ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳಿಸಿದ ಎಸ್‌ಎಫ್‌ಐ ಜಿಲ್ಲಾ ಪದಾಧಿಕಾರಿಗಳಾದ ವಿದ್ಯಾರ್ಥಿಗಳಿಗೆ ಸನ್ಮಾನ
SFI District Office bearers felicitated for students who scored excellent marks in the second PUC ex
ಹಾವೇರಿ 15 : ನಗರದ ಬಸ್ ನಿಲ್ದಾಣ ಎದುರಿನ ಭಗತ್ ಆಕಾಡೆಮಿಯಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಹಾವೇರಿ ಜಿಲ್ಲಾ ಸಮಿತಿ ಆಯೋಜಿಸಿದ ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳಿಸಿದ ಎಸ್‌ಎಫ್‌ಐ ಜಿಲ್ಲಾ ಪದಾಧಿಕಾರಿಗಳಾದ ಚೈತ್ರಾ ಕೊರವರ, ಕೃಷ್ಣ ನಾಯ್ಕ, ಮಾರುತಿ ಲಂಕೇರ್ ಅವರಿಗೆ ಸನ್ಮಾನಿಸಿ ಅಭಿನಂದನೆಗಳನ್ನು ಸಲ್ಲಿಸಲಾಯಿತು. ಅಭ್ಯಾಸ ಮತ್ತು ಹೋರಾಟವನ್ನು ರೂಪಿಸಿಕೊಂಡ ಎಸ್‌ಎಫ್‌ಐ ಪದಾಧಿಕಾರಿಗಳು ವಿದ್ಯಾರ್ಥಿಗಳ ಶಿಕ್ಷಣದ ಹಕ್ಕುಗಳಿಗಾಗಿ ಹೋರಾಡುತ್ತಾ, ಅಭ್ಯಾಸ ಮತ್ತು ಹೋರಾಟವನ್ನು ರೂಪಿಸಿಕೊಂಡು, ಹಾಸ್ಟೆಲ್ ಸೌಲಭ್ಯಗಳಿಗೆ, ಸ್ಕಾಲರ್ಶಿಪ್, ಬಸ್ಸಿನ ಸಮಸ್ಯೆಗಳಿಗೆ ಹೋರಾಡಿ ನ್ಯಾಯ ಕೊಡಿಸುವ ಜೊತೆಗೆ 2025-26 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಇತರ ವಿದ್ಯಾರ್ಥಿಗಳಿಗೆ ಮಾದರಿಯಾದ ಎಸ್‌ಎಫ್‌ಐ ಕಾರ್ಯಕರ್ತರಿಗೆ ಜಿಲ್ಲಾ ಸಮಿತಿ ಅಭಿನಂದನೆಗಳನ್ನು ಸಲ್ಲಿಸುತ್ತದೆ ಎಂದು ಜಿಲ್ಲಾಧ್ಯಕ್ಷ ಬಸವರಾಜ ಎಸ್ ಎಂದು ಹೇಳಿದರು.ರಾಣೇಬೆನ್ನೂರ ತಾಲ್ಲೂಕು ಕಾರ್ಯದರ್ಶಿ ಕೃಷ್ಣ ನಾಯ್ಕ ಸಂಜೀವಿನಿ ಪಿಯು ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿ 93.00ಅ ಅಂಕಗಳನ್ನು ಪಡೆದು ಜಿಲ್ಲಾ ಮಟ್ಟದಲ್ಲಿ ಉತ್ತೀರ್ಣನಾಗಿದ್ದಾನೆ.
