ಶಿಗ್ಗಾಂವ ಯೋಜನೆಗೆ ರೂ.105.19 ಕೋಟಿ- ಬಂಕಾಪೂರ ಯೋಜನೆಗೆ ರೂ. 92.84 ಕೋಟಿ ರೂ.351 ಕೋಟಿ ವೆಚ್ಚದ ನೀರು ಪೂರೈಕೆ ಯೋಜನೆಗೆ ಅಸ್ತು
Rs.105.19 crore for Shiggaon project- Rs. 92.84 crore for Bankapur project- Rs. 351 crore for Astu w
ಶಿಗ್ಗಾಂವ ಯೋಜನೆಗೆ ರೂ.105.19 ಕೋಟಿ- ಬಂಕಾಪೂರ ಯೋಜನೆಗೆ ರೂ. 92.84 ಕೋಟಿ ರೂ.351 ಕೋಟಿ ವೆಚ್ಚದ ನೀರು ಪೂರೈಕೆ ಯೋಜನೆಗೆ ಅಸ್ತು
ಹಾವೇರಿ:ಸೆ.11(ಕರ್ನಾಟಕ ವಾರ್ತೆ): ಸವಣೂರು, ಶಿಗ್ಗಾವಿ ಮತ್ತು ಬಂಕಾಪುರ ಪಟ್ಟಣಗಳಿಗೆ ಕುಡಿಯುವ ನೀರು ಪೂರೈಕೆಯ ಒಟ್ಟು 351.23 ಕೋಟಿ ರೂ. ಅಂದಾಜು ವೆಚ್ಚದ ಕೆರೆ ಅಭಿವೃದ್ಧಿಯ ಮೂರು ಯೋಜನೆಗಳಿಗೆ ಸಚಿವ ಸಂಪುಟ ಅಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
ಸವಣೂರು ಪಟ್ಟಣಕ್ಕೆ ನೀರು ಪೂರೈಕೆ ಮಾಡಲು 153.20 ಕೋಟಿ ರೂ. ವೆಚ್ಚದಲ್ಲಿ ತಲಾಬ ಕೆರೆ ಸುಧಾರಣಾ ಕಾಮಗಾರಿ, ಶಿಗ್ಗಾವಿಗೆ ನೀರು ಪೂರೈಕೆ ಮಾಡಲು 105.19 ಕೋಟಿ ರೂ. ವೆಚ್ಚದಲ್ಲಿ ನಾಗನೂರು ಕೆರೆ ಅಭಿವೃದ್ಧಿ ಹಾಗೂ ಬಂಕಾಪುರ ಪಟ್ಟಣಕ್ಕೆ ನೀರು ಪೂರೈಕೆ ಮಾಡಲು 92.84 ಕೋಟಿ ರೂ. ವೆಚ್ಚದಲ್ಲಿ ತೆವರಮಳ್ಳಿಹಳ್ಳಿ ಕೆರೆ ಸುಧಾರಣಾ ಯೋಜನೆಗಳಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಿದೆ. ವರದಾ ನದಿ ಬತ್ತಿ ಬೇಸಿಗೆ ದಿನಗಳಲ್ಲಿ ಉದ್ಭವಿಸುವ ಕುಡಿಯುವ ನೀರಿನ ಸಮಸ್ಯೆಗೆ ಈ ಯೋಜನೆಗಳ ಅನಷ್ಠಾನದಿಂದ ಶಾಶ್ವತ ಪರಿಹಾರ ಸಿಗಲಿದೆ. ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಪರಿಹಾರ ದೃಷ್ಟಿಯಲ್ಲಿ ಇದು ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ ಎಂದು ಸಚಿವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸವಣೂರು ಪಟ್ಟಣಕ್ಕೆ ನೀರು ಪೂರೈಕೆ ಮಾಡುವ 71.15 ಕೋಟಿ ರೂ. ವೆಚ್ಚದ ಪರಿಷ್ಕೃತ ಅಂದಾಜಿಗೆ 2014ರ ಜೂನ್ 10ರಂದು ಆಡಳಿತಾತ್ಮಕ ಅನುಮೋದನೆ ನೀಡಲಾಗಿತ್ತು. ಬೇಸಿಗೆ ದಿನಗಳಲ್ಲಿ ವರದಾ ನದಿ ಬತ್ತಿ ಹೋಗುವುದರಿಂದ ಈ ಅವಧಿಯ ಐದು ತಿಂಗಳು ಉದ್ಭವಿಸುವ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಮೋತಿ ತಲಾಬ್ ಕೆರೆಯಲ್ಲಿ ವರದಾ ನದಿಯಿಂದ ನೀರು ಸಂಗ್ರಹ ಮಾಡಲು ಯೋಜನೆ ರೂಪಿಸಲಾಗಿತ್ತು. ಆದರೆ ನೀರಾವರಿ ಇಲಾಖೆಯಿಂದ ಜಾಗ ಹಸ್ತಾಂತರವಾಗದ ಕಾಣ ಕಾಮಗಾರಿ ಕೈಗೊಳ್ಳಲು ಸಾಧ್ಯವಾಗಿರಲಿಲ್ಲ.
