ಮುಂಬೈ, ಅ 24: ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ ಚೇತರಿಕೆ ಕಂಡು ಗುರುವಾರದ ಆರಂಭಿಕ ವಹಿವಾಟಿನಲ್ಲಿ ಒಂದು ಡಾಲರ್ ಬೆಲೆ 70 ರೂಪಾಯಿ 92 ಪೈಸೆಯಷ್ಟಿತ್ತು. ರೂಪಾಯಿ ಮೌಲ್ಯದ ಅಂತರ ದಿನಗ ಗರಿಷ್ಠ ಮತ್ತು ಕನಿಷ್ಠ ಮಟ್ಟ ಕ್ರಮವಾಗಿ 71.03 ಮತ್ತು 70.88. ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯ ದುರ್ಬಲಗೊಂಡ ಹಿನ್ನೆಲೆಯಲ್ಲಿ ರೂಪಾಯಿ ಮೌಲ್ಯ ಚೇತರಿಕೆ ಕಂಡಿದೆ.