ವೃದ್ಧಾಶ್ರಮಕ್ಕೆ ರೋಟರಿ ಕ್ಲಬ್ ಸದಸ್ಯರ ಭೇಟಿ
Rotary Club members visit old age home
ಲೋಕದರ್ಶನ ವರದಿ
ಹಿಡಕಲ್ ಡ್ಯಾಂ 07 : ನಿಸ್ವಾರ್ಥ ಸೇವೆಯಿಂದ ಸಮಾಜದಲ್ಲಿರುವ ಅನೇಕ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಬಹುದು ಇದಕ್ಕೆ ಮಹಿಳಾ ಕಲ್ಯಾಣ ಸಂಸ್ಥೆಯ ಸಾರ್ಥಕ ಸೇವೆಯೇ ಉದಾಹರಣೆ ಎಂದು ರೋಟರಿ ಕ್ಲಬ್‌ನ ಇವೆಂಟ ಅಧ್ಯಕ್ಷರಾದ ಉದಯ ಇಡಗಲ್ ಅಭಿಪ್ರಾಯ ವ್ಯಕ್ತಪಡಿಸಿದರು.
ಮಹಿಳಾ ಕಲ್ಯಾಣ ಸಂಸ್ಥೆಯು ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂ ನಲ್ಲಿ ನಡೆಸುತ್ತಿರುವ “ಆಸರೆ” ವೃದ್ಧಾಶ್ರಮಕ್ಕೆ ಭೇಟಿ ನೀಡಿ ಮಾತನಾಡುತ್ತಾ ಸಮಾಜದಲ್ಲಿ ಹಿರಿಯ ನಾಗರಿಕರನ್ನು ಮಕ್ಕಳು ನೋಡದೇ ವೃದ್ಧಾಶ್ರಮಕ್ಕೆ ಕಳುಹಿಸುತ್ತಿರುವುದು ವಿಷಾದನೀಯ ಹಿರಿಯ ನಾಗರಿಕರು ನಮ್ಮ ಸಂಸ್ಕೃತಿಯ ಪ್ರತೀಕ ಅವರನ್ನು ಕೊನೆಯ ಕಾಲದಲ್ಲಿ ಜೋಪಾನ ಮಾಡುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ ಎಂದರು.
ಮಹಿಳಾ ಕಲ್ಯಾಣ ಸಂಸ್ಥೆಯ ಯೋಜನಾ ನಿರ್ದೆಶಕರಾದ ಸುರೇಖಾ ಡಿ ಪಾಟೀಲ ಮಾತನಾಡಿ ಸಂಸ್ಥೆಯು ಕಳೆದ 49 ವರ್ಷಗಳಿಂದ ಹಲವಾರು ಕಾರ್ಯಚಟುವಟಿಕೆಗಳನ್ನು ನಡೆಸುತ್ತಿದ್ದು ಮುಖ್ಯವಾಗಿ ಮಹಿಳೆಯರ ಮಕ್ಕಳ ಹಿರಿಯ ನಾಗರಿಕರ ಸಮಸ್ಯೆಗಳನ್ನು ಪರಿಹರಿಸುತ್ತಲಿದ್ದು ಇತ್ತೀಚಿನ ದಿನಗಳಲ್ಲಿ ಹಿರಿಯ ನಾಗರಿಕರನ್ನು ಮಕ್ಕಳು ಕಡೆಗಣಿಸಿ ವೃದ್ಧಾಶ್ರಮಕ್ಕೆ ಬಿಟ್ಟುಹೊಗುತ್ತಿರುವುದು ದುರಾಧೃಷ್ಟ ಎಂದರು.
ಕಾರ್ಯಕ್ರಮದಲ್ಲಿ ಬೆಳಗಾವಿ ರೋಟರಿ ಕ್ಲಬ್‌ನ ಕಾರ್ಯದರ್ಶಿಗಳಾದ ನಂದನ ಬಾಗಿ, ಸದಸ್ಯರಾದ ಅರುಣ ಪಾಟೀಲ, ಖಜಾಂಚಿ ಜರತರಕರ್, ಸತೀಶ ನಾಯ್ಕ, ಕಿರಣ ಲುಗರ್ಡೆ, ರಾಜೀವ ದೇಶಪಾಂಡೆ, ರೂಪಾ ದೇಶಪಾಂಡೆ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಕಿರಣ ಚೌಗಲಾ ಉಪಸ್ಥಿತರಿದ್ದರು. ರೋಟರಿ ಕ್ಲಬ್‌ನ ಸದಸ್ಯರು ಹಿರಿಯ ನಾಗರಿಕರ ಯೋಗಕ್ಷೇಮವನ್ನು ವಿಚಾರಿಸಿ ದೇಣಿಗೆ ನೀಡಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 