ಹೆಬ್ಬಾರರ ಪರ ಮತ ಯಾಚಿಸಿದ ಶಾಸಕಿ ರೂಪಾಲಿ ನಾಯ್ಕ

ಹೆಬ್ಬಾರರ ಪರ ಮತ ಯಾಚಿಸಿದ ಶಾಸಕಿ ರೂಪಾಲಿ ನಾಯ್ಕ

ಕಾರವಾರ 23:  ಡಿಸೆಂಬರ್ 5 ರಂದು ನಡೆಯಲಿರುವ ಉಪ ಚುನಾವಣೆಯ ಅಂಗವಾಗಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯಥರ್ಿ ಶಿವರಾಮ ಹೆಬ್ಬಾರ ಪರವಾಗಿ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ಎಸ್. ನಾಯ್ಕ ಶುಕ್ರವಾರ  ಪ್ರಚಾರ ನಡೆಸಿದರು. 

ಯಲ್ಲಾಪುರ ನಗರದ ರವೀಂದನಗರದ ವಾರ್ಡ ನಂ. 17, 18 ಹಾಗೂ 19ರಲ್ಲಿ ಮಹಿಳಾ ಕಾರ್ಯಕರ್ತರೊಂದಿಗೆ ಮನೆ ಮನೆಗೆ ತೆರಳಿ ಭಾರತೀಯ ಜನತಾ ಪಕ್ಷ ನೇತ್ರತ್ವದ ಕೇಂದ್ರ ಸರಕಾರದ ಹಾಗೂ ರಾಜ್ಯ ಸರಕಾರ ಅಭಿವೃದ್ಧಿ ಪರ ಯೋಜನೆಗಳ ಕುರಿತು ಜನರಿಗೆ ತಿಳಿಸಿದರು. ಭಾರತೀಯ ಜನತಾ ಪಕ್ಷದ ಅಭ್ಯಥರ್ಿಯನ್ನು  ಬಹುಮತದಿಂದ ಆಯ್ಕೆ ಮಾಡುವಂತೆ ಮತಯಾಚನೆ ನಡೆಸಿದರು.