ಸ.ಕಿ.ಪ್ರಾ ಶಾಲೆ 88 ಮುದ್ಲಾಪುರ ಹೊಸಪೇಟೆ ಪೋಷಕ ಶಿಕ್ಷಕರ ಮಹಾಸಭೆ ಯಶಸ್ವಿ
S.K.P. School 88 Mudlapur Hospet Parent Teacher Conference was a success
ಹೊಸಪೇಟೆ 14: ಸ.ಕಿ.ಪ್ರ ಶಾಲೆ 88-ಮುದ್ಲಾಪುರದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಪೋಷಕ-ಶಿಕ್ಷಕರ ಮಹಾಸಭೆ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ನಗರಸಭೆಯ ನೂತನ ಉಪಾಧ್ಯಕ್ಷರಾದ ಜೀವರತ್ನಂ ರವರು ಮಡಿಕೆಗೆ ಧಾನ್ಯ ಹಾಕಿ ನಂತರ ಜವಾಹರ್‌ಲಾಲ್ ನೆಹರು ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿ ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ದೇಶದ ಭವಿಷ್ಯದ ನಿರ್ಮಾತೃಗಳಾದ ಇಂದಿನ ಮಕ್ಕಳು ಉತ್ತಮ ಶಿಕ್ಷಣ ಪಡೆಯಬೇಕು. ಶಿಕ್ಷಣದಿಂದ ಮಾತ್ರ ದೇಶದ ಪ್ರಗತಿ ಸಾಧ್ಯ ಮಕ್ಕಳು ದಿನಂಪ್ರತಿ ಶಾಲೆಗೆ ಹಾಜರಾಗಿ ಉತ್ತಮ ಶಿಕ್ಷಣ ಪಡೆಯಬೇಕು ಪೋಷಕರು ಮಕ್ಕಳನ್ನು ತಪ್ಪದೇ ಶಾಲೆಗೆ ಕಳುಹಿಸಬೇಕು. 88-ಮುದ್ಲಾಪುರ ಸರ್ಕಾರಿ ಶಾಲೆಯಲ್ಲಿ ಉತ್ತಮ ಶಿಕ್ಷಕರಿದ್ದು, ಉತ್ತಮ ಮೂಲಭೂತ ಸೌಕರ್ಯಗಳಿವೆ. ಹಾಗಾಗಿ ನಿಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸದೆ ಸರ್ಕಾರಿ ಶಾಲೆಗೆ ಮಕ್ಕಳನ್ನು ದಾಖಲಿಸಿ ಸರ್ಕಾರಿ ಶಾಲೆಗಳನ್ನು ಉಳಿಸಬೇಕು ಎಂದು ತಿಳಿಸಿದರು.
ಮುಖ್ಯ ಗುರುಗಳಾದ ಬಸವರಾಜ.ಕೆ ರವರು ಕಾರ್ಯಕ್ರಮದಲ್ಲಿ ಮಾತನಾಡಿ ಕರ್ನಾಟಕ ಸರ್ಕಾರ ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಮಕ್ಕಳ ದಿನಾಚರಣೆಯ ಪ್ರಯುಕ್ತ ಪೋಷಕ-ಶಿಕ್ಷಕರ ಮಹಾಸಭೆ ಆಯೋಜಿಸಲಾಗಿದೆ. ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಕೆನೆಭರಿತ ಹಾಲು, ಬಿಸಿ ಊಟ, ಮೊಟ್ಟೆ/ಬಾಳೆಹಣ್ಣು, ಬೇಯಿಸಿದ ಕಾಳು ನೀಡಲಾಗುತ್ತಿದೆ. ಅಲ್ಲದೆ ಉಚಿತ ಸಮವಸ್ತ್ರ, ಉಚಿತ ಪಠ್ಯಪುಸ್ತಕ ಎಲ್ಲ ರೀತಿಯ ಸೌಲಭ್ಯ ನೀಡುತ್ತಿದೆ. ಈ ಸೌಲಭ್ಯಗಳನ್ನು ಬಳಸಿಕೊಂಡು ಉತ್ತಮ ಶಿಕ್ಷಣ ಪಡೆಯಬೇಕು ಹಾಗೂ ಪೋಷಕರು ಮಕ್ಕಳನ್ನು ತಪ್ಪದೇ ಶಾಲೆಗೆ ಕಳುಹಿಸಬೇಕು. ಬಾಲ್ಯ ವಿವಾಹ, ಬಾಲಕಾರ್ಮಿಕ ಪದ್ದತಿ ಶಿಕ್ಷಾರ್ಹ ಅಪರಾಧವಾಗಿದ್ದು, ಪೋಷಕರು ಬಾಲ್ಯವಿವಾಹ, ಬಾಲಕಾರ್ಮಿಕ ಪದ್ದತಿ ತಪ್ಪಿಸಲು ಸಹಕರಿಸಬೇಕು.
ಆದ್ದರಿಂದ 14 ವಯಸ್ಸಿನ ಎಲ್ಲಾ ಮಕ್ಕಳು ತಪ್ಪದೇ ಶಾಲೆಯಲ್ಲಿರುವಂತೆ ಪೋಷಕರು ನಿಗಾವಹಿಸಬೇಕು. ಶಾಲೆಯ ಅಭಿವೃದ್ಧಿಗೆ ಪೋಷಕರ ಸಹ ಅಗತ್ಯ ಎಂದು ತಿಳಿಸಿದರು. ನಂತರ ನಗರಸಭೆಯ ನೂತನ ಉಪಾಧ್ಯಕ್ಷರಾದ ಜೀವರತ್ನಂ ಅವರನ್ನು ಶಾಲಾವತಿಯಿಂದ ಅಭಿನಂದಿಸಲಾಯಿತು. ಈ ಕಾರ್ಯಕ್ರಮಕ್ಕೆ ಎಸ್.ಡಿ.ಎಂ.ಸಿ. ಉಪಾಧ್ಯಕ್ಷರಾದ ದುರುಗಣ್ಣ, ಎಸ್.ಡಿ.ಎಂ.ಸಿ. ಸದಸ್ಯರಾದ ಧರ್ಮಣ್ಣ, ರೇಣುಕಾ ಪಾಟೀಲ್, ಹುಲಿಗೆಮ್ಮ ಊರಿನ ಮುಖಂಡರಾದ ತಾಯಪ್ಪ, ಶಿಕ್ಷಕರಾದ ಎಸ್.ರಮೇಶ್, ಪಾರ್ವತಿ.ಬಿ.ಭಜಂತ್ರಿ, ರಾಧಾ.ಪಿ.ಎಸ್. ಹಾಗೂ ಪೋಷಕರು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 