ಲಖನೌ, ಜನವರಿ 6, ರಾಜಧಾನಿಯಲ್ಲಿ ಭಾನುವಾರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಕ್ಯಾಂಪಸ್‌ನೊಳಗೆ ನುಗ್ಗಿ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕೆಂದು ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷವು ಒತ್ತಾಯಿಸಿದೆ. ಜೆಎನ್‌ಯು ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮೇಲಿನ ದಾಳಿ ಶೋಚನೀಯವಾಗಿದೆ. ಕೇಂದ್ರವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಟ್ವಿಟ್ಟರ್ ಮಾಡಿದ್ದಾರೆ.
ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಟ್ವೀಟ್ ಮಾಡಿ, ಜೆಎನ್‌ಯುನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಮೇಲೆ ಮುಖವಾಡ ಧರಿಸಿದ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಕಾನೂನು ಮತ್ತು ಸುವ್ಯವಸ್ಥೆ ಯಾವ ಮಟ್ಟಕ್ಕೆ ಕುಸಿಯುತ್ತದೆ ಎಂಬುದನ್ನು ತೋರಿಸುತ್ತದೆ ಎಂದು ಹೇಳಿದರು.ಸಮಾಜವನ್ನು ಧ್ರುವೀಕರಿಸಲು ಮತ್ತು ಭಿನ್ನಾಭಿಪ್ರಾಯವನ್ನು ಹತ್ತಿಕ್ಕಲು ಬಿಜೆಪಿ ಹಿಂಸೆ ಮತ್ತು ದ್ವೇಷವನ್ನು ಬಳಸುತ್ತಿದೆ. ಎಬಿವಿಪಿ ಬಿಜೆಪಿಯ ಸೈನಿಕರಂತೆ ವರ್ತಿಸುತ್ತಿದೆ ಎಂದು ಅವರು ಹೇಳಿದರು.ಯಾದವ್ ಕೂಡ ಈ ಘಟನೆಯ ಬಗ್ಗೆ ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ್ದಾರೆ.