ಎಸ್‌ಎಸ್‌ಎಲ್‌ಸಿ ಪರೀಕ್ಷೆ-2; ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ನಿಷೇಧಿತ ಪ್ರದೇಶ ಘೋಷಣೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2; ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ನಿಷೇಧಿತ ಪ್ರದೇಶ ಘೋಷಣೆ SSLC Exam-2; 200 meter restricted area declared around exam centers

ಲೋಕದರ್ಶನ ವರದಿ  

      ಬಳ್ಳಾರಿ 15:  ಜಿಲ್ಲೆಯಲ್ಲಿ ಮೇ 18 ರಿಂದ ಮೇ 25 ರವರೆಗೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ರ ಸುಗಮ ಮತ್ತು ಪಾರದರ್ಶಕ ನಿರ್ವಹಣೆಗಾಗಿ, ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ, ಜಿಲ್ಲೆಯ ಆಯ್ದ 10 ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ. ವ್ಯಾಪ್ತಿಯ ಪ್ರದೇಶವನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ರ ಅಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ನಿಷೇಧಿತ ವಲಯ ಎಂದು ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್‌.ಕೆ ಅವರು ಘೋಷಿಸಿದ್ದಾರೆ. 

ಪರೀಕ್ಷಾ ಸಮಯದಲ್ಲಿ ಈ ವ್ಯಾಪ್ತಿಯಲ್ಲಿರುವ ಜೆರಾಕ್ಸ್‌ ಅಂಗಡಿಗಳು ಮತ್ತು ಇಂಟರ್ನೆಟ್ ಸೆಂಟರ್ ಗಳನ್ನು ಕಡ್ಡಾಯವಾಗಿ ಮುಚ್ಚುವಂತೆ, ಅನಧಿಕೃತ ವ್ಯಕ್ತಿಗಳು ಮತ್ತು ಗುಂಪುಗಳು ಪರೀಕ್ಷಾ ಕೇಂದ್ರದ ಹತ್ತಿರ ಸುಳಿಯುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಈ ನಿಷೇಧಾಜ್ಞೆಯು ಪರೀಕ್ಷಾ ಕಾರ್ಯದಲ್ಲಿ ತೊಡಗಿರುವ ಸಿಬ್ಬಂದಿ, ಅಧಿಕಾರಿಗಳಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.