ಸಿಲಿಕಾನ್ ಸಿಟಿಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ
ಬೆಂಗಳೂರು, ಡಿ.17 ರೌಡಿಶೀಟರ್ನೋರ್ವನನ್ನು
ಬರ್ಬರವಾಗಿ ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ನಗರದ ಸಂಪಿಗೆಹಳ್ಳಿ ಬಳಿ ಸೋಮವಾರ ರಾತ್ರಿ ನಡೆದಿದೆ.ಭರತ್
ಅಲಿಯಾಸ್ ಕೋಗಿಲು ಭರತ್ (28) ಕೊಲೆಯಾದ ರೌಡಿಶೀಟರ್. ಸಂಪಿಗೆಹಳ್ಳಿಯ ವಿಜಯ ವೈನ್ಸ್ ಮುಂಭಾಗದಲ್ಲಿ
ಭರತ್ ನಿಂತಿದ್ದಾಗ ಬೈಕ್ನಲ್ಲಿ ಬಂದ ನಾಲ್ಕೈದು ಜನ ದುಷ್ಕರ್ಮಿಗಳು ಆತನನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ
ಕೊಚ್ಚಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಕೊಲೆಯಾದ ಭರತ್ ಯಲಹಂಕ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದು,
ಈತನ ವಿರುದ್ಧ ಯಲಹಂಕ, ಸಂಪಿಗೆ ಹಳ್ಳಿ ಸೇರಿದಂತೆ
ಇತರೆ ಪೊಲೀಸ್ ಠಾಣೆಗಳಲ್ಲಿ ಕೊಲೆ ಯತ್ನ, ಕೊಲೆ, ದರೋಡೆ, ಬೆದರಿಕೆಯೊಡ್ಡಿರುವ ಪ್ರಕರಣಗಳು ದಾಖಲಾಗಿವೆ.ಹಳೇ
ದ್ವೇಷದ ಹಿನ್ನೆಲೆ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,
ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 