ಗ್ರಾಮೀಣ ಮಹಿಳೆಯರು ಕೋಳಿ ಸಾಕಾಣಿಕೆಯಿಂದ ಆರ್ಥಿಕ ಸ್ವಾವಲಂಬನೆ ಸಾಧಿಸಬಹುದು: ಶಾಸಕ ಬಸವರಾಜ ಶಿವಣ್ಣವರ
Rural women can achieve economic self-reliance through poultry farming: MLA Basavaraja Shivannavar
ಲೋಕದರ್ಶನ ವರದಿ
ಹಾವೇರಿ, 13: ಗ್ರಾಮೀಣ ಮಹಿಳೆಯರು ಕೋಳಿ ಸಾಕಾಣಿಕೆಯನ್ನು ಉಪಕಸುಬಾಗಿ ಅಳವಡಿಸಿಕೊಂಡು ತಮ್ಮ ಕುಟುಂಬದ ಆದಾಯವನ್ನು ಹೆಚ್ಚಿಸಿಕೊಳ್ಳಬಹುದು ಎಂದು ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ಶಿವಣ್ಣವರ ಹೇಳಿದರು.
ನಗರದ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಆವರಣದಲ್ಲಿ ಪಶುಪಾಲನಾ ಇಲಾಖೆಯಿಂದ ಆಯೋಜಿಸಿದ್ದ ಗಿರಿರಾಜ ಕೋಳಿ ಮರಿಗಳ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪಶುಪಾಲನಾ ಇಲಾಖೆಯಿಂದ ಸುಮಾರು 600 ಗಿರಿರಾಜ ಕೋಳಿ ಮರಿಗಳನ್ನು 99 ಅರ್ಹ ಮಹಿಳೆಯರಿಗೆ ತಲಾ 20 ಕೋಳಿ ಮರಿಗಳಂತೆ ವಿತರಿಸಲಾಗಿದೆ. ಗಿರಿರಾಜ ಕೋಳಿ ಸಾಕಾಣಿಕೆಯಿಂದ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗುವುದರೊಂದಿಗೆ ಸಮಾಜದಲ್ಲಿ ಸಬಲರಾಗಲು ಸಹಕಾರಿಯಾಗಲಿದೆ ಎಂದು ಹೇಳಿದರು.
ರಾಜ್ಯ ಸರ್ಕಾರವು ಮಹಿಳೆಯರ ಜೀವನಮಟ್ಟ ಸುಧಾರಣೆ ಹಾಗೂ ಗ್ರಾಮೀಣ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುತ್ತಿದ್ದು, ಇಂತಹ ಯೋಜನೆಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಆರ್ಥಿಕ ಪ್ರಗತಿ ಸಾಧಿಸುವಂತೆ ಮಹಿಳೆಯರಿಗೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಪಶುಪಾಲನಾ ಇಲಾಖೆ ನಿರ್ದೇಶಕ ಡಾ. ಶಿವಯೋಗಿ ಯಲಿ, ಹಾವೇರಿ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಎಂ.ಎಂ. ಮೈದೂರು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪರಮೇಶ ಎನ್. ಹುಬ್ಬಳ್ಳಿ, ಮುಖ್ಯ ಪಶುವೈದ್ಯಾಧಿಕಾರಿ (ಆಡಳಿತ) ಡಾ. ಮಹೇಶ ಎನ್. ಕುರಿಯವರ, ಬಸವರಾಜ ಹೆಡಗಿಕೊಂಡ, ಫಕೀರ್ಪ ದೂಡಮನಿ, ಸುರೇಶಗೌಡ ಪಾಟೀಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬಕ್ಕಖಾಲಿ ಕರಾವಳಿಯಲ್ಲಿ ಮುಳುಗಿದ್ದ ಮೀನುಗಾರಿಕಾ ದೋಣಿಯಲ್ಲಿ 9 ಮೀನುಗಾರರ ಶವ ಪತ್ತೆ; 6 ಮಂದಿಗಾಗಿ ಶೋಧ ಮುಂದುವರಿಕೆ
ಅಂತರರಾಷ್ಟ್ರೀಯ ಭೌತಶಾಸ್ತ್ರ ಒಲಿಂಪಿಯಾಡ್ 2026ರಲ್ಲಿ ಚಿನ್ನದ ಪದಕಗಳ ಸಾಧನೆ ಮಾಡಿದ ಭಾರತೀಯ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
ಶಾಸಕರ ಆಮಿಷ ಆರೋಪದ ಕಾನೂನು ನೋಟಿಸ್ ಬಳಿಕ ಬಿಜೆಪಿ ನ್ಯಾಯಾಲಯದ ಮೂಲಕ ರಾಜಕೀಯ ಹೋರಾಟ ನಡೆಸುತ್ತಿದೆ ಎಂದು ಒಮರ್ ಅಬ್ದುಲ್ಲಾ ಆರೋಪ
ಮಧುರೈ ಸಮೀಪ ಓಮ್ನಿ ಬಸ್–ಟಿಎನ್ಎಸ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಐವರು ಸಾವು, 42 ಮಂದಿಗೆ ಗಾಯ
ಆರೋಪಿತ ರೌಡಿ ಶೀಟರ್ ಜನ್ಮದಿನಾಚರಣೆಯಲ್ಲಿ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಭಾಗಿ; ಕರ್ನಾಟಕದಲ್ಲಿ ರಾಜಕೀಯ ವಿವಾದ
ಮಾಹಿತಿ ಹಕ್ಕು ಕಾಯ್ದೆ ದುರ್ಬಲಕ್ಕೆ ಯತ್ನ: ಆಯುಕ್ತರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಕಾನೂನು ಹೋರಾಟ, ಗಾಡಾದ ಎಚ್ಚರಿಕೆ 