ಕೇಂದ್ರದಿಂದ 836.45 ಕೋಟಿ ರೂ.ಗಳ ಅನುದಾನ ಮಂಜೂರು: ಕಡಾಡಿ
Rs 836.45 crore grant sanctioned by Centre: Kadadi
ಮೂಡಲಗಿ 16: ಕೇಂದ್ರ ನಗರಾಭಿವೃದ್ಧಿ ಸಚಿವಾಲಯದಿಂದ ಅಮೃತ್ 2.0 ಯೋಜನೆಯಡಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಬೆಳಗಾವಿ ವಿಭಾಗದ ಜಿಲ್ಲೆಯ 32 ನಗರ ಪ್ರದೇಶಗಳಿಗೆ ಕೇಂದ್ರ ಸರ್ಕಾರದ ಶೇ 50 ರಾಜ್ಯ ಸರ್ಕಾರದ ಶೇ 40 ಹಾಗೂ ಸಾರ್ವಜನಿಕರ ವಂತಿಕೆ ಶೇ 10 ಈ ಅನುಪಾತದಲ್ಲಿ ಒಟ್ಟು 836.45 ಕೋಟಿ ರೂ.ಗಳ ಅನುದಾನ ಮಂಜೂರಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.
ರವಿವಾರದಂದು ಪತ್ರಿಕಾ ಹೇಳಿಕೆ ನೀಡಿದ ಅವರು ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ ಸಾರ್ವಜನಿಕರ ಸಹಭಾಗಿತ್ವದಲ್ಲಿ ಅದರಲ್ಲೂ ವಿಶೇಷವಾಗಿ ಮೂಡಲಗಿ, ನಾಗನೂರು, ಕಲ್ಲೋಳಿ, ಅರಭಾವಿ, ಘಟಪ್ರಭಾ ಈ ಐದು ಅವಳಿ ನಗರಗಳಿಗೆ ನಿರಂತರ ನೀರು ಪೂರೈಸುವ ಉದ್ದೇಶದಿಂದ 165 ಕೋಟಿ ರೂಪಾಯಿಗಳ ಅನುದಾನ ಮಂಜೂರಾಗಿದೆ. ಈಗಾಗಲೇ ಜಿಲ್ಲೆಯ ಹಲವು ಕಡೆ ಕಾಮಗಾರಿಗಳನ್ನು ಪ್ರಾರಂಭಿಸಲಾಗಿದ್ದು, ಅತಿ ಶೀಘ್ರದಲ್ಲಿ ಉಳಿದೆಲ್ಲ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
ಕಾಮಗಾರಿಗಳಿಗೆ ಅನುದಾನ ಮಂಜೂರಿ ಮಾಡಿದ ನೀಡಿದ ಕೇಂದ್ರ ನಗರ ವ್ಯವಹಾರಗಳ ಸಚಿವರಾದ ಮನೋಹರ್ ಲಾಲ್ ಖಟ್ಟರ್ ಹಾಗೂ ಕರ್ನಾಟಕ ರಾಜ್ಯ ನಗರಾಭಿವೃದ್ಧಿ ಸಚಿವರಾದ ಭೈರತಿ ಸುರೇಶ್ ಅವರಿಗೆ ಜಿಲ್ಲೆಯ ಜನತೆಯ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಸಂಸದ ಈರಣ್ಣ ಕಡಾಡಿ ಹೇಳಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 