7 ಮಹಾನಗರ ಪಾಲಿಕೆಗೆ ರೂ.1,400 ಕೋಟಿ ವಿಶೇಷ ಅನುದಾನ ಬಿಡುಗಡೆ: ಸಚಿವ ಬಿ.ಎಸ್. ಸುರೇಶ್
Rs.1,400 crore special grant released for 7 municipal corporations: Minister B.S. Suresh
ಬೆಳಗಾವಿ ಸುವರ್ಣಸೌಧ ಡಿ.12: ರಾಜ್ಯದ 7 ಮಹಾನಗರ ಪಾಲಿಕೆಗಳಿಗೆ ತಲಾ ರೂ.200 ಕೋಟಿಯಂತೆ ರೂ.1,400 ಕೋಟಿ ವಿಶೇಷ ಅನುದಾವನ್ನು ನೀಡಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಹೇಳಿದರು.
ಶುಕ್ರವಾರ ವಿಧಾನ ಸಭೆ ಪ್ರಶ್ನೋತ್ತರ ಕಲಾಪದಲ್ಲಿ ಕುಮಟ ಶಾಸಕ ದಿನಕರ್ ಕೇಶವ್ ಶೆಟ್ಟಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡುವ ವೇಳೆ ಸಚಿವ ಬಿ.ಎಸ್.ಸುರೇಶ್ ಮಾಹಿತಿ ನೀಡಿದರು.ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳನ್ನಾಗಿ ಉನ್ನತೀಕರಿಸುವ ವೇಳೆ ಹತ್ತಿರ ಇರುವ ಗ್ರಾಮಾಂತರ ಪ್ರದೇಶಗಳನ್ನು ಸಹ ಸೇರೆ್ಡ ಮಾಡಿ ಸರಹದ್ದು ನಿಗದಿಪಡಿಸಲಾಗುತ್ತಿದೆ. ಆದರೆ ಕೆಲ ಶಾಸಕರು ನಗರಸಭೆ ವ್ಯಾಪ್ತಿಯಿಂದ ಗ್ರಾಮಗಳನ್ನು ಕೈಬಿಡುವಂತೆ ಮನವಿ ಮಾಡುತ್ತಾರೆ. ಇದು ಕಷ್ಟದ ಕೆಲಸವಾಗಿದೆ. ಸರ್ಕಾರ ನಗರಸಭೆ ವ್ಯಾಪ್ತಿಗೆ ಸೇರೆ್ಡ ಮಾಡಿದ ಗ್ರಾಮಗಳ ಅಭಿವೃದ್ಧಿಗೆ ಹಣ ನೀಡಲಿದೆ, ಶಾಸಕರು ತಾಳ್ಮೆ ವಹಿಸಬೇಕು ಎಂದು ಸಚಿವ ಬಿ.ಎಸ್.ಸುರೇಶ್ ತಿಳಿಸಿದರು.ಕರ್ನಾಟಕ ಪೌರಸಭೆಗಳ ಅಧಿನಿಯಮದ ಮಾನದಂಡಗಳ ಪ್ರಕಾರ 20,000 ದಿಂದ 50,000 ಜನಸಂಖ್ಯೆ, ಅಥವಾ ಚದರ ಮೀಟರ್‌ಗೆ 1,500 ಜನಸಾಂದ್ರತೆ, ರೂ.9 ಲಕ್ಷ ರಾಜಸ್ವ ಆದಾಯ, ಇಲ್ಲವೆ ಶೇ.50 ರಷ್ಟು ಕೃಷಿಯೇತರ ಚಟುವಟಿಕೆ ನಡೆಯುತ್ತಿದ್ದರೆ ಅಂತಹ ಸ್ಥಳವನ್ನು ಪುರಸಭೆಯನ್ನಾಗಿ ಉನ್ನತಿಕರಿಸಲಾಗುವುದು. ಆದರೆ ಹೊನ್ನಾವರ ಪಟ್ಟಣದಲ್ಲಿ 2011ರ ಜನಗಣತಿ ಅನ್ವಯ 19,109 ಜನಸಂಖ್ಯೆಯಿದೆ. ಈ ಹಿನ್ನಲೆಯಲ್ಲಿ ಹೊನ್ನಾವರ ಪಟ್ಟಣ ಪಂಚಾಯಿತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆ ತಿರಸ್ಕರಿಸಲಾಗಿದೆ ಎಂದು ಸಚಿವ ಬಿ.ಎಸ್.ಸುರೇಶ್ ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಅವರ ಪರವಾಗಿ ಶಾಸಕ ದಿನಕರ್ ಕೇಶವ್ ಶೆಟ್ಟಿ ಅವರಿಗೆ ಉತ್ತರಿಸಿದರು.ಪ್ರಸ್ತುತ ಹೊನ್ನಾವರದಲ್ಲಿ 20 ಸಾವಿರಕ್ಕೂ ಅಧಿಕ ಜನಸಂಖ್ಯೆಯಿದೆ. ವ್ಯಾಪಾರ ವಹಿವಾಟುಗಳು ಪಟ್ಟಣದಲ್ಲಿ ಹೆಚ್ಚಾಗಿವೆ. ಜನರು ಕೃಷಿಯೇತರ ಆದಾಯದಿಂದಲೇ ಬದುಕುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಸರ್ಕಾರ ಹೊನ್ನಾವರನ್ನು ಪುರಸಭೆಯನ್ನಾಗಿ ಮೇಲ್ದೆರ್ಜೆಗೆ ಏರಿಸಬೇಕು. ಪ್ರಮುಖ ಪ್ರವಾಸಿ ತಾಣವಾದ ಗೋಕರ್ಣ 33 ಸದಸ್ಯರು ಇರುವ ದೊಡ್ಡ ಗ್ರಾಮ ಪಂಚಾಯಿತಿಯಾಗಿದೆ. ನಿತ್ಯ ಸಾವಿರಾರು ಪ್ರವಾಸಿಗರು ಗೋಕರ್ಣಕ್ಕೆ ಭೇಟಿ ನೀಡುತ್ತಾರೆ. ಸರ್ಕಾರ ಗೋಕರ್ಣವನ್ನು ಪಟ್ಟಣ ಪಂಚಾಯಿತಿಯಾಗಿ ಪರಿವರ್ತಿಸಬೇಕು ಎಂದು ಶಾಸಕ ದಿನಕರ್ ಕೇಶವ್ ಶೆಟ್ಟಿ ಕೋರಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 