ಹಿರಿಯ ಪತ್ರಕರ್ತ ವಿಜಯೇಂದ್ರ ನಿಧನ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಂತಾಪ

ಬೆಂಗಳೂರು, ಮಾ.12 ಹಿರಿಯ ಪತ್ರಕರ್ತ ಹಾಗೂ ತಮ್ಮ ಮಾಜಿ ಪತ್ರಿಕಾ ಕಾರ್ಯದರ್ಶಿ ವಿಜಯೇಂದ್ರ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್  ಸಂತಾಪ ಸೂಚಿಸಿದ್ದಾರೆ.ಗುರುವಾರ ಬೆಂಗಳೂರಿನ ಹೆಬ್ಬಾಳದ ಕೆಂಪಾಪುರದಲ್ಲಿರುವ ವಿಜಯೇಂದ್ರ ಅವರ ನಿವಾಸಕ್ಕೆ ತೆರಳಿದ ಶಿವಕುಮಾರ್, ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.'ವಿಜಯೇಂದ್ರ ಅವರು ನನ್ನೊಂದಿಗೆ ಹಲವು ವರ್ಷಗಳ ಕಾಲ ಕೆಲಸ ಮಾಡಿದ್ದರು. ಉತ್ತಮ ಸ್ನೇಹಜೀವಿಯಾಗಿದ್ದ ಅವರ ಸಾವಿನ ಸುದ್ದಿ ಆಘಾತ ತಂದಿದೆ. ಅವರ ಕುಟುಂಬ ಸದಸ್ಯರಿಗೆ ಈ ಅಗಲಿಕೆ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಹಾಗೂ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ' ಎಂದು ಶಿವಕುಮಾರ್ ತಮ್ಮ ಶೋಕ ನುಡಿಯಲ್ಲಿ ತಿಳಿಸಿದ್ದಾರೆ.