ವಿದ್ಯಾರ್ಥಿ ಹಕ್ಕುಗಳಿಗೆ ಹೋರಾಡುತ್ತಾ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳಿಸಿದ ಎಸ್‌ಎಫ್‌ಐ ಕಾರ್ಯಕರ್ತರು: ಜಿಲ್ಲಾ ಸಮಿತಿ ಅಭಿನಂದನೆ
SFI activists who scored excellent marks in PUC exams fighting for student rights: District Committe
ಹಾವೇರಿ 09 : ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಹಾವೇರಿ ಜಿಲ್ಲಾ ಸಮಿತಿ ಪದಾಧಿಕಾರಿಗಳು ವಿದ್ಯಾರ್ಥಿಗಳ ಶಿಕ್ಷಣದ ಹಕ್ಕುಗಳಿಗಾಗಿ ಹೋರಾಡುತ್ತಾ, ಅಭ್ಯಾಸ ಮತ್ತು ಹೋರಾಟವನ್ನು ರೂಪಿಸಿಕೊಂಡು, ಹಾಸ್ಟೆಲ್ ಸೌಲಭ್ಯಗಳಿಗೆ, ಸ್ಕಾಲರ್ಶಿಪ್, ಬಸ್ಸಿನ ಸಮಸ್ಯೆಗಳಿಗೆ ಹೋರಾಡಿ ನ್ಯಾಯ ಕೊಡಿಸುವ ಜೊತೆಗೆ 2025-26 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಇತರ ವಿದ್ಯಾರ್ಥಿಗಳಿಗೆ ಮಾದರಿಯಾದ ಎಸ್‌ಎಫ್‌ಐ ಕಾರ್ಯಕರ್ತರಿಗೆ ಜಿಲ್ಲಾ ಸಮಿತಿ ಅಭಿನಂದನೆಗಳನ್ನು ಸಲ್ಲಿಸುತ್ತದೆ ಎಂದು ಜಿಲ್ಲಾಧ್ಯಕ್ಷ ಬಸವರಾಜ ಎಸ್ ಪತ್ರಿಕಾ ಪ್ರಕಟಣೆ ಹೇಳಿಕೆ ನೀಡಿದರು.
ರಾಣೇಬೆನ್ನೂರ ತಾಲ್ಲೂಕು ಕಾರ್ಯದರ್ಶಿ ಕೃಷ್ಣ ನಾಯ್ಕ ಸಂಜೀವಿನಿ ಪಿಯು ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿ 93.00ಅ ಅಂಕಗಳನ್ನು ಪಡೆದು ಜಿಲ್ಲಾ ಮಟ್ಟದಲ್ಲಿ ಉತ್ತೀರ್ಣನಾಗಿದ್ದಾನೆ. ಎಸ್‌ಎಫ್‌ಐ ಕಾಲೇಜ್ ಘಟಕ ಅಧ್ಯಕ್ಷೆ ಚೈತ್ರಾ ಕೊರವರ ಜಿ.ಹೆಚ್ ಕಾಲೇಜಿನಲ್ಲಿ ವಿಜ್ಞಾನ ವಿಭಾಗ ವಿದ್ಯಾಭ್ಯಾಸ ಮಾಡಿ 83.66ಅ, ಹಿರೇಕೆರೂರ ತಾಲ್ಲೂಕು ಮುಖಂಡ ಮಾರುತಿ ಲಂಕೇರ್ ಶಿವಪಾರ್ವತಿ ಪಿಯು ಕಾಲೇಜ್ ವಾಣಿಜ್ಯ ವಿಭಾಗದಲ್ಲಿ ವಿದ್ಯಾಭ್ಯಾಸ ಮಾಡಿ 61.33ಅ, ಹಾಸ್ಟೆಲ್ ಘಟಕ ಅಧ್ಯಕ್ಷ ಪಕ್ಕಿರೇಶ್ ಮ್ಯಾಗಳಮನಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಲಾ ವಿಭಾಗದಲ್ಲಿ ವಿದ್ಯಾಭ್ಯಾಸ ಮಾಡಿ 60.00ಅ ಅಂಕಗಳಿಸಿದ್ದಾರೆ ಎಂದು ಎಸ್‌ಎಫ್‌ಐ ಜಿಲ್ಲಾ ಮುಖಂಡ ಅರುಣ್ ನಾಗವತ್ ತಿಳಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 