ಜು. 5ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-3: ನಿಷೇಧಾಜ್ಞೆ ಜಾರಿ: ಡಿಸಿ

ಜು. 5ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-3: ನಿಷೇಧಾಜ್ಞೆ ಜಾರಿ: ಡಿಸಿ SSLC Exam-3 from July 5: Prohibitory order imposed: DC

ಬಳ್ಳಾರಿ 04:ಜಿಲ್ಲೆಯಾದ್ಯಂತ 15 ಪರೀಕ್ಷಾ ಕೇಂದ್ರಗಳಲ್ಲಿ ಜು.05 ರಿಂದ ಜು.12 ರವರೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-3 ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಆವರಣವನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023ರ ಕಲಂ 163 ರ ಅಡಿ ಮೇರೆಗೆ ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್‌ಕುಮಾರ್ ಮಿಶ್ರಾಅವರು ಆದೇಶಿಸಿದ್ದಾರೆ. 

ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣದಲ್ಲಿನ ಜೆರಾಕ್ಸ್‌ ಸೆಂಟರ್ ಮತ್ತು ಇಂಟರ್‌ನೆಟ್ ಸೆಂಟರ್‌ಗಳನ್ನು ಕಾರ್ಯನಿರ್ವಹಿಸದಂತೆ ಪ್ರತಿಬಂಧಿಸಿ ಆದೇಶಿಸಿದ್ದಾರೆ.ಆ ಪ್ರದೇಶದಲಿ ್ಲಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶವನ್ನು ನಿಷೇಧಿಸಿದೆ.ಈ ಆದೇಶವು ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ ಎಂದುಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.ಜು.13ರಂದು “ಸಾಂಸ್ಕೃತಿಕ ಸೌರಭ” ಕಾರ್ಯಕ್ರಮಬಳ್ಳಾರಿ 04:ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ “ಸಾಂಸ್ಕೃತಿಕ ಸೌರಭ” ಕಾರ್ಯಕ್ರಮವನ್ನು ಜು.13 ರಂದು ಸಂಜೆ 06 ಗಂಟೆಗೆ ಕಂಪ್ಲಿ ತಾಲ್ಲೂಕಿನ ರಾಮಸಾಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಆಯೋಜಿಸಲಾಗಿದೆ. 

ವಸತಿ, ವಕ್ಫ್‌ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಝಡ್‌.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್‌ಗಣೇಶ್ ಅವರು ಅಧ್ಯಕ್ಷತೆ ವಹಿಸುವರು.ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ವಿಧಾನಪರಿಷತ್ ಶಾಸಕಡಾ. ಚಂದ್ರಶೇಖರ್ ಬಿ.ಪಾಟೀಲ, ಶಾಸಕರಾದ ಬಿ.ಎಂ.ನಾಗರಾಜ, ನಾರಾ ಭರತ್‌ರೆಡ್ಡಿ, ಈ. ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್ ರಾಮ್‌ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಜಿಲ್ಲಾಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ರಾಮಸಾಗರ ಗ್ರಾಮ ಪಂಚಾಯತ್‌ಅಧ್ಯಕ್ಷರಾದ ಎಂ.ಆಶಾ, ಉಪಾಧ್ಯಕ್ಷಆರ್‌.ಎಂ.ರಾಮಯ್ಯ, ರಾಮಸಾಗರದ ಶಾಲಾ ಅಭಿವೃದ್ಧಿ ನಿರ್ವಹಣಾ ಸಮಿತಿಯ ಅಧ್ಯಕ್ಷ ಎಂ.ಪ್ರಶಾಂತ್ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. 

ಕಾರ್ಯಕ್ರಮಕ್ಕು ಮುನ್ನ ಅಂದು ಸಂಜೆ 05 ಗಂಟೆಗೆ ಸಾಂಸ್ಕೃತಿಕ ಸೌರಭದ ಮೆರವಣಿಗೆ ನಡೆಯಲಿದ್ದು, ಮೆರವಣಿಗೆಯು ರಾಮಸಾಗರದ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದವರೆಗೆ ನಡೆಯಲಿದೆ.*ಸಾಂಸ್ಕೃತಿಕ ಕಾರ್ಯಕ್ರಮಗಳು:*ಕಾರ್ಯಕ್ರಮದಲ್ಲಿ ಬಳ್ಳಾರಿಯ ಮೋಹನ್ ಕಲಬುರಗಿಅವರಿಂದ ವಾಯಲಿನ್ ವಾದನ, ಕೆ.ದೊಡ್ಡಬಸಪ್ಪ ಗವಾಯಿ ತಂಡದಿಂದ ಸುಗಮ ಸಂಗೀತ, ವನಮಾಲ ಕುಲಕರ್ಣಿ ಸಂಗಡಿಗರಿಂದ ಸಮೂಹ ನೃತ್ಯ, ಯಲ್ಲನಗೌಡ ಶಂಕರ ಬಂಡೆತಂಡದಿಂದ ಜಾನಪದಗೀತೆ, ಏಳುಬೆಂಚಿಯ ಸಿ.ಎಂ.ಕರುಣಾಮೂರ್ತಿ ಅವರಿಂದ ಕಥಾಕೀರ್ತನೆ, ಬಳ್ಳಾರಿಯ ವರಲಕ್ಷ್ಮೀ ಸಂಗಡಿಗರಿಂದ ಐತಿಹಾಸಿಕ “ಹೇಮರೆಡ್ಡಿ ಮಲ್ಲಮ್ಮ” ನಾಟಕ, ಕಂಪ್ಲಿಯ ಶಿಕಾರಿ ರಾಮು ಸಂಗಡಿಗರಿಂದ ತಾಷರಂಡೋಲ್, ಹಳೇ ದರೋಜಿಯ ವೈ.ಮಲ್ಲಿಕಾರ್ಜುನಪ್ಪ ಸಂಗಡಿಗರಿಂದ ಹಗಲುವೇಷ, ತಾರನಗರದ ಎಸ್‌.ಎಂ.ಚಂದ್ರಯ್ಯ ಸ್ವಾಮಿತಂಡದಿಂದ ವೀರಗಾಸೆ ಸೇರಿದಂತೆ ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳು ಇರಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.