ಬಾಗಲಕೋಟೆ 27: ವಿದ್ಯಾಗಿರಿಯ ಗೌರಿಶಂಕರ ಕಲ್ಯಾಣ ಮಂಟಪದಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಂಡ ಜಿಲ್ಲಾ ಮಟ್ಟದ ಉದ್ಯೋಗ ಮೇಳಕ್ಕೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ ಚಾಲನೆ ನೀಡಿದರು.
ವಿದ್ಯಾಗಿರಿಯ ಬಸವೇಶ್ವರ ಇಂಜಿನೀಯರಿಂಗ್ ಕಾಲೇಜಿನ ಆವರಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕೌಶಲ್ಯ ಅಭಿವೃದ್ದಿ, ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ ಹಾಗೂ ಉದ್ಯೋಗ ವಿನಿಮಯ ಕೇಂದ್ರದ ಸಹಯೋಗದಲ್ಲಿ ನಡೆದ ಉದ್ಯೋಗ ಮೇಳಕ್ಕೆ ಚಾಲನೆ ಮಾತನಾಡಿದ ಅವರು ಉದ್ಯೋಗದ ಸಲುವಾಗಿ ವಿವಿಧ ಕಂಪನಿಗಳಿಗೆ ಅಲೆದಾಡುವದನ್ನು ತಪ್ಪಿಸುವ ನಿಟ್ಟಿನಲ್ಲಿ ಉದ್ಯೋಗ ಆಕಾಂಕ್ಷಿಗಳಿಗೆ ಜಿಲ್ಲೆಯಲ್ಲಿಯೇ ಉದ್ಯೋಗ ಒದಗಿಸುವ ಉದ್ದೇಶದಿಂದ ಈ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದರು.
ಸ್ವತಂತ್ರ ಭಾರತದ ಇತಿಹಾಸದಲ್ಲಿ ನಿರುದ್ಯೋಗ ಸಮಸ್ಯೆ ತಾರಕಕ್ಕೇರಿದೆ. ಯುವಕರು ಉದ್ಯೋಗ ಸಿಗದೇ ಪರದಾಡುತ್ತಿದ್ದಾರೆ. ನಮ್ಮ ದೇಶದಲ್ಲಿ ಶೇ.67 ರಷ್ಟು ಜನ ಯುವಕರಿದ್ದು, ಪ್ರಪಂಚದಲ್ಲಿ ಯಾವ ದೇಶದಲ್ಲಿಯೂ ಇಷ್ಟೊಂದು ಪ್ರಮಾಣದಲ್ಲಿ ಯುವಕರನ್ನು ಕಂಡಿಲ್ಲ. ಹೆಚ್ಚಿನ ಯುವಶಕ್ತಿಯನ್ನು ಹೊಂದಿದ ದೇಶ ಭಾರತ ದೇಶವಾಗಿದೆ. ಯುವಕರಿಗೆ ಉದ್ಯೋಗ ಒದಗಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸರಕಾರ ಪ್ರತಿ ಜಿಲ್ಲೆಯಲ್ಲಿ ಉದ್ಯೋಗ ಮೇಳ ಹಮ್ಮಿಕೊಂಡಿರುವದನ್ನು ಹರ್ಷ ವ್ಯಕ್ತಪಡಿಸಿದರು.
ನಮ್ಮಲ್ಲಿರುವ ಮಾನವ ಸಂಪನ್ಮೂಲ ಸಬ್ದಳಕೆಯಾಗಬೇಕು. ಎಲ್ಲರಿಗೂ ಉದ್ಯೋಗ ಸಿಗುವಂತಾಗಬೇಕು ಅಂದಾಗ ಮಾತ್ರ ನಮ್ಮ ದೇಶ ಶಕ್ತಿಶಾಲಿ ರಾಷ್ಟ್ರವಾಗಲು ಸಾಧ್ಯವಾಗುತ್ತದೆ. ಈ ಉದ್ಯೋಗ ಮೇಳದಲ್ಲಿ 80 ಕ್ಕೂ ಹೆಚ್ಚು ಕಂಪನಿಗಳು ಉದ್ಯೋಗ ನೀಡಲು ಮುಂದಾಗಿವೆ. ಈ ಉದ್ಯೋಗ ಮೇಳ ಯುವಕರ ಬದುಕಿಗೆ ಆಸರೆ ಯಾಗಲಿದ್ದು, ಇದರ ಪ್ರಯೋಜನ ಎಲ್ಲರೂ ಪಡೆದುಕೊಳ್ಳಬೇಕು ಎಂದರು. ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರ ಹುಟ್ಟು ಹಬ್ಬದ ದಿನದಂದು ಈ ಉದ್ಯೋಗ ಮೇಳ ಆಯೋಜಿಸಿದ್ದು, ಸಂತಸ ತಂದಿದೆ. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಶುಭ ಕೋರಿದರು.
