ಸಿಸಿರಸ್ತೆ, ಗಟಾರ ನಿರ್ಮಾಣ, ರಸ್ತೆ ಅಭಿವೃದ್ಧಿ ಸೇರಿದಂತೆ ಇನ್ನಿತರ ಸಾರ್ವಜನಿಕ ಮೂಲಭೂತ ಸೌಲಭ್ಯಗಳಿಗೆ 50 ಲಕ್ಷ ರೂ. ಅನುದಾನ : ಶಾಸಕ ಶ್ರೀನಿವಾಸ
Rs 50 lakh grant for other public infrastructure facilities including CC road, sewerage construction
ಲೋಕದರ್ಶನ ವರದಿ
ಹಾನಗಲ್ 30: ಸಿಸಿರಸ್ತೆ, ಗಟಾರ ನಿರ್ಮಾಣ, ರಸ್ತೆ ಅಭಿವೃದ್ಧಿ ಸೇರಿದಂತೆ ಇನ್ನಿತರ ಸಾರ್ವಜನಿಕ ಮೂಲಭೂತ ಸೌಲಭ್ಯ ಕಲ್ಪಿಸಲು ತಾಲೂಕಿನ ಪ್ರತಿಯೊಂದು ಗ್ರಾಪಂಗಳಿಗೆ ತಲಾ 50 ಲಕ್ಷ ರೂ. ಅನುದಾನ ಶೀಘ್ರ ಒದಗಿಸಲಾಗುವುದು ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು. ತಾಲೂಕಿನ ಕಾಡಶೆಟ್ಟಿಹಳ್ಳಿ ಗ್ರಾಮದಲ್ಲಿ 62 ಲಕ್ಷ ರೂ. ವೆಚ್ಚದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದ ಅವರು ಗ್ರಾಮದ ಒಳಗಿನ ರಸ್ತೆಗಳನ್ನು ಅಭಿವೃದ್ಧಿ ಪಡಿಸಲು ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೆತ್ತಿಕೊಳ್ಳಬೇಕಿತ್ತು. ಆದರೆ ಕಳೆದ ವರ್ಷದಿಂದ ಅನುದಾನ ದೊರಕಿಸಲಾಗುತ್ತಿದೆ. ಕಳೆದ ವರ್ಷ ತಾಲೂಕಿನ ಪ್ರತಿ ಗ್ರಾಪಂಗಳಿಗೆ ಒಂದು ಕೋಟಿ ರೂ.ವರೆಗೆ ಅನುದಾನ ಬಿಡುಗಡೆಗೊಳಿಸಿ ಸಾಕಷ್ಟು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದರು.
ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕಾಧ್ಯಕ್ಷ ವಿಜಯಕುಮಾರ ದೊಡ್ಡಮನಿ, ಕೆಪಿಸಿಸಿ ಸದಸ್ಯ ಟಾಕನಗೌಡ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹನುಮಂತಪ್ಪ ಮರಗಡಿ, ಮಂಜು ಗೊರಣ್ಣನವರ, ಮುಖಂಡರಾದ ಅಶೋಕ ಹಲಸೂರ, ಶಿವಪ್ಪ ಗಿರಿಯಪ್ಪನವರ, ಗುರುಬಸಪ್ಪ ಕಲಮಿಟ್ಲಿ, ಸಿದ್ದಪ್ಪ ಲಕ್ಮಾಪೂರ, ಪಂಚಾಕ್ಷರಿ ದೊಡ್ಡಹುಣಸಿಕಟ್ಟಿ, ಈರ್ಪ ಬೈಲವಾಳ, ಆದರ್ಶ ಶೆಟ್ಟಿ, ತಿರಕಪ್ಪ ಗಾಣಗೇರ, ಚಂದ್ರಗೌಡ ಪಾಟೀಲ, ಚನ್ನವೀರಯ್ಯ ಪೂಜಾರ, ವಹಾಬ್ ಕೋಟಿ, ಲಿಂಗಬಸನಗೌಡ ಪಾಟೀಲ, ಕರಬಸಪ್ಪ ದೊಡ್ಡಮನಿ, ಲೀಲಾವತಿ ದೊಡ್ಡಮನಿ, ಅಸ್ಕರ್‌ಅಲಿ ಗೌಡಗೇರಿ ಸೇರಿದಂತೆ ಇನ್ನೂ ಹಲವರು ಈ ಸಂದರ್ಭದಲ್ಲಿ ಇದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 