ರೌಡೀಶೀಟರ್ಗೆ ಆರು ತಿಂಗಳ ಅವಧಿಗೆ ಜಿಲ್ಲೆಯಿಂದ ಗಡಿಪಾರು
Rowdy sheeter banished from district for six months
ಕಾರವಾರ 26: ಜಿಲ್ಲೆಯ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿಗೆ ಧಕ್ಕೆ ಉಂಟುಮಾಡುತ್ತಿದ್ದ ರೌಡೀಶೀಟರ್ನೊಬ್ಬನನ್ನು ಉತ್ತರ ಕನ್ನಡ ಜಿಲ್ಲೆಯಿಂದ ಆರು ತಿಂಗಳ ಅವಧಿಗೆ ಗಡಿಪಾರು ಮಾಡಿ ಜಿಲ್ಲಾ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.
ಬನವಾಸಿ ಪೊಲೀಸ್ ಠಾಣೆ ವ್ಯಾಪ್ತಿಯ ಶಿರಸಿ ತಾಲೂಕಿನ ಬದನಗೋಡ ಗ್ರಾಮದ ನಿವಾಸಿ, ಕುಖ್ಯಾತ ರೌಡೀಶೀಟರ್ ಸಂತೋಷ ಫಕ್ಕೀರ್ಪ ಬೋವಿವಡ್ಡರ (27) ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ.
ಸಂತೋಷ ಬೋವಿವಡ್ಡರ ವಿರುದ್ಧ 2017ರಿಂದ 2026ರ ಅವಧಿಯಲ್ಲಿ ಕಳ್ಳತನ, ಸುಲಿಗೆ, ಅತ್ಯಾಚಾರ ಹಾಗೂ ಎನ್ಡಿಪಿಎಸ್ ಕಾಯ್ದೆ ಸೇರಿದಂತೆ ವಿವಿಧ ಪ್ರಕರಣಗಳು ದಾಖಲಾಗಿವೆ. ಬನವಾಸಿ ಪೊಲೀಸ್ ಠಾಣೆಯಲ್ಲಿ 9 ಹಾಗೂ ಶಿರಸಿ ಗ್ರಾಮೀಣ ಮತ್ತು ಎನ್.ಎಂ. ಠಾಣೆಗಳಲ್ಲಿ ತಲಾ ಒಂದು ಪ್ರಕರಣ ಸೇರಿದಂತೆ ಒಟ್ಟು 11 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿರಂತರ ಪೊಲೀಸ್ ನಿಗಾವಿದ್ದರೂ ಆರೋಪಿಯು ಅಪರಾಧ ಚಟುವಟಿಕೆಗಳನ್ನು ಮುಂದುವರಿಸುತ್ತಿದ್ದು, ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟುಮಾಡುತ್ತಿರುವುದಾಗಿ ಬನವಾಸಿ ಪೊಲೀಸ್ ಠಾಣೆ ಅಧಿಕಾರಿಗಳು ಗಡಿಪಾರು ಪ್ರಸ್ತಾವನೆ ಸಲ್ಲಿಸಿದ್ದರು.
ಪ್ರಸ್ತಾವನೆಯನ್ನು ಪರೀಶೀಲಿಸಿದ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳು ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 55(ಎ) ಮತ್ತು 55(ಬಿ) ಅಡಿಯಲ್ಲಿ ಕ್ರಮ ಕೈಗೊಂಡಿದ್ದಾರೆ.
ಜುಲೈ 23ರಂದು ಹೊರಡಿಸಿರುವ ಆದೇಶದಂತೆ ಆರೋಪಿಯನ್ನು 2027ರ ಜನವರಿ 22ರವರೆಗೆ ಉತ್ತರ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ. ಅಲ್ಲದೆ, ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ಅತ್ತಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುವಂತೆ ಸೂಚಿಸಲಾಗಿದ್ದು, ಬನವಾಸಿ ಪೊಲೀಸರು ಆರೋಪಿಯನ್ನು ಅತ್ತಿಬೆಲೆ ಪೊಲೀಸ್ ಠಾಣೆ ಅಧಿಕಾರಿಗಳ ವಶಕ್ಕೆ ಒಪ್ಪಿಸಿ ಗಡಿಪಾರು ಆದೇಶವನ್ನು ಜಾರಿಗೊಳಿಸಿದ್ದಾರೆ.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 