ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಿಂದ ರಾಜ್ಯಕ್ಕೆ 2679 ಕೋಟಿ ರೂ.ಬಿಡುಗಡೆ; ಬಿ.ಸಿ.ಪಾಟೀಲ್

ಬೆಂಗಳೂರು, ಮಾ 23 ,ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯಡಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಈವರೆಗೆ 2,679 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ತಿಳಿಸಿದ್ದಾರೆ. ವಿಧಾನಸಭೆಯ  ಪ್ರಶ್ನೋತ್ತರ ಅವಧಿಯಲ್ಲಿ ಪಕ್ಷೇತರ ಸದಸ್ಯ ಶರತ್‌ ಕುಮಾರ್ ಬಚ್ಚೇಗೌಡ  ಅವರ ‍ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು,  49.84 ಲಕ್ಷ ಫಲಾನುಭವಿಗಳು ಯೋಜನೆಯ ಲಾಭ ಪಡೆದಿದ್ದಾರೆ ಎಂದಿದ್ದಾರೆ.ರಾಜ್ಯ ಸರ್ಕಾರದ ವತಿಯಿಂದ ಈ ಯೋಜನೆಗೆ 866 ಕೋಟಿ ರೂ. ಬಿಡುಗಡೆಯಾಗಿದ್ದು, 43.31 ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.