21ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಪಾರದರ್ಶಕ,ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅಧಿಕಾರಿಗಳಿಗೆ ಡಿಸಿ ಸೂಚನೆ

ಹಾವೇರಿ 25:   ಹಾವೇರಿ ಜಿಲ್ಲೆಯ 73 ಪರೀಕ್ಷಾ ಕೇಂದ್ರಗಳಲ್ಲಿ  ಮಾಚರ್್ 21 ರಿಂದ ಎಪ್ರಿಲ್ 4ರವರೆಗೆ ಎಸ್.ಎಸ್.ಎಲ್,ಸಿ. ಪರೀಕ್ಷೆಗಳು ಜರುಗಲಿವೆ. ಅತ್ಯಂತ ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಬೇಕು ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು  ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಎಸ್.ಎಸ್.ಎಲ್.ಸಿ ಪರೀಕ್ಷೆ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಪರೀಕ್ಷಾ ಅಕ್ರಮಗಳಿಗೆ ಅವಕಾಶ ನೀಡಬಾರದು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಕ್ಯಾಮರಾಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಪರೀಕ್ಷಾ ಅಕ್ರಮಗಳು ನಡೆಯದಂತೆ ನೋಡಿಕೊಳ್ಳಲು ಉಪನಿದರ್ೆಶಕರು ಹಾಗೂ ಕ್ಷೇತ್ರಾಧಿಕಾರಿಗಳು ಜಿಲ್ಲಾ ಮತ್ತು ತಾಲೂಕು ಹಂತದಲ್ಲಿ ಜಾಗೃತ ದಳ ರಚಿಸಬೇಕು. ವಿದ್ಯಾಥರ್ಿಗಳಿಗೆ ಪರೀಕ್ಷಾ ಕೊಠಡಿ ತಿಳಿಯಲು ಸಾಕಷ್ಟು  ಸಂಖ್ಯೆಯಲ್ಲಿ ಪ್ರದರ್ಶನಾ ಫಲಕಗಳನ್ನು ಅಳವಡಿಸಬೇಕು ಹಾಗೂ ವಿದ್ಯಾಥರ್ಿಗಳ ಸಮಸ್ಯೆಯನ್ನು ಆಲಿಸಲು ಹೆಲ್ಪ್ ಡೆಸ್ಕ್ ಸ್ಥಾಪಿಸಬೇಕು ಎಂದು ಸೂಚನೆ ನೀಡಿದರು.

ಪ್ರತಿಯೊಂದು ಪರೀಕ್ಷಾ ಕೇಂದ್ರಕ್ಕೆ ಬೇರೆ ಬೇರೆ ಇಲಾಖೆಯ ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗುತ್ತಿದೆ. ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ತಲುಪಿಸುವ ಮಾಗರ್ಾಧಿಕಾರಿಗಳಿಗೆ ಪೊಲೀಸ್ ರಕ್ಷಣೆ ಒದಗಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಮುಖ್ಯ ಅಧೀಕ್ಷಕರನ್ನು ಹೊರತುಪಡಿಸಿ ಯಾವುದೇ ಸಿಬ್ಬಂದಿ ಮೊಬೈಲ್ ಫೋನ್ನ್ನು  ಬಳಸುವುದು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಮೊಬೈಲ್ ಬಳಕೆ ಕಂಡುಬಂದಲ್ಲಿ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲೆಯ ಎಲ್ಲ ತಾಲೂಕುಗಳ  ಕ್ಷೇತ್ರ ಶಿಕ್ಷಣಾಧಿಕಾರಿಗಳು ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾಥರ್ಿಗಳಿಗೆ ಸೂಕ್ತ ಆಸನ ವ್ಯವಸ್ಥೆ, ಶುದ್ಧ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕು. ಆಸನಗಳ ಅವಶ್ಯಕತೆ ಇದ್ದಲ್ಲಿ ಸಮೀಪದ ಶಾಲೆಗಳಿಂದ ಪರೀಕ್ಷಾ ಕೇಂದ್ರಗಳಿಗೆ ಡೆಸ್ಕ್ ತರಿಸುವ ಕೆಲಸಮಾಬೇಕು ಎಂದು ತಿಳಿಸಿದರು.

ಜಿಲ್ಲಾ ಮತ್ತು ತಾಲೂಕು ಹಂತದಲ್ಲಿ ಪ್ರಶ್ನೆ ಪತ್ರಿಕೆ ಪಡೆಯುವಾಗ ಮತ್ತು ಕೊಡುವಾಗ, ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆ ಕೊಡುವಾಗ, ಉತ್ತರ ಪತ್ರಿಕೆ ಪಡೆಯುವಾಗ ಮಾಗರ್ಾಧಿಕಾರಿಗಳಿಗೆ ಅಗತ್ಯ ಪೊಲೀಸ್ ರಕ್ಷಣೆ ನೀಡುವಂತೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಪರೀಕ್ಷಾ ಕೇಂದ್ರಗಳಲ್ಲಿ ಮಕ್ಕಳು ಅನಾರೋಗ್ಯಕ್ಕೆ ಒಳಗಾಗದಲ್ಲಿ ತುತರ್ು ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆ ಸಿಬ್ಬಂದಿ ನಿಯೋಜಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೆಶಕ ಅಂದಾನೆಪ್ಪ ವಡಗೇರಿ ಅವರು ಮಾತನಾಡಿ, ಜಿಲ್ಲೆಯಲ್ಲಿ  19,499 ಶಾಲಾ ವಿದ್ಯಾಥರ್ಿಗಳು, 839 ಪುರಾವತರ್ಿತ ವಿದ್ಯಾಥರ್ಿಗಳು, 524 ಖಾಸಗಿ ವಿದ್ಯಾಥರ್ಿಗಳು ಹಾಗೂ 139 ಖಾಸಗಿ ಪುನರಾವತರ್ಿತ ವಿದ್ಯಾಥರ್ಿಗಳು ಸೇರಿ 21,001 ವಿದ್ಯಾಥರ್ಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ತಿಳಿಸಿದರು. ಸಭೆಯಲ್ಲಿ ಜಿ.ಪಂ.ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಕೆ.ಲೀಲಾವತಿ, ಡಯಟ್ ಪ್ರಾಚಾರ್ಯ ಜಿ.ಎಂ.ಬಸವಲಿಂಗಪ್ಪ, ಎಲ್ಲ ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.