ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ. ಪ್ರಗತಿ ಪರೀಶೀಲನೆ
SCSP and TSP Progress Review
ಗದಗ 21 : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಹಂಚಿಕೆ ಯೋಜನೆಯಡಿ ಅನುಷ್ಟಾನಿತ ಕಾಮಗಾರಿಗಳ ಆರ್ಥಿಕ ಹಾಗೂ ಭೌತಿಕ ಗುರಿಯನ್ನು ನಿಗದಿತ ಕಾಲಮಿತಿಯಲ್ಲಿಯೇ ಸಾಧಿಸಬೇಕೆಂದು ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು. ಜಿಲ್ಲಾಡಳಿತ ಭವನದ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಎಸ್.ಸಿ.ಎಸ್.ಪಿ. ಹಾಗೂ ಟಿ.ಎಸ್.ಪಿ. ಯೋಜನೆಯಡಿ ವಿವಿಧ ಇಲಾಖೆಗಳ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಸ್‌ಸಿ ಎಸ್‌ಟಿ ಕಾಲೋನಿಯಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಾಗ ಗುಣಮಟ್ಟದ ಕಡೆಗೂ ನಿಗಾವಹಿಸಬೇಕು. ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಸಭೆಗೆ ಹಾಜರಾಗಬೇಕು. ಆಯಾ ಆರ್ಥಿಕ ಸಾಲಿನಲ್ಲಿ ಅನುಷ್ಟಾನಿತ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವತ್ತ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು. ಯಾವುದೇ ಕಾರಣಕ್ಕೂ ಬಿಡುಗಡೆಯಾದ ಅನುದಾನ ಲ್ಯಾಪ್ಸ್ ಆಗದಂತೆ ನೋಡಿಕೊಳ್ಳಬೇಕು ಎಂದರು.
ಎಸ್‌ಸಿಪಿ ಟಿಎಸ್‌ಪಿ ಯೋಜನೆಗೆ ಬಿಡುಗಡೆಯಾದ ಅನುದಾನ ದುರ್ಬಳಕೆ, ದುರುಪಯೋಗ ಹಾಗೂ ನಿಗದಿತ ಪ್ರಮಾಣಕ್ಕಿಂತ ಕಡಿಮೆ ಬಳಕೆ ಆಗದೇ ಇರುವಂತೆ ಸಂಬಂಧಿತ ಇಲಾಖೆಯ ಅಧಿಕಾರಿಗಳು ನೋಡಿಕೊಳ್ಳುವುದು ಅವರ ಜವಾಬ್ದಾರಿಯಾಗಿರುತ್ತದೆ. ಇಲ್ಲದಿದ್ದಲ್ಲಿ ಕ್ರಿಮಿನಲ್ ಪ್ರಕರಣವೆಂದು ಪರಿಗಣಿಸಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು. ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್. ಮಾತನಾಡಿ ಎಸ್‌ಸಿಪಿ/ ಟಿಎಸ್‌ಪಿ ಯೋಜನೆಯಡಿ ಬಿಡುಗಡೆಯಾದ ಅನುದಾನ ಯಾವುದೇ ಕಾರಣಕ್ಕೂ ದುರ್ಬಳಕೆಯಾಗದಂತೆ ನೋಡಿಕೊಳ್ಳಬೇಕು. ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ನಿಗದಿತ ಅವಧಿಯೊಳಗೆ ಒದಗಿಸಲು ಕ್ರಮ ವಹಿಸಬೇಕು ಎಂದರು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹಣಬರಟ್ಟಿ ಎಸ್‌ಸಿಪಿ / ಟಿಎಸ್‌ಪಿ ಯೋಜನೆಯಡಿ ವಿವಿಧ ಇಲಾಖೆಗಳು ಸಾಧಿಸಿದ ಪ್ರಗತಿ ವರದಿಯನ್ನು ಸಭೆಯಲ್ಲಿ ವಿವರಿಸಿದರು. ಈ ಸಂದರ್ಭದಲ್ಲಿ ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್.ನೀಲಗುಂದ, ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಬಿ.ಮಸನಾಯಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪದ್ಮಾವತಿ ಜಿ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ವಿಭೂತಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 