ಎಸ್‌ಐಆರ್ ಜಾಗೃತಿ ಕಾರ್ಯಕ್ರಮ: ಮತದಾರರ ಹಕ್ಕುಗಳ ರಕ್ಷಣೆಗೆ ಕರೆ

ಎಸ್‌ಐಆರ್ ಜಾಗೃತಿ ಕಾರ್ಯಕ್ರಮ: ಮತದಾರರ ಹಕ್ಕುಗಳ ರಕ್ಷಣೆಗೆ ಕರೆ SIR Awareness Program: Call to protect voter rights

ಲೋಕದರ್ಶನ ವರದಿ 

 ತಿಕೋಟಾ 28: ವಿಜಯಪುರ ಜಿಲ್ಲೆಯ ತಿಕೋಟಾದಲ್ಲಿ ಅಂಜುಮನ್ ಇಸ್ಲಾಂ ಕಮಿಟಿ ಹಾಗೂ ದಲಿತ ವಿದ್ಯಾರ್ಥಿ ಪರಿಷತ್ ಸಂಯುಕ್ತ ಆಶ್ರಯದಲ್ಲಿ ಎಸ್‌ಐಆರ್  ಜಾಗೃತಿ ಕಾರ್ಯಕ್ರಮ ನಡೆಯಿತು.  

ಕಾರ್ಯಕ್ರಮದಲ್ಲಿ ಮಾತನಾಡಿದ ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ, ಮತದಾನದ ಹಕ್ಕು ಪ್ರತಿಯೊಬ್ಬ ನಾಗರಿಕನ ಅಮೂಲ್ಯ ಹಕ್ಕಾಗಿದ್ದು, ಎಸ್‌ಐಆರ್ ಪ್ರಕ್ರಿಯೆಯಲ್ಲಿ ಎಲ್ಲರೂ ಜಾಗೃತರಾಗಿ ಭಾಗವಹಿಸಬೇಕು ಎಂದು ಕರೆ ನೀಡಿದರು.  

ಬೆಂಗಳೂರುದಿಂದ ಆಗಮಿಸಿದ್ದ ಎಸ್‌ಐಆರ್ ಅಭಿಯಾನದ ಕಾರ್ಯಕರ್ತ ಮೊಹಮ್ಮದ್ ಇಸ್ಮಾಯಿಲ್, ಎಸ್‌ಐಆರ್ ಅರ್ಜಿ ಭರ್ತಿ ವಿಧಾನ, ಅಗತ್ಯ ದಾಖಲೆಗಳು ಹಾಗೂ ಚುನಾವಣಾ ಆಯೋಗದ ಪ್ರಕ್ರಿಯೆಗಳ ಕುರಿತು ಮಾಹಿತಿ ನೀಡಿದರು.  

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್‌.ಎಂ. ಪಾಟೀಲ್ ಗಣಿಹಾರ, ಮತದಾರರ ಹಕ್ಕುಗಳ ರಕ್ಷಣೆಗೆ ಇಂತಹ ಜಾಗೃತಿ ಕಾರ್ಯಕ್ರಮಗಳು ಗ್ರಾಮ ಮಟ್ಟದಲ್ಲೂ ಅಗತ್ಯವೆಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.