ನಾಡಪ್ರಭು ಕೆಂಪೇಗೌಡ ಪ್ರಶಸ್ತಿಗೆ ಎಸ್‌.ಡಿ. ಮುಡೆಣ್ಣವರ ಆಯ್ಕೆ

ನಾಡಪ್ರಭು ಕೆಂಪೇಗೌಡ ಪ್ರಶಸ್ತಿಗೆ ಎಸ್‌.ಡಿ. ಮುಡೆಣ್ಣವರ ಆಯ್ಕೆ  S.D. Mudennavara selected for Nadaprabhu Kempegowda Award


ಲೋಕದರ್ಶನ ವರದಿ  

ಮುಂಡಗೋಡ  07: ಪಟ್ಟಣದ ಆದಿಜಾಂಭವ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಎಸ್‌.ಡಿ. ಮುಡೆಣ್ಣವರ ಅವರು ಬೆಂಗಳೂರಿನ ಸಮರ್ಥ ಸಾಹಿತ್ಯ ಹಾಗೂ ಸಾಂಸ್ಕೃತಿಕ ಪ್ರತಿಷ್ಠಾನ ನೀಡುವ ಪ್ರತಿಷ್ಠಿತ ನಾಡಪ್ರಭು ಕೆಂಪೇಗೌಡ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕನ್ನಡ ಸಾಹಿತ್ಯ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಅವರು ಸಲ್ಲಿಸಿರುವ ಗಮನಾರ್ಹ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಎಸ್‌.ಡಿ. ಮುಡೆಣ್ಣವರ ಅವರಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಲಭಿಸಿರುವ ಹಿನ್ನೆಲೆಯಲ್ಲಿ ಶಿಕ್ಷಣ ಕ್ಷೇತ್ರದ ಗಣ್ಯರು, ಕನ್ನಡ ಸಾಹಿತಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಶಿಕ್ಷಕರು ಹಾಗೂ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.