ಭ್ರೂಣ ಲಿಂಗ ಪತ್ತೆ ಬಗ್ಗೆ ಮಾಹಿತಿ ನೀಡಿದರೆ ರೂ.1 ಲಕ್ಷ ಬಹುಮಾನ: ಡಾ.ಶಂಕರ್ ರಾವ್
Rs. 1 lakh reward for information on fetal gender detection: Dr. Shankar Rao
ಕಾರವಾರ 27: ಹೆಣ್ಣು ಮಕ್ಕಳ ರಕ್ಷಣೆ ಹಾಗೂ ಲಿಂಗ ತಾರತಮ್ಯವನ್ನು ಹೋಗಲಾಡಿಸಲು ರಾಷ್ಟ್ರಿಯ ಹೆಣ್ಣು ಮಗುವಿನ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಭ್ರ್ರೂಣ ಲಿಂಗ ಪತ್ತೆ ಪ್ರಕರಣ ಕುರಿತು ಮಾಹಿತಿಯನ್ನು ನೀಡಿದ್ದಲ್ಲಿ ಸರ್ಕಾರದಿಂದ ಒಂದು ಲಕ್ಷ ಬಹುಮಾನ ನೀಡಲಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶಂಕರ್ ರಾವ್ ತಿಳಿಸಿದರು. ಅವರು ಮಂಗಳವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ನಡೆದ, ರಾಷ್ಟ್ರಿಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಮ್ಮ ದೇಶದ ಸಂಸ್ಕೃತಿಯಲ್ಲಿ ಹೆಣ್ಣು ಮಕ್ಕಳಿಗೆ ವಿಶೇಷ ಗೌರವ ಮತ್ತು ಸ್ಥಾನಮಾನ ಇದೆ. ಹೆಣ್ಣು ಮಗುವನ್ನು, ಮನೆಯನ್ನು ಬೆಳಗುವ ದೀಪ ಎಂದು ಕರೆಯುವ ಅದೇ ಜನ ಮನೆಯಲ್ಲಿ ಹೆಣ್ಣು ಹುಟ್ಟಿದರೆ ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳದಂತೆ ನಾವೆಲ್ಲರೂ ನೋಡಿಕೊಳ್ಳಬೇಕು ಎಂದರು.
ತೋಡುರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ. ರಾಹುಲ್ ಎಸ್. , ಸಹಾಯಕ ಆಡಳಿತಾಧಿಕಾರಿ ಯೂಸುಫ್ ಖಾನ್, ಜಿಲ್ಲಾ ಆರೋಗ್ಯ ಉಪ ಶಿಕ್ಷಣಾಧಿಕಾರಿ ಬಸವರಾಜ್ ಕನ್ನಕ್ಕನವರ, ನಸಿಂರ್ಗ್ ಅಫೀಸರ್ ಸುಷ್ಮ್ಮಾ, ಸಂಧ್ಯಾ ಹಾಗೂ ಕಾರವಾರ ತಾಲೂಕಿನ ಆಶಾ ಕಾರ್ಯಕರ್ತೆಯರು ಮತ್ತು ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು. ರತೀಶ್ ನಾಯ್ಕ ಸ್ವಾಗತಿಸಿ ವಂದಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 