ಬಾಗಲಕೋಟೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ಸಹಾಯವಾಣಿ-1098, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ, ಪೊಲೀಸ್ ಇಲಾಖೆ, ರೀಚ್ ಸಂಸ್ಥೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಪೆವಾಡರ್್ ಆಶ್ರಯದಲ್ಲಿ ಹಮ್ಮಿಕೊಂಡ ಮಕ್ಕಳ ಸಹಾಯವಾಣಿ ಸ್ನೇಹಿ ಸಪ್ತಾಹಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಇತ್ತೀಚೆಗೆ ಚಾಲನೆ ನೀಡಿದರು.
ನವನಗರದ ಪೊಲೀಸ್ ತರಬೇತಿ ಕೇಂದ್ರದಲ್ಲಿ ಮಕ್ಕಳ ಸಹಾಯವಾಣಿ ಮಾಹಿತಿಯುಳ್ಳ ಬಿತ್ತಿ ಪತ್ರಗಳನ್ನು ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಮಕ್ಕಳ ಸಹಾಯವಾಣಿ ಸ್ನೇಹಿ ಸಪ್ತಾಹ ಕಾರ್ಯಕ್ರಮದ ಉದ್ದೇಶ 1098ರ ಬಗ್ಗೆ ತಿಳುವಳಿಕೆ ಮೂಡಿಸುವುದಾಗಿದೆ. ಮಕ್ಕಳ ಸಮಸ್ಯೆಗಳಿಗೆ ಸ್ಪಂದಿಸಲು 1098 ಕಾರ್ಯನಿರ್ವಹಿಸುತ್ತಿದ್ದು, ಮಕ್ಕಳಲ್ಲಿ ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪೊಲೀಸ್ ಇಲಾಖೆಯಿಂದ ಮಕ್ಕಳ ಸಹಾಯವಾಣಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದಶರ್ಿ ಹೇಮಲತಾ ಹುಲ್ಲೂರು ಮಾತನಾಡಿ ಕೇವಲ ಪ್ರಚಾರದ ಪೋಸ್ಟರ ಬಿಡುಗಡೆ ಮಾಡಿದರೆ ಜವಾಬ್ದಾರಿ ಮುಗಿಯುವದಿಲ್ಲ, ಎಲ್ಲರೂ ಕೂಡಾ ಕೈ ಜೋಡಿಸಿದಾಗ ಮಾತ್ರ ಸಾಧ್ಯವೆಂದರು. ಮಕ್ಕಳಿಗೆ ಏನೆ ತೊಂದರೆ ಆದರೂ ಈ 1098 ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ತಿಳಿಸಬೇಕು. ಇದು ಮಕ್ಕಳ ಹಕ್ಕುಗಳಿಗೆ ತುಂಬಾ ಸಹಕಾರಿಯಾಗಿದೆ. ಬಾಲ್ಯ ವಿವಾಹದಲ್ಲಿ ಜಿಲ್ಲೆ ಎರಡನೇ ಸ್ಥಾನದಲ್ಲಿದ್ದು, ಅದನ್ನು ಶೂನ್ಯಕ್ಕೆ ತರಲು ನಾವೆಲ್ಲರೂ ಪ್ರಯತ್ನ ಪಟ್ಟಾಗ ಮಾತ್ರ ಸಾಧ್ಯವೆಂದರು.
ಜಿಲ್ಲಾ ಮಕ್ಕಳ ಸಮಿತಿಯ ಅಧ್ಯಕ್ಷರಾದ ಗುಲಾಬ್ ನದಾಫ್ ಬಾಲ್ಯವಿವಾಹ ನಿಷೇಧ ಕುರಿತ ಸ್ಟಿಕರ್ ಪೊಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು ಮಕ್ಕಳ ಜೊತೆ ಸಂವಾದ ಮಾಡುತ್ತಾ ಮಕ್ಕಳ ರಕ್ಷಣೆ ಮತ್ತು ಪೋಷಣೆ, ಸಂರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಇರುವ ವ್ಯವಸ್ಥೆ, ಮಕ್ಕಳ ಸಹಾಯವಾಣಿ, ಮಕ್ಕಳಿಗೆ ಯಾವುದೇ ರೀತಿ ತೊಂದರೆ ಇದ್ದರೂ 1098ಕ್ಕೆ ಕರೆ ಮಾಡುವುದು ಕುರಿತಂತೆ ಮಕ್ಕಳು ತಮ್ಮ ಹಕ್ಕುಗಳನ್ನು ಚಾಲಿಯಿಸಿ ಉತ್ತಮ ಪ್ರಜೆಯಾಗಿ ಉತ್ತಮ ಸಮಾಜ ನಿಮರ್ಾಣ ಮಾಡಲು ಸಹಕಾರಿಯಾಗಬೆಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಪಿ.ಎಸ್.ಚವ್ಹಾನ, ಡಿವಾಯ್ಎಸ್ಪಿ ರವೀಂದ್ರ ಶಿರೂರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕೆ.ವಾಯ್.ಉಕ್ಕಲಿ ಸೇರಿದಂತೆ ಇತರರು ಉಪಸ್ಥಿತರಿದ್ದರು.