ಹಾವೇರಿ ವಿಶ್ವವಿದ್ಯಾಲಯದ ಮೂಲಸೌಕರ್ಯ ಅಭಿವೃದ್ಧಿಗೆ ಎಸ್‌ಎಫ್‌ಐ ಒತ್ತಾಯ
SFI demands infrastructure development at Haveri University
ಹಾವೇರಿ 15 : ಹಾವೇರಿ ವಿಶ್ವವಿದ್ಯಾಲಯದ ಸರ್ವಾಂಗೀಣ ಅಭಿವೃದ್ಧಿಗಾಗಿ, ವಿಶ್ವವಿದ್ಯಾಲಯದ ಮೂಲಭೂತ ಸೌಕರ್ಯಗಳ ಪರಿಹಾರಕ್ಕಾಗಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ವಿವಿ ಘಟಕ ಪ್ರಥಮ ಸಮ್ಮೇಳನದ ಲೋಗೋವನ್ನು ವಿವಿ ಕ್ಯಾಂಪಸ್ ನಲ್ಲಿ ಬಿಡುಗಡೆ ಮಾಡಿ ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಮಾತನಾಡಿದರು. ಹಾವೇರಿ ವಿಶ್ವವಿದ್ಯಾಲಯದ ಸ್ಥಾಪನೆಗೊಂಡ ಮೂರು ವರ್ಷಗಳು ಕಳೆದರೂ ಮೂಲಭೂತ ಸೌಕರ್ಯಗಳ ಕೊರತೆಗಳ ಮಧ್ಯೆ ಬಳಲುತ್ತಿದೆ. ಅನುದಾನ ನೀಡಿ ಅಭಿವೃದ್ಧಿ ಮಾಡಬೇಕಿದ ಸರ್ಕಾರವೇ ವಿವಿ ಮುಚ್ಚುವ ಹುನ್ನಾರು ನಡೆಸಿತ್ತು. ಈ ಹುನ್ನಾರು ನೀತಿಯನ್ನು ಖಂಡಿಸಿ ಎಸ್‌ಎಫ್‌ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು, ಶಿಕ್ಷಣ ಪ್ರೇಮಿಗಳು ಪ್ರಗತಿಪರ, ಸಮಾನಮನಸ್ಕ ಸಂಘಟನೆಗಳು ಬೀದಿಗಿಳಿದು ಹೋರಾಟ ಮಾಡಿ ಉಳಿಸಿಕೊಳ್ಳಲಾಗಿದೆ. "ಸರ್ವರಿಗೂ ಶಿಕ್ಷಣ ಮತ್ತು ಉದ್ಯೋಗದ ಮೂಲಭೂತ ಹಕ್ಕಿಗಾಗಿ" ನಿರಂತರ ಚಳುವಳಿಯನ್ನು ಸಂಘಟಿಸುತ್ತ ಬರುತ್ತಿದೆ. ದೇಶದ ಐಕ್ಯತೆ, ಸಮಗ್ರತೆ ಹಾಗೂ ಸೌಹಾರ್ದತೆಯನ್ನು ಗಟ್ಟಿಗೊಳಿಸುವುದರ ಜೊತೆಗೆ ಭ್ರಷ್ಟಾಚಾರ, ಅನ್ಯಾಯವನ್ನು ವಿರೋಧಿಸಿ, ವಿದ್ಯಾರ್ಥಿಗಳು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ನಿರಂತರ ಚಳುವಳಿಯನ್ನು ವಿಶ್ವವಿದ್ಯಾಲಯದಲ್ಲಿ ಕಾರ್ಯಕ್ರಮಗಳನ್ನು ಮಾಡುತ್ತದೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 