ರಾಜ್ಯ ಬಜೆಟ್ ನಲ್ಲಿ ಹಾಸ್ಟೆಲ್ ವಿದ್ಯಾರ್ಥಿಗಳ ಆಹಾರ ಭತ್ಯೆಯನ್ನು 4.500ರೂ ಏರಿಕೆ ಮಾಡಲು ಆಗ್ರಹಿಸಿ ಎಸ್ ಎಫ್ ಐ ಮನವಿ
SFI appeals to increase food allowance of hostel students by Rs 4,500 in state budget
ರಾಣೆಬೆನ್ನೂರು: ರಾಜ್ಯ ಬಜೆಟ್ ನಲ್ಲಿ ಹಾಸ್ಟೆಲ್ ವಿದ್ಯಾರ್ಥಿಗಳ ಆಹಾರ ಭತ್ಯೆಯನ್ನು 4.500ರೂ ಏರಿಕೆ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಬಜೆಟ್ ನ 30ಅ ಹಣವನ್ನು ಮೀಸಲಿಡಲು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ರಾಜ್ಯಾದ್ಯಂತ ಹಾಸ್ಟೆಲ್ ಎದುರು ಪ್ರತಿಭಟನೆಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಎಸ್ ಆರ್ ಕೆ ನಗರದ ಮೆಟ್ರಿಕ್ ನಂತರದ ಬಾಲಕಿಯರ ನಿಲಯದ ನಿಲಯ ಪಾಲಕ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.ಈ ಸಂದರ್ಭದಲ್ಲಿ ಎಸ್‌ಎಫ್‌ಐ ಹಾಸ್ಟೆಲ್ ವಿದ್ಯಾರ್ಥಿಗಳ ರಾಜ್ಯ ಸಂಚಾಲಕ ಅರುಣ್ ನಾಗವತ್ ಮಾತನಾಡಿ, ರಾಜ್ಯದ ಶಿಕ್ಷಣ ವ್ಯವಸ್ಥೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಮಾರ್ಚ್ 06 ರಂದು ಮಂಡನೆಯಾಗಲಿರುವ ರಾಜ್ಯ ಬಜೆಟ್ ನಲ್ಲಿ ವಿದ್ಯಾರ್ಥಿಗಳ ಬೇಡಿಕೆಗಳನ್ನು ಈಡೇರಿಸಬೇಕು.
ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಶಿಕ್ಷಣತಜ್ಞರು ಕೊಠಾರಿ ಆಯೋಗದ ಶಿಫಾರಸಿನಂತೆ ರಾಜ್ಯಸರ್ಕಾರ ಬಜೆಟ್ ನಲ್ಲಿ ಕನಿಷ್ಠ 30ಅ ಹಣ ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡಬೇಕು ಎಂದು ಹಲವು ವರ್ಷಗಳಿಂದ ಹೋರಾಟ ಮುಂದುವರಿಯುತ್ತಿದ್ದರು ಶಿಕ್ಷಣ ಕ್ಷೇತ್ರಕ್ಕೆ ಪ್ರತಿ ಬಜೆಟ್ ನಲ್ಲಿ ಹಣ ಕಡಿತ ಮಾಡಿ ಸರಾಸರಿ ಕೇವಲ 11ಅ ಹಣ ನೀಡುತ್ತಿರುವುದು ಖಂಡನೀಯ. ಇಡೀ ದೇಶದಲ್ಲಿ ಉತ್ತಮ ಗುಣಮಟ್ಟದ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಹೊಂದಿರುವ ಕೇರಳ ರಾಜ್ಯ 27ಅ ಹಣ ನೀಡುತ್ತಿರುವುದು ಶ್ಲಾಘನೀಯ. ಸರ್ಕಾರಿ ಶಾಲಾ ಕಾಲೇಜು ಹಾಸ್ಟೆಲ್, ವಿಶ್ವ ವಿದ್ಯಾಲಯಗಳ ಸಮಗ್ರ ಅಭಿವೃದ್ಧಿಗಾಗಿ ಕನಿಷ್ಠ 30ಅ ಹಣವನ್ನು ಈ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡಬೇಕು. ಆ ಮೂಲಕ ಗ್ಯಾರಂಟಿ ಪಟ್ಟಿಗೆ ಶಿಕ್ಷಣ ಸೇರಿಸಬೇಕು.ರಾಜ್ಯದಲ್ಲಿ ಹಾಸ್ಟೆಲ್ಗಳಲ್ಲಿ ಅರ್ಜಿ ಸಲ್ಲಿಸುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗಿದೆ. ಹಾಸ್ಟೆಲ್ಗೆ ಅರ್ಜಿ ಸಲ್ಲಿಸುತ್ತಿರುವವರು ಗ್ರಾಮೀಣ ಪ್ರದೇಶದ ರೈತ, ಕೂಲಿ ಕಾರ್ಮಿಕ, ದಲಿತ, ಹಿಂದುಳಿದ ವರ್ಗದ ಬಡ ವಿದ್ಯಾರ್ಥಿಗಳ.
