ಸರ್ಕಾರಿ ಎಸ್ಸಿ, ಎಸ್ಟಿ ಪದವಿ ಕಾಲೇಜ್ ವಸತಿ ಸೌಲಭ್ಯ ಕಲ್ಪಿಸಲು ಎಸ್‌ಎಫ್‌ಐ ಆಗ್ರಹ
SFI demands government SC, ST degree colleges to provide residential facilities
ಹಾವೇರಿ 31: ಸರ್ಕಾರಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಸತಿಯುತ ಪ್ರಥಮ ದರ್ಜೆ ಕಾಲೇಜ್ ಪ್ರಾರಂಭವಾಗಿ ಏಳು ವರ್ಷಗಳು ಕಳೆದರು ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯದಿಂದ ವಂಚಿತರಾಗಿ ಮಾಡಿರುವುದನ್ನು ವಿರೋಧಿಸಿ, ನಿರ್ಮಾಣವಾಗಿರುವ ಸ್ವಂತ ಕಟ್ಟಡದಲ್ಲಿಯೇ ವಸತಿ ಸೌಲಭ್ಯ ಪ್ರಾರಂಭಿಸಬೇಕೆಂದು ಒತ್ತಾಯಿಸಿ ಖಾಲಿ ಇರುವ ಹುದ್ದೆಗಳಾದ ವಾರ್ಡನ್, ಬೋಧಕ ಹಾಗೂ ಬೋಧಕೆತರ ಸಿಬ್ಬಂದಿ ನೇಮಕಾತಿ, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಸಮಯಕ್ಕೆ ಸರಿಯಾಗಿ ಹೆಚ್ಚುವರಿ ಬಸ್ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳ ಜೊತೆಗೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕರ್ನಾಟಕ ರಾಜ್ಯ ಸಮಿತಿ ನೀಡಿರುವ ರಾಜ್ಯಾದ್ಯಂತ ಹೋರಾಟದ ಕರೆಯ ಭಾಗವಾಗಿ ನೂರಾರು ವಿದ್ಯಾರ್ಥಿಗಳು ದಿನಾಂಕ: 01.09.2025 ಸೋಮವಾರ ರಂದು ತಾಲ್ಲೂಕಿನ ಕಳ್ಳಿಹಾಳ್ಳ ಗ್ರಾಮದಲ್ಲಿರುವ ಸರ್ಕಾರಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಸತಿಯುತ ಪ್ರಥಮ ದರ್ಜೆ ಕಾಲೇಜ್ ಎದುರು ಪ್ರತಿಭಟನಾ ಧರಣಿ ನಡೆಸಿ ಪ್ರಾಂಶುಪಾಲರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವುದೆಂದು ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್, ಮುಖಂಡರಾದ ಅರುಣ್ ಕುಮಾರ್ ನಾಗವತ್, ಸುನೀಲ್ ಕುಮಾರ್ ಎಲ್, ಕಾಲೇಜ್ ಘಟಕದ ಅಧ್ಯಕ್ಷೆ ಚೈತ್ರ ಕೊರವರ, ಕಾರ್ಯದರ್ಶಿ ಗಂಗಾ ಯಲ್ಲಾಪುರ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 