ಎಸ್.ಎಸ್.ಎಲ್.ಸಿ. ಪರೀಕ್ಷೆ-2 ಪಾರದರ್ಶಕವಾಗಿರಲಿ : ಅಪರ ಜಿಲ್ಲಾಧಿಕಾರಿ
SSLC Exam-2 should be transparent: Additional District Magistrate
ಕಾರವಾರ. 16:- ಮೇ 18 ರಿಂದ 23 ರ ವರೆಗೆ ನಡೆಯುವ ಎಸ್.ಎಸ್.ಎಲ್.ಸಿ. ಪರೀಕ್ಷೆ-2 ನ್ನು ಪರೀಕ್ಷಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ, ಪರೀಕ್ಷೆಗಳು ಅತ್ಯಂತ ಪಾರದರ್ಶಕ ಮತ್ತು ಶಿಸ್ತುಬದ್ಧವಾಗಿ ನಡೆಯಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಸೂಚಿಸಿದರು. ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ-2 ನಡೆಸುವ ಕುರಿತ ಆಯೋಜಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಎಸ್.ಎಸ್.ಎಲ್.ಸಿ. ಪರೀಕ್ಷೆ-2 ಗೆ ಕಾರವಾರ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆಯಿಂದ ಒಟ್ಟು 1,773 ವಿದ್ಯಾರ್ಥಿಗಳು ಹಾಜರಾಗಲಿದ್ದು, ಇದಕ್ಕಾಗಿ 12 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ತಿಳಿಸಿದ ಅವರು ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸವೇಕು ಮತ್ತು ಪರೀಕ್ಷಾ ಪಾವಿತ್ರ್ಯತೆಯನ್ನು ಕಾಪಾಡಬೇಕು ಎಂದರು.
ಪರೀಕ್ಷಾ ಕೇಂದ್ರಗಳಿಗೆ ವಿಕ್ಷಣಾಧಿಕಾರಿಗಳನ್ನು ನೇಮಕ ಮಾಡಬೇಕು, ವೆಬ್ ಕಾಸ್ಟಿಂಗ್ ವ್ಯವಸ್ಥೆ ಸಮರ್ಕವಾಗಿರಬೇಕು, ಮುನ್ನೆಚ್ಚರಿಕೆ ಕ್ರಮವಾಗಿ ವೈದ್ಯಕೀಯ ಸಿಬ್ಬಂದಿಗಳನ್ನು ನಿಯೋಜಿಸಬೇಕು, ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆಗಳ ಸಾಗಾಟ ವಾಹನಗಳಿಗೆ ಪೊಲೀಸ್ ಭದ್ರತೆ ಒದಗಿಸಬೇಕು, ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಆಗಮಿಸಲು ಬಸ್ಗಳ ಕೊರತೆಯಾಗಬಾರದು, ಹೆಸ್ಕಾಂ ನಿಂದ ವಿದ್ಯುತ್ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು ಎಂದರು.
ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಅರಿತು ಸಮನ್ವಯದಿಂದ ಕಾರ್ಯನಿರ್ವಹಿಸಿ, ಪರೀಕ್ಷೆಗಳು ದೋಷರಹಿತವಾಗಿ ನಡೆಯುವಂತೆ ತಮಗೆ ವಹಿಸಲಾಗಿರುವ ಕರ್ತವ್ಯ ನಿರ್ವಹಿಸಬೇಕು ಎಂದರು.
ಸಭೆಯಲ್ಲಿ ಶಿಕ್ಷಣಾಧಿಕಾರಿ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯ ನೋಡೆಲ್ ಅಧಿಕಾರಿ ಡಾ.ಶುಭಾ ನಾಗೇಂದ್ರ ನಾಯಕ ಹಾಗೂ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿದ್ದ ಅಧಿಕಾರಿಗಳು ಮತ್ತು ವರ್ಚುವಲ್ ಮೂಲಕ ಎಲ್ಲಾ ತಾಲೂಕುಗಳ ತಹಸೀಲ್ದಾರ್ಗಳು ಮತ್ತು ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿದ್ದ ಅಧಿಕಾರಿಗಳು ಹಾಜರಿದ್ದರು.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 