗಲಿದೆ" ಎಂದು ಹೇಳಿದರು.
ಈ ಸಂದರ್ಭದಲ್ಲಿ ಕ್ಲಬ್ನ ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿ ಅಧಿಕಾರ ಹಸ್ತಾಂತರ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಪವಾಡಪ್ಪ ಅಚನೂರು ಮಾತನಾಡಿ, "ರೋಟರಿ ಸಂಸ್ಥೆಯ ಮಾನವೀಯ ಮೌಲ್ಯಗಳಿಗೆ ಅನುಗುಣವಾಗಿ ಎಲ್ಲ ಸದಸ್ಯರ ಸಹಕಾರದೊಂದಿಗೆ ಸಮಾಜಮುಖಿ ಸೇವಾ ಕಾರ್ಯಗಳನ್ನು ಪ್ರಾಮಾಣಿಕವಾಗಿ ನಡೆಸುತ್ತೇನೆ. ಅಧ್ಯಕ್ಷ ಸ್ಥಾನಕ್ಕೆ ನನ್ನನ್ನು ಆಯ್ಕೆ ಮಾಡಿದ ರೋಟರಿ ಕುಟುಂಬಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ" ಎಂದು ಹೇಳಿದರು. ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಗಣ್ಯರನ್ನು ಸನ್ಮಾನಿಸಲಾಯಿತು. ಹಾವೇರಿಯ ನಾಟ್ಯಾಂಜಲಿ ನೃತ್ಯ ಕಲಾ ತಂಡದಿಂದ ಭರತನಾಟ್ಯ ಪ್ರದರ್ಶನ ನಡೆಯಿತು.
ಕಾರ್ಯಕ್ರಮದಲ್ಲಿ ಡಾ. ಎ.ಎಂ. ಸೌದಾಗರ, ಬಸವರಾಜ್ ಕೇಳಗಾರ, ಬಸವರಾಜ್ ಸುಂಕಾಪುರ, ಮಂಜುನಾಥ ಉಪ್ಪಾರ, ಮಾಲತೇಶ ಅರಳಿಮಟ್ಟಿ, ಇನ್ನರ್ವೀಲ್ ಕ್ಲಬ್ನ ಸಂಧ್ಯಾರಾಣಿ ದೇಶಪಾಂಡೆ, ಆನಂದಗೌಡ ಸೊರಟೂರು, ವಿಶ್ವನಾಥ ಅಂಕಲಕೋಟಿ, ಜೆ.ಎಚ್. ಪಾಟೀಲ, ಮಹಾಂತೇಶ ಮೆಲ್ಮುರಿ, ಕಿರಣ ವೆಣ್ಣೇಕರ್, ಮಾಲತೇಶ ಉಪ್ಪಾರ, ಸತೀಶ ಅಗಡಿ, ಮಹಾಂತೇಶ ಬಂದಮ್ಮನವರ, ಪರಶುರಾಮ ಮೇಲಗಿರಿ, ಶಿವಕುಮಾರ ಕೇರೂಡಿ, ಮಾಲತೇಶ ಕಲ್ಯಾಣಿ, ಜಗದೀಶ ದೇವಿಹೊಸೂರು, ಚೇತನ ಕುಡತರ್ಕರ್ ಸೇರಿದಂತೆ ಇನ್ನರ್ವೀಲ್ ಕ್ಲಬ್ ಹಾಗೂ ವಿವಿಧ ರೋಟರಿ ಕ್ಲಬ್ಗಳ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 