ಎಸ್.ಎಸ್.ಎಲ್.ಸಿ.ಫಲಿತಾಂಶ ಸುಧಾರಣೆ ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮ

ಗದಗ 24: ಸರ್ಕಾರರದಿಂದ ಎಲ್ಲ ಸೌಲಭ್ಯಗಳು ಇದ್ದರೂ ಜಿಲ್ಲೆಯ ಪರೀಕ್ಷಾ ಫಲಿಂತಾಶಗಳ ಮಟ್ಟದಲ್ಲಿ ಸುಧಾರಣೆಯಾಗದಿರುವುದು ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ನಿಜಕ್ಕೂ ಕಳವಳಕಾರಿ ಸಂಗತಿ ಗದಗ ಜಿಲ್ಲಾ ಪಂಚಾಯತ ಅಧ್ಯಕ್ಷ ಕುಮಾರ ಸಿದ್ದಲಿಂಗೇಶ್ವರ ಎಚ್. ಪಾಟೀಲ ನುಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯು ಗದುಗಿನ ವಿ.ಡಿ.ಎಸ್.ಟಿ ಪ್ರೌಢ ಶಾಲಾ ಆವರಣದಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾಥರ್ಿಗಳಿಗೆ  ಫಲಿತಾಂಶ ಸುಧಾರಣೆ ಕುರಿತು ಎರ್ಪಡಿಸಿದ ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ನಿಟ್ಟಿನಲ್ಲಿ ಮಕ್ಕಳ ವಿದ್ಯಾಭ್ಯಾಸದ ಸಮಸ್ಯೆಗಳ ಕುರಿತು ಮಕ್ಕಳೊಂದಿಗೆ ನೇರ ಸಂವಾದ ಜರುಗಿಸುತ್ತಿರುವುದು ಉತ್ತಮ ಪ್ರಯತ್ನ. ಮಕ್ಕಳು ಇದರ ಪ್ರಯೋಜನ ಪಡೆದು ಚೆನ್ನಾಗಿ ಅಭ್ಯಾಸ ಮಾಡಿ ಶಾಲೆಗೆ ಜಿಲ್ಲೆಗೆ ಉತ್ತಮ ಫಲಿತಾಂಶ ತರಬೇಕು ಎಂದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ  ಎನ್ ಎಚ್ ನಾಗೂರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ 6 ಶಾಲೆಗಳ 500 ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಓದುವ ವಿಧಾನ ,ಬರೆಯುವ ಪದ್ದತಿ, ಅಭ್ಯಾಸದ ಕುರಿತು ಆತ್ಮವಿಶ್ವಾಸ ಗಳಿಸುವ ಬಗೆ, ಪರೀಕ್ಷಾ ಸಿದ್ದತೆ ಹಾಗೂ ಸಮಯದ ಸದುಪಯೋಗ ಕುರಿತು ತಿಳಿಸಿದರು. ವಿಷಯಗಳ ಪ್ರಶ್ನೆ ಪತ್ರಿಕೆ ವಿನ್ಯಾಸ ಮುಂತಾದ ವಿಷಯಗಳ ಬಗ್ಗೆ ಮಾತನಾಡಿ ಮಕ್ಕಳು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದರು. ಗದಗ ಶಹರ ಕ್ಷೇತ್ರಶಿಕ್ಷಣಾಧಿಕಾರಿ ಎಸ್. ಎಸ್. ಕೆಳದಿಮಠ, ಶಿಕ್ಷಣಾಧಿಕಾರಿ ಮಂಗಲಾ ತಾಪಸ್ಕರ್.  ಶಿಕ್ಷಕ ವೃಂದದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.