ಎಸ್ಸೆಸ್ಸೆಲ್ಸಿ ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ: ಮಮತಾ ಬಸವರಾಜ ರಾಯರೆಡ್ಡಿ
SSLC PUC felicitates talented students: Mamata Basavaraja Rayareddy
ಲೋಕದರ್ಶನ ವರದಿ
ಯಲಬುರ್ಗಾ 12 : ಯಲಬುರ್ಗಾ ಮತ್ತು ಕುಕನೂರು ತಾಲೂಕಿನಲ್ಲಿ 2025 - 26 ನೇ ಶೈಕ್ಷಣಿಕ ವರ್ಷದಲ್ಲಿ ಖ.ಖ.ಐ.ಅ ಮತ್ತು ಕ.ಗ.ಅ ಯಲ್ಲಿ ತಾಲೂಕ ಮಟ್ಟದಲ್ಲಿ ಹೆಚ್ಚಿನ ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಪ್ರತಿ ಶಾಲೆ ಮತ್ತು ಕಾಲೇಜು ಹಂತದಲ್ಲಿ ಪ್ರಥಮ ಮೂರು ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಬೆಂಗಳೂರಿನ ಆರಾಮ ಫೌಂಡೇಶನ್, ಇವರ ವತಿಯಿಂದ ದಿನಾಂಕ 13-6-2026 ಶನಿವಾರ ದಂದು ಬೆಳಿಗ್ಗೆ 10.00 ಯಲಬುರ್ಗಾ ಪಟ್ಟಣದ ಬುದ್ಧ, ಬಸವ, ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ಆರಾಮ ಫೌಂಡೇಶನ್ ಸಂಚಾಲಕರು ಹಾಗೂ ವಕೀಲರು ಮಮತಾ ಬಸವರಾಜ ರಾಯರಡ್ಡಿ ತಿಳಿಸಿದ್ದಾರೆ.
ಪಟ್ಟಣದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು, ಯಲಬುರ್ಗಾ ವಿಧಾನಸಭಾ ಕ್ಷೇತ್ರವು ಸರ್ವತೋಮುಖವಾಗಿ ಅಭಿವೃದ್ಧಿಯಾಗಬೇಕೆಂಬ ಗುರಿಯೊಂದಿಗೆ ನನ್ನ ತಂದೆಯವರಾದ ಶ್ರೀಯುತ ಬಸವರಾಜ ರಾಯರೆಡ್ಡಿ ಅವರು ಸಾಕಷ್ಟು ಕೆಲಸಗಳನ್ನು ಮಾಡಿದ್ದಾರೆ. ಅವರಂತೆ ನಾವುಕೂಡ ಸಮಾಜ ಸೇವೆಗಾಗಿ ಬೆಂಗಳೂರು ಆರಾಮ ಫೌಂಡೇಶನ್ ವತಿಯಿಂದ ಯಲಬುರ್ಗಾ ತಾಲೂಕಿನ ಖ.ಖ.ಐ.ಅ ಮತ್ತು ಕ.ಗ.ಅ ಯಲ್ಲಿ ತಾಲೂಕ ಮಟ್ಟದಲ್ಲಿ ಹೆಚ್ಚಿನ ಅಂಕ ಪಡೆದ ಪ್ರತಿಭಾವಂತ 580 ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸಲಾಗುತ್ತಿದೆ ಎಂದು ಹೇಳಿದರು. ಈ ವೇಳೆ ಪಪಂ ಸದಸ್ಯೆ ನಂದಿತಾ ದಾನರೆಡ್ಡಿ, ಸಾವಿತ್ರಿ ಗೊಲ್ಲರ, ಮಲ್ಲಮ್ಮ ಗೊಂದಿ, ಶರಣಮ್ಮ, ಜಯಶ್ರೀ , ಸಾವಿತ್ರಿ ದಳವಾಯಿ, ಪ್ರವೀಣ್ ಅಂಗಡಿ ಸೇರಿ ಪಕ್ಷದ ಕಾರ್ಯಕರ್ತರು ಇದ್ದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 