ಹಾವೇರಿ ವಿವಿಗೆ ಬಸ್ ಸೌಲಭ್ಯ ಕಲ್ಪಿಸಲು ಎಸ್‌ಎಫ್‌ಐ ಆಗ್ರಹ

ಹಾವೇರಿ ವಿವಿಗೆ ಬಸ್ ಸೌಲಭ್ಯ ಕಲ್ಪಿಸಲು ಎಸ್‌ಎಫ್‌ಐ ಆಗ್ರಹ SFI demands bus facilities for Haveri University

 ಹಾವೇರಿ 20: ವಿದ್ಯಾರ್ಥಿಗಳ ಪರೀಕ್ಷಾ ಅವಧಿಯನ್ನು ಗಮನದಲ್ಲಿಟ್ಟುಕೊಂಡು ಹಾವೇರಿ ವಿಶ್ವವಿದ್ಯಾಲಯಕ್ಕೆ ಹಾಗೂ ನಗರ ಸಾರಿಗೆ ಬಸ್ ಸೇವೆಯನ್ನು ತಕ್ಷಣ ಆರಂಭಿಸಬೇಕು. ಜೊತೆಗೆ ಗ್ರಾಮೀಣ ಪ್ರದೇಶಗಳಿಗೆ ಸಮರ​‍್ಕ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಹಾವೇರಿ ವಿಶ್ವವಿದ್ಯಾಲಯ ಘಟಕದ ಕಾರ್ಯಕರ್ತರು ಕೆಎಸ್‌ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಅಶೋಕ್ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.  

ಜಿಲ್ಲೆಯ ವಿವಿಧ ಗ್ರಾಮೀಣ ಭಾಗಗಳಿಂದ ನೂರಾರು ವಿದ್ಯಾರ್ಥಿಗಳು ಜಿಲ್ಲಾಕೇಂದ್ರ ಹಾಗೂ ಹಾವೇರಿ ವಿಶ್ವವಿದ್ಯಾಲಯಕ್ಕೆ ವಿದ್ಯಾಭ್ಯಾಸಕ್ಕಾಗಿ ಆಗಮಿಸುತ್ತಿದ್ದಾರೆ. ಆದರೆ ಸಮರ​‍್ಕ ಬಸ್ ವ್ಯವಸ್ಥೆ ಇಲ್ಲದ ಕಾರಣ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಕುರಿತು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ಎಸ್‌ಎಫ್‌ಐ ಖಂಡಿಸಿದೆ.  

ಜುಲೈ 20ರಿಂದ ವಿಶ್ವವಿದ್ಯಾಲಯದ ಪರೀಕ್ಷೆಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರ ಅನುಕೂಲಕ್ಕಾಗಿ ಬೆಳಿಗ್ಗೆ ಮತ್ತು ಮಧ್ಯಾಹ್ನ ಹೆಚ್ಚುವರಿ ಬಸ್ಗಳನ್ನು ಓಡಿಸಬೇಕು ಎಂದು ಒತ್ತಾಯಿಸಲಾಯಿತು.  

ಗ್ರಾಮೀಣ ಪ್ರದೇಶಗಳ ಅನೇಕ ಮಾರ್ಗಗಳಲ್ಲಿ ಸಮರ​‍್ಕ ಬಸ್ ಸೇವೆ ಇಲ್ಲದಿರುವುದರಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಅಲ್ಲದೆ ಜಿಲ್ಲಾಕೇಂದ್ರದ ಬಸ್ ನಿಲ್ದಾಣದಿಂದ ವಿಶ್ವವಿದ್ಯಾಲಯ, ೂದಿ್ಘ್ಲೈಹಿ2 ವಿದ್ಯಾರ್ಥಿನಿಲಯ, ಶ್ರೀಕಾಂತಪ್ಪ ಬಡಾವಣೆ ವಿದ್ಯಾರ್ಥಿನಿಲಯ ಸೇರಿದಂತೆ ಪ್ರಮುಖ ಸ್ಥಳಗಳಿಗೆ ನಗರ ಸಾರಿಗೆ ಬಸ್ ಸೇವೆಯನ್ನು ಆರಂಭಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.  

ಈ ಸಂದರ್ಭದಲ್ಲಿ ಎಸ್‌ಎಫ್‌ಐ ಜಿಲ್ಲಾ ಅಧ್ಯಕ್ಷ ಬಸವರಾಜ ಎಸ್, ಹಾವೇರಿ ವಿಶ್ವವಿದ್ಯಾಲಯ ಘಟಕದ ಅಧ್ಯಕ್ಷೆ ಪೂಜಾ ಬಾಕಿ, ಕಾರ್ಯದರ್ಶಿ ಶಂಭುಲಿಂಗ ಸವಸವದತ್ತಿ, ಉಪಾಧ್ಯಕ್ಷ ಪರಶುರಾಮ, ಮುಖಂಡರಾದ ಅರುಣ್ ನಾಗವತ್, ಶಿವೂರ್, ಭುವನ್ ಬಿ., ರೋಹಿತ್, ಶೇಖರಗೌಡ, ಮಾಲತೇಶ್, ಶರತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.