ಅಮೃತ 2.0 ಯೋಜನೆಯಲ್ಲಿ ಸವಣೂರು ಪಟ್ಟಣದಲ್ಲಿ 47.43 ಕೋಟಿ ರೂ. ವೆಚ್ಚದಲ್ಲಿ ವಿತರಣಾ ಜಾಲ ಮತ್ತು ಗೃಹ ಸಂಪರ್ಕ ಜೋಡಣೆ, ಮೇಲ್ಮಟ್ಟದ ಜಲಸಂಗ್ರಹಾಗಾರಗಳು, ಶುದ್ಧೀಕರಣ ಘಟಕದ ನವೀಕರಣ, ಮೋತಿ ತಲಾಬ್ ಕೆರೆಯಲ್ಲಿ ಜಾಕ್‌ವೆಲ್ ಮತ್ತು ಪಂಪಿಂಗ್ ಮಿಷನರಿ ಕಾಮಗಾರಿ ಕೈಗೊಳ್ಳಲಾಗಿದ್ದು, ಪ್ರಗತಿಯಲ್ಲಿದೆ. ಪ್ರಸ್ತುತ 2025-26ನೇ ಏಕರೂಪದ ದರಪಟ್ಟಿಯಂತೆ ತಲಾಬ ಕೆರೆ ಅಭಿವೃದ್ಧಿಗೆ 159.50 ಕೋಟಿ ರೂ. ಅಂದಾಜು ವೆಚ್ಚದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ.
ಯುಐಡಿಎಸ್‌ಎಸ್ ಎಂಟಿ ಅನುದಾನದಲ್ಲಿ ಶಿಗ್ಗಾವಿ ಪಟ್ಟಣಕ್ಕೆ ವರದಾ ನದಿಯಿಂದ ನೀರು ಪೂರೈಕೆ ಮಾಡಲು ಈ ಹಿಂದೆ 39.75 ಕೋಟಿ ರೂ. ವೆಚ್ಚದ ಯೋಜನೆ ರೂಪಿಸಲಾಗಿತ್ತು. ಪ್ರಸ್ತುತ ಯುಐಡಿಎಸ್‌ಎಸ್ ಎಂಟಿ ಯೋಜನೆಯಲ್ಲಿ ಅನುದಾನ ಲಭ್ಯ ಇರುವುದಿಲ್ಲ.
ಅಮೃತ 2.0 ಯೋಜನೆಯಲ್ಲಿ ಶಿಗ್ಗಾವಿಗೆ ನೀರು ಪೂರೈಕೆ ವಿತರಣಾ ಜಾಲ ಅಳವಡಿಸಲು 65.31 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಾಗಿದೆ. 2025-26ನೇ ಸಾಲಿನ ಏಕರೂಪ ದರಪಟ್ಟಿಯಂತೆ ಶಿಗ್ಗಾವಿಗೆ ನೀರು ಪೂರೈಕೆ ಮಾಡಲು ನಾಗನೂರು ಕೆರೆ ಅಭಿವೃದ್ಧಿಗೆ 109.50 ಕೋಟಿ ರೂ. ಅಂದಾಜು ವೆಚ್ಚದ ಯೋಜನೆ ರೂಪಿಸಲಾಗಿದ್ದು, ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ.
