ಎಸ್‌ಸಿಎಸ್‌ಪಿ, ಟಿಎಸ್ಪಿ ಹಣ ದುರ್ಬಳಕೆಯಾಗಿಲ್ಲ: ಸಮಾಜ ಕಲ್ಯಾಣ ಸಚಿವರಿಂದ ಸ್ಪಷ್ಟನೆ
SCSP, TSP funds not misused: Social Welfare Minister clarifies
ಬೆಳಗಾವಿ ಸುವರ್ಣ ವಿಧಾನಸೌಧ ಡಿ.12 : ಗ್ಯಾರಂಟಿ ಯೋಜನೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಫಲಾನುಭವಿಗಳ ಜನಸಂಖ್ಯೆಗೆ ಅನುಗುಣವಾಗಿ ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಅನುದಾನವನ್ನು ಬಳಕೆ ಮಾಡಿದ್ದು, ಹಣ ದುರ್ಬಳಕೆಯಾಗಿಲ್ಲ ಎಂದು ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಅವರು ತಿಳಿಸಿದರು.
ವಿಧಾನ ಪರಿಷತ್ತಿನಲ್ಲಿ ಡಿ.12ರಂದು ಸದಸ್ಯರಾದ ಹೇಮಲತಾ ನಾಯಕ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 666ಕ್ಕೆ ಪ್ರತಿಕ್ರಿಯಿಸಿದ ಸಚಿವರು, ಎಸ್‌ಸಿಎಸ್‌ಪಿ ಹಾಗೂ ಟಿಎಸ್ಪಿ ಕಾಯ್ದೆಯ ಸೆಕ್ಷನ್ 7(ಸಿ) ರಡಿ ಸಾಮಾನ್ಯ ಸಾಮಾಜಿಕ ವಲಯದ ಕಾರ್ಯಕ್ರಮಗಳ ಫಲಾನುಭವಿಗಳ ಜನಸಂಖ್ಯೆಯ ಪ್ರಮಾಣಕ್ಕನುಗುಣವಾಗಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಅಡಿಯಲ್ಲಿ ಅನುದಾನವನ್ನು ಹಂಚಿಕೆ ಮಾಡಿ ಉಪಯೋಗಿಸಲು ಅವಕಾಶವಿರುತ್ತದೆ. ಅದರಂತೆ, ಗ್ಯಾರಂಟಿ ಯೋಜನೆಗಳಿಗೆ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಅಡಿಯಲ್ಲಿ ಅನುದಾನ ಹಂಚಿಕೆ ಮಾಡಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಫಲಾನುಭವಿಗಳಿಗೆ ಉಪಯೋಗಿಸಲಾಗುತ್ತಿದೆ.ಅದರಂತೆ, ಪ್ರಾರಂಭದಿಂದಲೂ ಈ ಕಾಯ್ದೆಯ ಸೆಕ್ಷನ್ 7(ಸಿ) ಪ್ರಕಾರ ಶಿಕ್ಷಣ, ಆರೋಗ್ಯ, ಕೃಷಿ, ತೋಟಗಾರಿಕೆ, ನೀರಾವರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಯೋಜನಾ ಇಲಾಖೆ, ಇಂಧನ ಇತ್ಯಾದಿ ಇಲಾಖೆಗಳಲ್ಲಿ ಎಲ್ಲರಿಗೂ ಅನ್ವಯವಾಗುವ ಯೋಜನೆಗಳು ಜಾರಿಯಲ್ಲಿದ್ದು, ಈ ಯೋಜನೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳ ಸಮಗ್ರ ಅಭಿವೃದ್ಧಿಗಾಗಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಅಡಿಯಲ್ಲಿ ಅನುದಾನವನ್ನು ಹಂಚಿಕೆ ಮಾಡಿ ಉಪಯೋಗಿಸಲಾಗುತ್ತಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 