ಕೊಡಗಿಗೆ 8ಕೋಟಿ ಪರಿಹಾರ

ಮಡಿಕೇರಿ 24:  ಕೇಂದ್ರದಿಂದ ಕೊಡಗಿನ ರಕ್ಷಣೆಗಾಗಿ ನಿರ್ಮಲಾ ಸೀತಾರಾಮನ್ ಎಂಪಿ ಕೋಟಾದಡಿ ಒಂದು ಕೋಟಿ ರೂ.ಮತ್ತು ಜನರ ರಕ್ಷಣೆಗೆ ತಾತ್ಕಾಲಿಕ ಪರಿಹಾರಕ್ಕಾಗಿ ಏಳು ಕೋಟಿ ರೂ.ಕೊಡುವುದಾಗಿ ಸುದ್ಧಿಗೋಷ್ಠಿಯಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು ಕೇರಳಾಕ್ಕೂ ಇದೇ ರೀತಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬೆಳಿಗ್ಗೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಪರಿಹಾರ ಕೇಂದ್ರಗಳಿಗೆ ಭೇಟಿ ನೀಡಿದ ಸಚಿವರು, ಮಹಿಳೆಯರು ಮತ್ತು ಮಕ್ಕಳನ್ನು ಮಾತನಾಡಿಸಿ ಸಾಂತ್ವನ ಹೇಳಿದರು. ದೆಹಲಿಯಿಂದ ಬಂದಿದ್ದೇನೆ, ಆಗತ್ಯವಿರುವ ಎಲ್ಲಾ ಕ್ರಮಗಳನ್ನು ಕ್ಯೆಗೊಳ್ಳುವೆ ಎಂದು ಹೇಳಿದರು. ನಮ್ಮ ಸಂಸದರು, ಶಾಸಕರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ನಿಮ್ಮ ಜೊತೆ ಇರುತ್ತಾರೆ. ನಿಮಗೆ ಆದ ಎಲ್ಲ ಹಾನಿಯನ್ನು ತುಂಬಿಕೊಡಲು ಸಾಧ್ಯವಿಲ್ಲ, ಸಾಧ್ಯವಾದಷ್ಟು ಪರಿಹಾರ ಕೊಡಲಾಗುವುದು ಎಂದು ಹೇಳಿದರು. ಸಚಿವರ ಜೊತೆ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್, ಸಂಸದ ಪ್ರತಾಪ್ ಸಿಂಹ, ಸ್ಥಳಿಯ ಶಾಸಕರು, ಜಿಲ್ಲಾಧಿಕಾರಿಗಳು ಮತ್ತು ಅಧಿಕಾರಿಗಳು ಇದ್ದರು.

ನಂತರ ಡಿ.ಸಿ.ಕಚೇರಿಯಲ್ಲಿ ನಡೆದ ಸಭೆಯಲ್ಲಿ, ಜಿಲ್ಲಾಧಿಕಾರಿ ಶ್ರೀವಿಧ್ಯಾ ಮಳೆಯಿಂದ ಉಂಟಾದ ಹಾನಿ ಪ್ರಮಾಣದ ಬಗ್ಗೆ ಕೇಂದ್ರ ಸಚಿವರಿಗೆ ಮಾಹಿತಿ ನೀಡಿದರು.ಕೇಂದ್ರ ಸಚಿವರಿಗೆ ವೀಡಿಯೊ ಚಿತ್ರ ತೋರಿಸಿ ಹಾನಿಯ ಬಗ್ಗೆ ಮಾಹಿತಿ ನೀಡಿದರು. ಹಾನಿ ಪ್ರದೇಶಗಳಿಗೆ ಸಂಪರ್ಕ ಒದಗಿಸುವುದು ಮೊದಲ ಆದ್ಯತೆ, ಒಟ್ಟು 40 ನಿರಾಶ್ರಿತರ ಶಿಬಿರಗಳನ್ನು ತೆರೆಯಲಾಗಿದೆ.ಗುಡ್ಡ ಕುಸಿತಕ್ಕೆ ಪ್ರಾಥಮಿಕ ವರದಿ ಪ್ರಕಾರ 1140 ಕೋಟಿ ನಷ್ಟವಾಗಿದೆ.

ಸೇನೆ ಎನ್ಡಿಅರ್ಎಪ್ ಕಾಯರ್ಾಚರಣೆಯಿಂದ ಇದುವರೆಗೆ 4500 ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಲಾಗಿದೆ.ಇದುವರೆಗೆ 3140 ಜನರನ್ನು ಸುರಕ್ಷಿತಾ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಮತ್ತು ಮನೆ ಕಳೆದುಕೊಂಡವರಿಗೆ ತಾತ್ಕಲಿಕ ಮನೆ ಕಲ್ಪಿಸಿಕೊಡಲಾಗುವುದು. ಈಗಾಗಲೇ ರಸ್ತೆ ಸಂಪರ್ಕ ಕಲ್ಪಿಸುವ ಕಾರ್ಯ ನಡೆಯುತ್ತಿದೆ.ಈ ಭಾರಿ ವಾಡಿಕೆಗಿಂತ ಮೂರು ಪಟ್ಟು ಹೆಚ್ಚು ಮಳೆಯಾಗಿದೆ. ರಾಜ್ಯ, ರಾಷ್ಟ್ರೀಯ ಹೆದ್ದಾರಿ ದುರಸ್ಥಿ ಕಾರ್ಯ ನಡೆಯುತ್ತಿದೆ. ಕೊಡಗು ಜಿಲ್ಲೆಯ ಹಾನಿಗೆ ಕೇಂದ್ರದಿಂದ ಹೆಚ್ಚಿನ ಪರಿಹಾರಕ್ಕಾಗಿ ಕೇಂದ್ರ ಸಚಿವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಮನವಿ ಮಾಡಿಕೊಂಡರು. ಕೊಡಗು ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಶಾಸಕ ಬೋಪಯ್ಯ ಮನವಿ ಮಾಡಿಕೊಂಡರು.

ನಂತರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಕೊಡಗಿನ ಪುನರ್ ವಸತಿ ನಿಮರ್ಾಣಕ್ಕೆ ಕೇಂದ್ರದ ಎಲ್ಲಾ ಸಹಕಾರವಿದೆ ಎಂದು ಹೇಳಿದರು.ಕೊಡಿನ ದುರಂತದಲ್ಲಿ ಸಹಕರಿಸದವರಿಗೆ ನಿಜಕ್ಕೂ ಧನ್ಯವಾದ, ಸ್ಯೆನಿಕರು, ಎನ್ಡಿಅರ್ಎಪ್ ಮತ್ತು ಪೊಲೀಸರಿಗೆ ಧನ್ಯವಾದಗಳು, ಕೊಡಗು ಜಿಲ್ಲಾಡಳಿತ, ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಮತ್ತು ಅಧಿಕಾರಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿ ಹೆದ್ದಾರಿ ದುರಸ್ಥಿ ಬಗ್ಗೆ ಮಾತನಾಡುತ್ತೇನೆ ಎಂದು ರಕ್ಷಣಾ ಸಚಿವರು ಹೇಳಿದರು. ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಬೋಪಯ್ಯ, ಜಿಲ್ಲಾಧಿಕಾರಿ ಶ್ರೀ ವಿದ್ಯಾ ಮತ್ತು ಅಧಿಕಾರಿಗಳು ಭಾಗವಹಿಸಿದ್ದರು.