ಹಾಸ್ಟೆಲ್ ಬಯಸಿ ಅರ್ಜಿ ಸಲ್ಲಿಸಿದರೆ ಪ್ರವೇಶ ಸಿಗುತ್ತಿಲ್ಲ. ಆದ್ದರಿಂದ ಹಾಸ್ಟೆಲ್ಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಖಾಲಿ ಇರುವ ವಾರ್ಡನ್, ಪ್ರಾಂಶುಪಾಲರು, ಸಿಬ್ಬಂದಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ ಸೇರಿದಂತೆ ಆರೋಗ್ಯ ಭದ್ರತೆ, ಗ್ರಂಥಾಲಯ, ಕ್ರೀಡಾ ಸಾಮಗ್ರಿಗಳು ಹಾಗೂ ಬಹುತೇಕ ಹಾಸ್ಟೆಲ್ ಗಳು ಖಾಸಗಿ ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿದ್ದು ಇಲ್ಲಿ ಕನಿಷ್ಠ ಮೂಲ ಸೌಕರ್ಯ ಒದಗಿಸಲು ಬಜೆಟ್ ನಲ್ಲಿ ಹಣ ಮೀಸಲಿಡಬೇಕು. ಹಾಸ್ಟೆಲ್ ಬಯಸಿ ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೂ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಬೇಕು. ಹಾಸ್ಟೆಲ್ ವಿದ್ಯಾರ್ಥಿಗಳ ಮಾಸಿಕ ಆಹಾರ ಭತ್ಯೆಯನ್ನು ಕನಿಷ್ಠ 4500 ರೂ ಗಳಿಗೆ ಹೆಚ್ಚಿಸಬೇಕು : ರಾಜ್ಯದಲ್ಲಿ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಪ್ರತಿದಿನದ ಮೂರೊತ್ತಿನ ಊಟಕ್ಕೆ ಕೇವಲ 50-60ರೂ ಗಳಂತೆ ತಿಂಗಳಿಗೆ 1850 ರಿಂದ 1750 ರೂಗಳನ್ನು ಮಾತ್ರ ನೀಡಲಾಗುತ್ತಿದೆ. ಅಗತ್ಯ ವಸ್ತುಗಳ ಬೆಲೆಗಳು ವಿಪರೀತವಾಗಿ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸರ್ಕಾರ ನೀಡುತ್ತಿರುವ ಹಣದಲ್ಲಿ ಗುಣಮಟ್ಟದ ಪೌಷ್ಠಿಕ ಆಹಾರ ಒದಗಿಸಲಾಗುತ್ತಿಲ್ಲ. ಎಲ್ಲಾ ಆಹಾರ ಪದಾರ್ಥಗಳು, ಗ್ಯಾಸ್, ತರಕಾರಿ ಬೆಲೆ ಏರಿಕೆ ಆಗಿದೆ. ಆದರೂ ಹಾಸ್ಟೆಲ್ ವಿದ್ಯಾರ್ಥಿಗಳ ಆಹಾರ ಭತ್ಯೆಯನ್ನು ರಾಜ್ಯ ಸರ್ಕಾರ ಹೆಚ್ಚಿಸಿಲ್ಲ. ಇದರಿಂದ ರಾಜ್ಯದ ವಿದ್ಯಾರ್ಥಿಗಳು ಪೌಷ್ಠಿಕ ಆಹಾರದಿಂದ ವಂಚಿತರಾಗುತ್ತಿದ್ದಾರೆ. ಅಪೌಷ್ಠಿಕತೆಯಿಂದ ಬಳಲುತ್ತಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 