ಚಿಕ್ಕೋಡಿ-ಸದಲಗಾ ಕ್ಷೇತ್ರದಲ್ಲಿ ದೇವಸ್ಥಾನಗಳಿಗೆ ರೂ. 2 ಕೋಟಿ ಅನುದಾನ ಮಂಜೂರು

ಚಿಕ್ಕೋಡಿ-ಸದಲಗಾ ಕ್ಷೇತ್ರದಲ್ಲಿ ದೇವಸ್ಥಾನಗಳಿಗೆ ರೂ. 2 ಕೋಟಿ ಅನುದಾನ ಮಂಜೂರು   Rs. 2 crore grant sanctioned for temples in Chikkodi-Sadalaga constituency

ಚಿಕ್ಕೋಡಿ 04: ಸದಲಗಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಗ್ರಾಮಗಳು ಹಾಗೂ ಪಟ್ಟಣಗಳ ದೇವಸ್ಥಾನಗಳ ಜೀರ್ಣೋದ್ದಾರ ಮತ್ತು ಕಟ್ಟಡ ಕಾಮಗಾರಿಗಳಿಗೆ 2 ಕೋಟಿ ರೂ ಅನುದಾನ ಮಂಜೂರಾಗಿದೆ ಎಂದು ವಿಪ ಸದಸ್ಯ ಪ್ರಕಾಶ ಹುಕ್ಕೇರಿ ಹೇಳಿದರು.ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ದೇವಸ್ಥಾನ ಕಮೀಟಿಗೆ ಆದೇಶ ಪತ್ರ ವಿತರಿಸಿದ ಅವರು.ಕ್ಷೇತ್ರದ ಹಲವು ದೇವಸ್ಥಾನಗಳ ಅಭಿವೃದ್ಧಿಗೆ ಅನುದಾನ ಮಂಜೂರು ಮಾಡುವಂತೆ ದೇವಸ್ಥಾನಗಳ ಕಮೀಟಿಗಳು ಮನವಿ ಸಲ್ಲಿಸಿದ್ದವು.

ಈ ಹಿನ್ನೆಲೆಯಲ್ಲಿ ಶಾಸಕರಾದ ಗಣೇಶ ಹುಕ್ಕೇರಿ ಅವರ ನೇತೃತ್ವದಲ್ಲಿ 2025-26ನೇ ಸಾಲಿನ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ದೇವಸ್ಥಾನಗಳ ಜೀರ್ಣೋದ್ದಾರ ಹಾಗೂ ಕಟ್ಟಡ ಕಾಮಗಾರಿಗಳಿಗೆ ಒಟ್ಟು ರೂ. 6 ಕೋಟಿ ಅನುದಾನ ನಿಗದಿಪಡಿಸಲಾಗಿತ್ತು. ಈಗಾಗಲೇ ಕೆಲವು ಕಾಮಗಾರಿಗಳು ಪ್ರಗತಿಯಲ್ಲಿದ್ದು, ಉಳಿದ ಕಾಮಗಾರಿಗಳನ್ನು ವೇಗಗೊಳಿಸಲು ಈ ಬಾರಿ ರೂ. 2 ಕೋಟಿ ರೂ ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.

ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸುವಂತೆ ದೇವಸ್ಥಾನಗಳ ಕಮೀಟಿಗಳು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.ಈ ಅನುದಾನದಡಿ ಜೋಡಕುರಳಿ ಗ್ರಾಮದ ಶ್ರೀ ಬೀರಲಿಂಗೇಶ್ವರ ಹಾಗೂ  ಬೀರೇಶ್ವರ ದೇವಸ್ಥಾನ, ಸಿದ್ದಾಪೂರವಾಡಿ, ಯಡೂರವಾಡಿ, ಕಾಡಾಪೂರ, ಹಿರೇಕೊಡಿ, ವಾಳಕಿ ಸೇರಿದಂತೆ ವಿವಿಧ ಗ್ರಾಮಗಳ ದೇವಸ್ಥಾನಗಳು ಮತ್ತು ಸಮುದಾಯ ಭವನಗಳ ಕಾಮಗಾರಿಗಳಿಗೆ ಅನುದಾನ ಮಂಜೂರಾಗಿದೆ.

ಜೊತೆಗೆ ಚಿಕ್ಕೋಡಿ ಪಟ್ಟಣದ ವಿವಿಧ ಸಮಾಜಗಳ ಸಮುದಾಯ ಭವನಗಳು ಹಾಗೂ ಸಾರ್ವಜನಿಕ ಮೂಲಸೌಕರ್ಯ ಅಭಿವೃದ್ಧಿಗೂ ಸಹ ಅನುದಾನ ಒದಗಿಸಲಾಗಿದೆ ಎಂದರು.ಈ ಸಂದರ್ಭದಲ್ಲಿ ವಿವಿಧ ದೇವಸ್ಥಾನಗಳ ಆಡಳಿತ ಮಂಡಳಿಯ ಸದಸ್ಯರು, ಗ್ರಾಮಸ್ಥರು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಉಪಸ್ಥಿತರಿದ್ದರು.ಪೋಟೋ ಶೀರ್ಷಿಕೆ: ಜೋಡಕುರಳಿ ಗ್ರಾಮದ ಶ್ರೀ ಬೀರಲಿಂಗೇಶ್ವರ ಹಾಗೂ ಅರವಿಡಿ ಬೀರದೇವ ದೇವಸ್ಥಾನ ಕಮೀಟಿ ಸದಸ್ಯರು ಮತ್ತು ಗ್ರಾಮಸ್ಥರು.