ಹಾವೇರಿ ವಿವಿ ವಿದ್ಯಾರ್ಥಿಗಳಿಗೆ ಸಮರ್ಕ ಬಸ್ ಸೇವೆಗೆ ಎಸ್ಎಫ್ಐ ಆಗ್ರಹ
SFI demands adequate bus service for Haveri University students
ಹಾವೇರಿ, 22: ಹಾವೇರಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಸಮರ್ಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಹಾವೇರಿ ವಿಶ್ವವಿದ್ಯಾಲಯ ಘಟಕದ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದರು.
ಕೆಎಸ್ಆರಿ್ಟಸಿ ಘಟಕ ವ್ಯವಸ್ಥಾಪಕರಿಗೆ ಬಸ್ ನಿಲ್ದಾಣ ನಿಯಂತ್ರಣಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದ ವಿದ್ಯಾರ್ಥಿಗಳು, ವಿಶ್ವವಿದ್ಯಾಲಯ ಆರಂಭವಾಗಿ ಒಂದು ತಿಂಗಳು ಕಳೆದರೂ ಸಾರಿಗೆ ಸಮಸ್ಯೆ ಪರಿಹಾರವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಎಸ್ಎಫ್ಐ ಘಟಕದ ಅಧ್ಯಕ್ಷೆ ಪೂಜಾ ಬಾರ್ಕಿ ಮಾತನಾಡಿ, ವಿವಿಧ ಗ್ರಾಮೀಣ ಪ್ರದೇಶಗಳಿಂದ ನೂರಾರು ವಿದ್ಯಾರ್ಥಿಗಳು ಜಿಲ್ಲಾ ಕೇಂದ್ರ ಹಾಗೂ ವಿಶ್ವವಿದ್ಯಾಲಯಕ್ಕೆ ಆಗಮಿಸುತ್ತಿದ್ದು, ಸಮರ್ಕ ಬಸ್ ಸೌಲಭ್ಯವಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ಬೆಳಗ್ಗೆ ಮತ್ತು ಮಧ್ಯಾಹ್ನ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಹೆಚ್ಚುವರಿ ಬಸ್ಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.
ಎಸ್ಎಫ್ಐ ಜಿಲ್ಲಾಧ್ಯಕ್ಷ ಅರುಣ್ ಕುಮಾರ್ ನಾಗವತ್ ಮಾತನಾಡಿ, ಗ್ರಾಮೀಣ ಪ್ರದೇಶಗಳಿಂದ ಬಸ್ ನಿಲ್ದಾಣಕ್ಕೆ ಬರುವ ವಿದ್ಯಾರ್ಥಿಗಳು ಅಲ್ಲಿಂದ ಸುಮಾರು 8 ಕಿ.ಮೀ. ದೂರದಲ್ಲಿರುವ ವಿಶ್ವವಿದ್ಯಾಲಯಕ್ಕೆ ತೆರಳಲು ಪರದಾಡುವಂತಾಗಿದೆ. ಹಾವೇರಿ ವಿಶ್ವವಿದ್ಯಾಲಯ, ನಂ.2 ಹಾಸ್ಟೆಲ್, ಜಿ.ಎಚ್. ಕಾಲೇಜು ರೈಲು ನಿಲ್ದಾಣ, ಸರ್ಕಾರಿ ಆಸ್ಪತ್ರೆ, ಬಸ್ ನಿಲ್ದಾಣ, ಶ್ರೀಕಂಠಪ್ಪ ಬಡಾವಣೆ, ಆಲದಕಟ್ಟಿ ಹಾಗೂ ಹೊಸಹಳ್ಳಿ ಮಾರ್ಗದಲ್ಲಿ ಸಮರ್ಕ ಬಸ್ ಸೇವೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ವಿದ್ಯಾರ್ಥಿಗಳ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಹೆಚ್ಚುವರಿ ಬಸ್ಗಳನ್ನು ಆರಂಭಿಸದಿದ್ದರೆ ಪ್ರತಿಭಟನೆ ತೀವ್ರಗೊಳಿಸುವುದಾಗಿ ಎಸ್ಎಫ್ಐ ಎಚ್ಚರಿಸಿತು. ಪ್ರತಿಭಟನೆಯಲ್ಲಿ ಘಟಕದ ಉಪಾಧ್ಯಕ್ಷ ಪರಶುರಾಮ ಎಸ್. ಮುಂತಾದವರು ಹಾಗೂ ಹಲವು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 