ಮುಂಬೈ, ನ 8: ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ ಶುಕ್ರವಾರದ ಬೆಳಗಿನ ವಹಿವಾಟಿನಲ್ಲಿ 34 ಪೈಸೆ ಇಳಿಕೆ ಕಂಡು ಒಂದು ಡಾಲರ್ ಬೆಲೆ 71 ರೂಪಾಯಿ 29 ಪೈಸೆಯಷ್ಟಿತ್ತು. ರೂಪಾಯಿ ಮೌಲ್ಯದ ಅಂತರ ದಿನದ ಗರಿಷ್ಠ ಮತ್ತು ಕನಿಷ್ಠ ಮೌಲ್ಯ ಕ್ರಮವಾಗಿ 71.31 ರೂ ಮತ್ತು 71.17 ರೂ. ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯ ಬಲಗೊಂಡ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಕಂಡು ಬಂದಿದೆ.