ಎಸ್‌ಎಫ್‌ಐ ಕಾಲೇಜ್ ಘಟಕ ಅಧ್ಯಕ್ಷೆ ಚೈತ್ರಾ ಕೊರವರ ಜಿ.ಹೆಚ್ ಕಾಲೇಜಿನಲ್ಲಿ ವಿಜ್ಞಾನ ವಿಭಾಗ ವಿದ್ಯಾಭ್ಯಾಸ ಮಾಡಿ 83.66ಅ, ಹಿರೇಕೆರೂರ ತಾಲ್ಲೂಕು ಮುಖಂಡ ಮಾರುತಿ ಲಂಕೇರ್ ಶಿವಪಾರ್ವತಿ ಪಿಯು ಕಾಲೇಜ್ ವಾಣಿಜ್ಯ ವಿಭಾಗದಲ್ಲಿ ವಿದ್ಯಾಭ್ಯಾಸ ಮಾಡಿ 61.33ಅ, ಹಾಸ್ಟೆಲ್ ಘಟಕ ಅಧ್ಯಕ್ಷ ಪಕ್ಕಿರೇಶ್ ಮ್ಯಾಗಳಮನಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಲಾ ವಿಭಾಗದಲ್ಲಿ ವಿದ್ಯಾಭ್ಯಾಸ ಮಾಡಿ 60.00ಅ ಅಂಕಗಳಿಸಿದ ಇವರಿಗೆ ಕರ್ನಾಟಕ ಪ್ರಾಂತ ರೈತ ಸಂಘದ ಹಿರಿಯ ಮುಖಂಡ ಬಿ.ಎಸ್.ಸೊಪ್ಪಿನ್, ರಾಜ್ಯ ಸರ್ಕಾರ ಗ್ಯಾಂರಟಿ ಯೋಜನೆ ಅನುಷ್ಠಾನ ಅಧ್ಯಕ್ಷರಾದ ವಿಜಯಕುಮಾರ್ ದೊಡ್ಡಮನಿ, ಡಿವೈಎಫ್‌ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ, ಕಮ್ಯೂನಿಸ್ಟ್ ಪಕ್ಷ ಹಿರಯ ರುದ್ರ್ಪ ಜಾಬಿನ್ ಸನ್ಮಾನಿಸಿ ಕಿರುಕಾಣಿಕೆ ನೀಡಿ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಿಐಟಿಯು ಸಂಚಾಲಕರಾದ ಎ.ಕೆ.ಹೆಬ್ಬಸೂರ, ವಕೀಲ ಅಣ್ಣಪ್ಪ ಚಿಕ್ಕಣ್ಣನವರ, ಡಿವೈಎಫ್‌ಐ ರಾಜ್ಯ ಸಮಿತಿ ಸದಸ್ಯರಾದ ರೇಣುಕಾ ಕಹಾರ, ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್, ಬಿಎಸ್ಪಿ ಜಿಲ್ಲಾಧ್ಯಕ್ಷ ಎಮ್.ಕೆ.ಮಕಬೂಲ್, ಚುಟುಕು ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಗಂಗಯ್ಯ ಕುಲಕರ್ಣಿ, ಹಾಸ್ಟೆಲ್ ಹೊರಗುತ್ತಿಗೆ ನೌಕರ ಸಂಘದ ಶಾಂತಕ್ಕ ಗಡ್ಡಿಯವರ, ಗ್ರಾಮ ಪಂಚಾಯತಿ ನೌಕರ ಸಂಘದ ಮುಖಂಡ ಜಗದೀಶ್ ಕೋಟಿ, ಡಿಹೆಚ್‌ಎಸ್ ಮುಖಂಡರಾದ ವೀರಣ್ಣ ಗಡ್ಡಿಯವರ, ಹಮಾಲಿ ಕಾರ್ಮಿಕ ಮುಖಂಡರಾದ ಹುಸೇನ್ ಸಾಬ್, ಎಸ್‌ಎಫ್‌ಐ ಮುಖಂಡರಾದ ಅರುಣ್ ಕುಮಾರ್ ನಾಗವತ್, ನಾಗರಾಜ ಜಿ ಕೆ, ಧನುಷ್ ದೊಡ್ಡಮನಿ, ನಿಂಗರಾಜ ಪೂಜಾರ್, ವಾಸು ಮಹಾಕಾಳಿ, ವಿಠ್ಠಲ್ ಗೌಡ, ಅನ್ವಿಕಾ ಆರಿ್ಬ, ಖುಷಿ ಕುಲಕರ್ಣಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 