ಜಿ.ಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಮಾತನಾಡಿ ನಿರುದ್ಯೋಗಿಳಿಗೆ ಉದ್ಯೋಗ ನೀಡುವ ಸಲುವಾಗಿ ಈ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಇದರ ಸದುಪಯೋಗವನ್ನು ಉದ್ಯೋಗ ಆಕಾಂಕ್ಷಿಗಳು ಪಡೆದುಕೊಳ್ಳಬೇಕೆಂದು ತಿಳಿಸಿದರು.
ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಮಾತನಾಡಿ ಜಿಲೆಯ ಉದ್ಯೋಗ ಆಕಾಂಕ್ಷಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದ್ದು, 80ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿವೆ. ಇದರ ಜೊತೆಗೆ ಉದ್ಯೋಗ ಪಡೆದುಕೊಂಡವರು ಕೆಲಸ ಮಾಡುತ್ತಿರುವ ಬಗ್ಗೆ ಜಾಬ್ ಟ್ರ್ಯಾಕ್ ಮಾಡಲಾಗುತ್ತಿದೆ ಎಂದು ತಿಳಿಸಿದರು. ಎರಡು ದಿನಗಳ ಕಾಲ ನಡೆಯುವ ಈ ಉದ್ಯೋಗ ಮೇಳದ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕೆಂದರು.
ಜಿ.ಪಂ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಗಂಗೂಬಾಯಿ ಮಾನಕರ ಮಾತನಾಡಿ ವಿವಿಧ ವಿದ್ಯಾರ್ಹತೆ ಜೊತೆಗೆ ಕೌಶಲ್ಯ ತರಬೇತಿಗಳನ್ನು ಪಡೆದುಕೊಳ್ಳಬೇಕು. ಗ್ರಾಮೀಣ ಭಾಗದ ವಿದ್ಯಾಥರ್ಿಗಳು ಬೇರೆ ಬೇರೆ ಕೋರ್ಸಗಳನ್ನು ಕಲಿಯಬೇಕು. ಉದ್ಯೋಗ ಸಿಗಲಿಲ್ಲವೆಂದು ಕೂಡಬಾರದು. ಸ್ವಯಂ ಉದ್ಯೋಗ ಕೈಗೊಳ್ಳುವವರಿಗೆ ಸರಕಾರದಿಂದ ಸಹಾಯಧನ, ಸಾಲ ಸೌಲಭ್ಯಗಳ ಯೋಜನೆಗಳು ಇದ್ದು, ಅವುಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದರು. ಗೃಹಿನಿಯರಿಗೂ ಉದ್ಯೋಗ ಕೈಗೊಳ್ಳಲು ಸಹಾಯಧನ ಸಹ ನೀಡಾಗುತ್ತಿದೆ ಎಂದರು.
ಇದೇ ಸಂದರ್ಭದಲ್ಲಿ ಸಾಂಕೇತಿಕವಾಗಿ ಉದ್ಯೋಗ ಆಕಾಂಕ್ಷಿಗಳಿಗೆ ವಿವಿಧ ಕಂಪನಿಯವರು ನೇಮಕಾತಿ ಆದೇಶ ನೀಡಲಾಯಿತು. ಕಾರ್ಯಕ್ರಮದಲ್ಲಿ ಜಿ.ಪಂ ಉಪಾಧ್ಯಕ್ಷ ಮುತ್ತಪ್ಪ ಕೋಮಾರ, ತಾ.ಪಂ ಅಧ್ಯಕ್ಷ ಚನ್ನನಗೌಡರ ಪರನಗೌಡರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಪ್ರೊಬೇಷನರಿ ಐ.ಎ.ಎಸ್ ಅಧಿಕಾರಿ ಗಿರಿಮಾ ಪನ್ವಾರ, ಬಸವೇಶ್ವರ ಇಂಜಿನೀಯರಿಂಗ್ ಕಾಲೇಜಿನ ಪ್ರಾಚಾರ್ಯ ರಾಜೀವ ಇಂಜಿಗನೇರಿ, ಕೌಶಲ್ಯ ತರಬೇತಿ ಕೇಂದ್ರದ ಪ್ರಾಚಾರ್ಯ ಹಿರೇಮಠ ಸೇರಿದಂತೆ ಇತರರು ಉಪಸ್ಥಿತರಿದ್ದರು. ಜಿಲ್ಲಾ ಸಾಕ್ಷರಥ ಅಧಿಕಾರಿ ಬಸವರಾಜ ಶಿರೂರ ವಂದಿಸಿದರು.