ಮರಳು ಲಾರಿ ಡಿಕ್ಕಿ: ಶಾಲಾ ಬಾಲಕಿ ಸಾವು

ದಾವಣಗೆರೆ,  ಮಾ.9, ಮರಳು ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಶಾಲಾ ಬಾಲಕಿಯೋರ್ವಳು  ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ  ಮರಿಗೊಂಡನಹಳ್ಳಿ  ಗ್ರಾಮದ ಬಳಿ ಸೋಮವಾರ ಬೆಳಗ್ಗೆ ಸಂಭವಿಸಿದೆ.ಮೃತಪಟ್ಟ ಶಾಲಾ ಬಾಲಕಿಯನ್ನು 14 ವರ್ಷದ ದಿವ್ಯಾ ಪಾಟೀಲ್ ಎಂದು ಗುರುತಿಸಲಾಗಿದೆ.ಘಟನೆಯಿಂದ ರೊಚ್ಚಿಗೆದ್ದ ಸ್ಥಳೀಯರು ಮರಳು ಲಾರಿಗೆ ಬೆಂಕಿ ಹಚ್ಚಿ, ಲಾರಿಗಳ ಸಂಚಾರ ನಿರ್ಬಂಧಿಸಬೇಕು ಎಂದು ಆಗ್ರಹಿಸಿ ಧರಣಿ ನಡೆಸಿದರು.ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ನ್ಯಾಮತಿ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಘಟನಾ ಸ್ಥಳಕ್ಕೆ  ಭೇಟಿ ನೀಡಿ, ಸ್ಥಳೀಯರ ಜೊತೆಗೆ ಚರ್ಚಿಸಿ  ಬೆಳಗ್ಗೆ ಲಾರಿ ಸಂಚಾರ ನಿಷೇಧಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಟಾಸ್ಕ್ಪೋರ್ಸ್  ಸಭೆಯಲ್ಲಿ ಚರ್ಚಿಸಲಾಗುವುದು. ಅಲ್ಲದೇ, ಕಂದಾಯ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ  ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದರುಲಾರಿ ಚಾಲಕನ ಅಜಾಗರೂಕತೆಯಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.