ಕೇಂದ್ರದಿಂದ 100 ಕೋಟಿ ರೂ. ನೆರವು ಕೇಳಿದ ಸಿಎಂ

 

ಬೆಂಗಳೂರು: ಪ್ರವಾಹ ಪೀಡಿತ ಕೊಡಗು ಜಿಲ್ಲೆಯ ಜನರ ಪುನರ್ವಸತಿ ಮತ್ತು ಪರಿಹಾರ ಕಾರ್ಯಕ್ಕೆ 100 ಕೋಟಿ ರೂಪಾಯಿ ನೆರವು ನೀಡುವಂತೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕೇಂದ್ರ ಸಕರ್ಾರವನ್ನು ಒತ್ತಾಯಿಸಿದ್ದಾರೆ. 

ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನ ಮಂತ್ರಿಯವರು ಕೇರಳ ರಾಜ್ಯಕ್ಕೆ 500 ಕೋಟಿ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ ನಾವು ಕೊಡಗಿಗೆ ಕನಿಷ್ಠ 100 ಕೋಟಿಯನ್ನಾದರೂ ಬಿಡುಗಡೆ ಮಾಡಬೇಕೆಂದು ಕೇಳುತ್ತೇವೆ. ಕೇಂದ್ರಕ್ಕೆ ಈ ಕುರಿತು ಮನವಿ ಸಲ್ಲಿಸಲಾಗುವುದು, ರಸ್ತೆ ಸಂಪರ್ಕ ಕಲ್ಪಿಸಬೇಕಾಗಿದೆ. ಅದಕ್ಕಾಗಿ ಭಾರತೀಯ ಸೇನೆ ಮತ್ತು ರಾಷ್ಟ್ರೀಯ ವಿಪತ್ತು ಪರಿಹಾರ ಪಡೆಯ ಸಹಾಯವನ್ನು ಪಡೆಯುತ್ತಿದ್ದೇವೆ ಎಂದರು. 

ಪ್ರವಾಹ ಪರಿಸ್ಥಿತಿ ಕುರಿತು ಪರಾಮಶರ್ೆ ನಡೆಸಲು ಕೊಡಗಿನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದೇವೆ. ಇದುವರೆಗೆ ಇಲ್ಲಿ 12 ಮಂದಿ ಮೃತಪಟ್ಟಿದ್ದು 845 ಮನೆಗಳು ಹಾನಿಗೀಡಾಗಿವೆ, ಅವುಗಳಲ್ಲಿ 773 ಮನೆಗಳು ಭಾಗಶಃ ಹಾನಿಗೊಳಗಾದವವಾಗಿವೆ ಎಂದರು.