ಎಸ್ಐಆರ್ ಜಾಗೃತಿ ಕಾರ್ಯಕ್ರಮ: ಮತದಾರರ ಹಕ್ಕುಗಳ ರಕ್ಷಣೆಗೆ ಕರೆ
SIR Awareness Program: Call to protect voter rights
ಲೋಕದರ್ಶನ ವರದಿ
ತಿಕೋಟಾ 28: ವಿಜಯಪುರ ಜಿಲ್ಲೆಯ ತಿಕೋಟಾದಲ್ಲಿ ಅಂಜುಮನ್ ಇಸ್ಲಾಂ ಕಮಿಟಿ ಹಾಗೂ ದಲಿತ ವಿದ್ಯಾರ್ಥಿ ಪರಿಷತ್ ಸಂಯುಕ್ತ ಆಶ್ರಯದಲ್ಲಿ ಎಸ್ಐಆರ್ ಜಾಗೃತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ, ಮತದಾನದ ಹಕ್ಕು ಪ್ರತಿಯೊಬ್ಬ ನಾಗರಿಕನ ಅಮೂಲ್ಯ ಹಕ್ಕಾಗಿದ್ದು, ಎಸ್ಐಆರ್ ಪ್ರಕ್ರಿಯೆಯಲ್ಲಿ ಎಲ್ಲರೂ ಜಾಗೃತರಾಗಿ ಭಾಗವಹಿಸಬೇಕು ಎಂದು ಕರೆ ನೀಡಿದರು.
ಬೆಂಗಳೂರುದಿಂದ ಆಗಮಿಸಿದ್ದ ಎಸ್ಐಆರ್ ಅಭಿಯಾನದ ಕಾರ್ಯಕರ್ತ ಮೊಹಮ್ಮದ್ ಇಸ್ಮಾಯಿಲ್, ಎಸ್ಐಆರ್ ಅರ್ಜಿ ಭರ್ತಿ ವಿಧಾನ, ಅಗತ್ಯ ದಾಖಲೆಗಳು ಹಾಗೂ ಚುನಾವಣಾ ಆಯೋಗದ ಪ್ರಕ್ರಿಯೆಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್.ಎಂ. ಪಾಟೀಲ್ ಗಣಿಹಾರ, ಮತದಾರರ ಹಕ್ಕುಗಳ ರಕ್ಷಣೆಗೆ ಇಂತಹ ಜಾಗೃತಿ ಕಾರ್ಯಕ್ರಮಗಳು ಗ್ರಾಮ ಮಟ್ಟದಲ್ಲೂ ಅಗತ್ಯವೆಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 