ಬಂಕಾಪುರಕ್ಕೆ ಯುಐಡಿಎಸ್‌ಎಸ್ ಎಂಟಿ ಅನುದಾನದಲ್ಲಿ ವರದಾ ನದಿಯಿಂದ ನೀರು ಪೂರೈಕೆ ಮಾಡಲು ರೂಪಿಸಲಾಗಿದ್ದ ಯೋಜನೆಯನ್ನು 2014ರಲ್ಲಿ 71.15 ಕೋಟಿ ರೂ. ಅಂದಾಜು ವೆಚ್ಚಕ್ಕೆ ಪರಿಷ್ಕರಿಸಲಾಗಿದ್ದು, ಆಡಳಿತಾತ್ಮಕ ಅನುಮೋದನೆ ಪಡೆಯಲಾಗಿತ್ತು. ಬೇಸಿಗೆ ದಿನಗಳಲ್ಲಿ ನದಿ ನೀರು ಬತ್ತಿ ಹೋಗುವುದರಿಂದ ಈ ದಿನಗಳಲ್ಲಿನ ನೀರಿನ ಸಮಸ್ಯೆ ಪರಿಹಾಕ್ಕೆ ತೆವರಮಳ್ಳಿಹಳ್ಳಿ ಕೆರೆಯಲ್ಲಿ ನೀರು ಸಂಗ್ರಹಿಸಲು ಯೋಜನೆಯನ್ನು ವಿನ್ಯಾಸಗೊಳಿಸಲಾಗಿತ್ತು. ಈ ಕಾಮಗಾರಿಗೆ 11.68 ಕೋಟಿ ರೂ.ಗಳ ಅವಕಾಶ ಕಲ್ಪಿಸಲಾಗಿತ್ತು. ಈ ಯೋಜನೆಗೂ ನೀರಾವರಿ ಇಲಾಖೆ ಜಾಗ ಹಸ್ತಾಂತರ ಮಾಡದೆ ಕೆರೆ ಅಭಿವೃದ್ಧಿ ಸಾಧ್ಯವಾಗಿರಲಿಲ್ಲ.
ಅಮೃತ 2.0 ಯೋಜನೆಯಲ್ಲಿ 44.53 ಕೋಟಿ ರೂ. ವೆಚ್ಚದಲ್ಲಿ ಬಂಕಾಪುರ ಪಟ್ಟಣದಲ್ಲಿ ವಿತರಣಾ ಜಾಲ ಮತ್ತುಗೃಹ ಸಂಪರ್ಕ ಜೋಡಣೆ, ಮೇಲ್ಮಟ್ಟದ ಜಲಸಂಗ್ರಹಾಗಾರ, ಶುದ್ಧೀಕರಣ ಘಟಕದ ನವೀಕರಣ, ತೆವರಮೆಳ್ಳಿಹಳ್ಳಿ ಕೆರೆಯಲ್ಲಿ ಹೌಸಿಂಗ್ ಚೇಂಬರ್ ಹಾಗೂ ಪಂಪಿಂಗ್ ಮಶಿನರಿ ಅಳವಡಿಸುವ ಕಾಮಗಾರಿ ಕೈಗೊಂಡಿದ್ದು, ಪ್ರಗತಿಯಲ್ಲಿವೆ. ಈಗ ತೆವರಮಳ್ಳಿಹಳ್ಳಿ ಕೆರೆ ಅಭಿವೃದ್ಧಿ ಕಾಮಗಾರಿಗೆ 96.75 ಕೋಟಿ ರೂ. ಅಂದಾಜು ವೆಚ್ಚದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ ಎಂದು ಸಚಿವರು ತಿಳಿಸಿದ್ದಾರೆ.
ಕೋಟ್: ಮೋತಿ ತಲಾಬ್ ಕೆರೆ, ನಾಗನೂರು ಕೆರೆ ಹಾಗೂ ತೆವರಮಳ್ಳಿಹಳ್ಳಿ ಕೆರೆಗಳನ್ನು ಅಭಿವೃದ್ಧಿಪಡಿಸಿ ವರದಾ ನದಿಯಿಂದ ನೀರು ಸಂಗ್ರಹ ಮಾಡುವ ಯೋಜನೆಗಳು ಅನುಷ್ಠಾನಕ್ಕೆ ಬಂದರೆ ಸವಣೂರು, ಶಿಗ್ಗಾವಿ ಹಾಗೂ ಬಂಕಾಪುರ ಪಟ್ಟಣಗಳಲ್ಲಿ ಬೇಸಿಗೆ ದಿನಗಳಲ್ಲಿ ಉದ್ಭವಿಸುವ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ. ಶಾಸಕ ಯಾಸಿರ್ ಖಾನ್ ಪಠಾಣ್ ಅವರ ಕನಸು ನನಸಾಗಲಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 