ಡಾಲರ್ ಎದುರು ರೂಪಾಯಿ ಮೌಲ್ಯ ಚೇತರಿಕೆ
Rupee recovery against dollar
ಮುಂಬೈ 15: ಸತತ ಎರಡನೇ ದಿನ ಬುಧವಾರ ಕೂಡ ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು ಚೇತರಿಕೆ ಕಾಣುತ್ತಿದೆ
ರೂಪಾಯಿ ಮೌಲ್ಯ 13 ಪೈಸೆ ಏರಿಕೆಯಾಗಿದೆ. ಪ್ರತೀ ಡಾಲರ್ ಮೌಲ್ಯ ₹86.40 ಆಗಿದೆ.
ದೇಶೀಯ ಷೇರುಪೇಟೆಯು ಏರಿಕೆ ದಾಖಲಿಸಿದೆ. ಅಲ್ಲದೆ, ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯು ಇಳಿಕೆಯಾಗುತ್ತಿದೆ. ಇದು ವಿನಿಮಯ ಮಾರುಕಟ್ಟೆಯಲ್ಲಿ ಒತ್ತಡಕ್ಕೆ ಸಿಲುಕಿದ್ದ ರೂಪಾಯಿ ಮೌಲ್ಯವು ಚೇತರಿಸಿಕೊಳ್ಳಲು ನೆರವಾಗಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.
ದಾಖಲೆ ಮಟ್ಟಕ್ಕೆ ಏರಿಕೆ ಕಂಡಿದ್ದ ಡಾಲರ್ ಸೂಚ್ಯಂಕ ಕೂಡ ಇಳಿದಿದೆ. ಇದು ಕೂಡ ರೂಪಾಯಿ ಮೌಲ್ಯ ಹೆಚ್ಚಳಕ್ಕೆ ಕಾರಣವಾಗಿದೆ. ಆದರೆ, ದೇಶೀಯ ಷೇರುಪೇಟೆಯಲ್ಲಿ ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಬಂಡವಾಳ ಹಿಂಪಡೆಯುವುದು ಮುಂದುವರಿದಿದೆ ಎಂದು ಹೇಳಿದ್ದಾರೆ.
ಸದ್ಯ ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಮೌಲ್ಯ ಇಳಿಕೆ ಕಂಡಿದ್ದರಿಂದ ರೂಪಾಯಿ ಮೌಲ್ಯವು ಚೇತರಿಸಿಕೊಂಡಿದೆ. ಅಮೆರಿಕದಲ್ಲಿ ಜನವರಿ ತಿಂಗಳಿನಲ್ಲಿ ಹಣದುಬ್ಬರ ಏರಿಕೆಯಾಗುವ ನಿರೀಕ್ಷೆಯಿದೆ. ಇದು ಡಾಲರ್ ಬಲಗೊಳ್ಳಲು ಸಹಕಾರಿಯಾಗಲಿದೆ. ಆಗ ಮತ್ತೆ ರೂಪಾಯಿಯು ಒತ್ತಡಕ್ಕೆ ಸಿಲುಕುವ ಸಾಧ್ಯತೆಯಿದೆ’ ಎಂದು ಮಿರೇ ಅಸೆಟ್ ಶೇರ್ಖಾನ್ ಸಂಸ್ಥೆಯ ಸಂಶೋಧನಾ ವಿಶ್ಲೇಷಕ ಅನುಜ್ ಚೌಧರಿ ಹೇಳಿದ್ದಾರೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 