ಎಸ್‌ಐಆರ್ ದಾಖಲೆ ಪರೀಶೀಲನೆ: ಹಾವೇರಿ ಸಾಧನೆಗೆ ಸಿಇಒ ಮೆಚ್ಚುಗೆ
SIR Document Verification: CEO Appreciates Haveri's Achievement
ಶಿಗ್ಗಾವಿ, ಜು.21: ವಿಶೇಷ ಮತದಾರರ ಪಟ್ಟಿಯ ಪರಿಷ್ಕರಣೆ ದಾಖಲೆಗಳ ಪರೀಶೀಲನೆ ನಡೆಸಿದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರು, ಹಾವೇರಿ ಜಿಲ್ಲೆ ಎಸ್‌ಐಆರ್ ಪ್ರಗತಿಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನದಲ್ಲಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳೊಂದಿಗೆ ಎಸ್‌ಐಆರ್ ಪ್ರಗತಿ ಪರೀಶೀಲನಾ ಸಭೆ ನಡೆಸಿದ ಅವರು, ಚಿಕ್ಕಬಳ್ಳಾಪುರ ಜಿಲ್ಲೆ ಮೊದಲ ಸ್ಥಾನದಲ್ಲಿದ್ದು, ಹಾವೇರಿ ಜಿಲ್ಲೆ ಶೀಘ್ರದಲ್ಲೇ ಮೊದಲ ಸ್ಥಾನಕ್ಕೇರಲು ಅವಕಾಶವಿದಎಂದು ವಿಶ್ವಾಸ ವ್ಯಕ್ತಪಡಿಸಿದರು. ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಕಾರ್ಯವನ್ನು ಶ್ಲಾಘಿಸಿದ ಅವರು, ಎಸ್‌ಐಆರ್ ಪ್ರಕ್ರಿಯೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ), ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ), ಉಪ ವಿಭಾಗಾಧಿಕಾರಿಗಳು ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 