ಎಸ್.ಎಸ್.ಎಲ್.ಸಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಿಸಿಲ್ಲ ಸುರೇಶ್ ಕುಮಾರ್

ಬೆಂಗಳೂರು, ಏ 16,ಎಸ್.ಎಸ್.ಎಲ್.ಸಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂಬ ವದಂತಿಗಳನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಎಸ್.ಸುರೇಶ್‌ಕುಮಾರ್ ತಳ್ಳಿಹಾಕಿದ್ದಾರೆ.ಈ ಸಂಬಂಧ ಇದುವರೆಗೆ ಶಿಕ್ಷಣ ಇಲಾಖೆ ಇದುವರೆಗೆ ಯಾವುದೇ ಪ್ರಕಟಣೆಗಳನ್ನು ಹೊರಡಿಸಿಲ್ಲ. ಈ ಬಗ್ಗೆ ವಿದ್ಯಾರ್ಥಿಗಳು, ಪೋಷಕರು ಗೊಂದಲಕ್ಕೆ ಒಳಗಾಗುವುದು ಬೇಡ ಎಂದಿದ್ದಾರೆ. ಈ ಕುರಿತು ಫೇಸ್‌ಬುಕ್ ಲೈವ್‌ನಲ್ಲಿ ಸ್ಪಷ್ಟಪಡಿಸಿದ ಸಚಿವರು, ೧೦ನೇ ತರಗತಿಯ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ತೇರ್ಗಡೆಗೊಳಿಸಲಾಗುವುದು ಎಂಬ ವದಂತಿಗಳು ಸಹ ಹರಿದಾಡುತ್ತಿವೆ. ಆದರೆ ಅದು ಶುದ್ಧ ಸುಳ್ಳು. ಯಾವುದೇ ಕಾರಣಕ್ಕೂ ಸುಳ್ಳು ಸುದ್ದಿಗಳಿಗೆ ಕಿವಿಗೊಡದಿರಿ. ಪರೀಕ್ಷೆಗಳ ಬಗ್ಗೆ ಶಿಕ್ಷಣ ತಜ್ಞರ ಜೊತೆ ಚರ್ಚಿಸಿ ಬರುವ ಮೇ ೩ರ ನಂತರ ದಿನಾಂಕ ಪ್ರಕಟಿಸುವುದಾಗಿ ಸುರೇಶ್ ಕುಮಾರ್ ತಿಳಿಸಿದರು.