ನೀಟ್ ಪ್ರಶ್ನೆಪತ್ರಿಕೆ ಹಗರಣ ಖಂಡಿಸಿ ಎಸ್‌ಎಫ್‌ಐ ಪ್ರತಿಭಟನೆ

ನೀಟ್ ಪ್ರಶ್ನೆಪತ್ರಿಕೆ ಹಗರಣ ಖಂಡಿಸಿ ಎಸ್‌ಎಫ್‌ಐ ಪ್ರತಿಭಟನೆ  SFI protests against NEET question paper scandal

ಹಾವೇರಿ 23: ನೀಟ್  ಪ್ರಶ್ನೆಪತ್ರಿಕೆ ಹಗರಣವನ್ನು ಖಂಡಿಸಿ ಹಾಗೂ ಹೋರಾಟ ನಡೆಸಿದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಕ್ರಮವನ್ನು ವಿರೋಧಿಸಿ, ಸ್ಟೂಡೆಂಟ್ಸ್‌ ಫೆಡರೇಷನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಹಾವೇರಿ ವಿಶ್ವವಿದ್ಯಾಲಯ ಘಟಕದ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು. 

ಪ್ರತಿಭಟನಾಕಾರರು ನೀಟ್ ಹಗರಣದ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಹಾಗೂ ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಕ್ರಮವನ್ನು ಖಂಡಿಸಿದರು.  

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಸ್‌ಎಫ್‌ಐ ವಿಶ್ವವಿದ್ಯಾಲಯ ಘಟಕದ ಅಧ್ಯಕ್ಷೆ ಪೂಜಾ ಬಾಕಿ, ದೇಶಾದ್ಯಂತ ನೀಟ್ ಹಗರಣದ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ಸಮರ​‍್ಕವಾಗಿ ಸ್ಪಂದಿಸಿಲ್ಲ ಎಂದು ಆರೋಪಿಸಿದರು.

ಪ್ರಶ್ನೆಪತ್ರಿಕೆ ಸೋರಿಕೆಯಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಿದ್ದು, ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಕ್ರಮ ಖಂಡನೀಯವಾಗಿದೆ ಎಂದು ಹೇಳಿದರು. ಪ್ರತಿಭಟನಾಕಾರರ ವಿರುದ್ಧ ನೀಡಬೇಕು ಎಂದು ಆಗ್ರಹಿಸಿದರು.  

ಎಸ್‌ಎಫ್‌ಐ ವಿಶ್ವವಿದ್ಯಾಲಯ ಘಟಕದ ಕಾರ್ಯದರ್ಶಿ ಶಂಭುಲಿಂಗ ಸವದತ್ತಿ ಮಾತನಾಡಿ, ದೆಹಲಿಯ ಜಂತರ್ ಮಂತರ್ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಕ್ರಮ ಖಂಡನೀಯವಾಗಿದೆ ಎಂದು ಹೇಳಿದರು. ಪ್ರತಿಭಟನಾಕಾರರ ವಿರುದ್ಧ ಬಲಪ್ರಯೋಗ ನಡೆಸಿರುವುದನ್ನು ತೀವ್ರವಾಗಿ ವಿರೋಧಿಸಿದರು.  

ಉಪಾಧ್ಯಕ್ಷ ಬಸವರಾಜ ಎಸ್‌. ಮಾತನಾಡಿ, ನೀಟ್ ಪರೀಕ್ಷೆಯಲ್ಲಿ ನಡೆದ ಅಕ್ರಮಗಳಿಗೆ ಹೊಣೆಗಾರರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ವಿಶ್ವಾಸ ಮರುಸ್ಥಾಪಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.  

ಪ್ರತಿಭಟನೆಯಲ್ಲಿ ಎಸ್‌ಎಫ್‌ಐ ಹಾವೇರಿ ವಿಶ್ವವಿದ್ಯಾಲಯ ಘಟಕದ ಉಪಾಧ್ಯಕ್ಷ ಪರಶುರಾಮ ಎಸ್‌., ಕಾಂತೇಶ್ ಹಳ್ಳೇರ್, ಸಹ ಕಾರ್ಯದರ್ಶಿ ಪ್ರವೀಣ್ ಮಟ್ಟೇರ, ಲೋಕೇಶ್ ಕೆಂಚಣ್ಣನವರ, ಶರಣ ಮಲ್ಲಕ್ಕನವರ, ಶಶಾಂಕ್ ಭೋಗಾವಿ, ಸಂತೋಷ್, ನಾಗರಾಜ್, ದೇವರಾಜ್, ಕಿರಣ್, ಸತೀಶ್, ಶಿವರಾಜ್ ಲಮಾಣಿ, ಮಹಾಂತೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.