ಎಸ್‌ಎಸ್‌ಎಸ್ ವಿದ್ಯಾರ್ಥಿ ಜೀವನದಲ್ಲಿ ಶಿಸ್ತು, ಸಮಯಪ್ರಜ್ಞೆ, ಜವಾಬ್ದಾರಿ, ನಾಯಕತ್ವ, ನಿಸ್ವಾರ್ಥ, ತ್ಯಾಗ ಮನೋಭಾವ ಬೆಳೆಸುತ್ತದೆ - ಪ್ರಾಚಾರ್ಯ ಹಾದಿಮನಿ

ಎಸ್‌ಎಸ್‌ಎಸ್ ವಿದ್ಯಾರ್ಥಿ ಜೀವನದಲ್ಲಿ ಶಿಸ್ತು, ಸಮಯಪ್ರಜ್ಞೆ, ಜವಾಬ್ದಾರಿ, ನಾಯಕತ್ವ, ನಿಸ್ವಾರ್ಥ, ತ್ಯಾಗ ಮನೋಭಾವ ಬೆಳೆಸುತ್ತದೆ - ಪ್ರಾಚಾರ್ಯ ಹಾದಿಮನಿ SSS instills discipline, punctuality, responsibility, leadership, selflessness, and a spirit of sacr

ಲೋಕದರ್ಶನ ವರದಿ 

ಮುಧೋಳ 27 : ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಯಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತಾವು ತೊಡಗಿಸಿ ಕೊಳ್ಳುವುದರಿಂದ ನಾಯಕತ್ವದ ಗುಣ, ಶಿಸ್ತು, ಸಮಯ ಪ್ರಜ್ಞೆಯನ್ನು ಕಲಿಯಬಹುದು. ಇತ್ತೀಚೆಗೆ ವಿದ್ಯಾರ್ಥಿಗಳು ದುಶ್ಚಟಗಳಿಗೆ ದಾಸರಾಗಿ ತಮ್ಮನ್ನು ತಾವೇ ಅಪಾಯಕ್ಕೆ ಸಿಲುಕಿಸಿ ಕೊಳ್ಳುತ್ತಿದ್ದಾರೆ. ಇದು ಸರಿಯಲ್ಲ. ದುಶ್ಚಟಗಳಿಂದ ಹೊರ ಬಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಬೇಕು. ಐಎಎಸ್, ಐಪಿಎಸ್, ಕೆಎಎಸ್‌ನಲ್ಲಿ ಗ್ರಾಮಾಂತರ ಪ್ರದೇಶದ ಮಕ್ಕಳು ಮುಂದೆ ಬಂದರೆ ಒಳ್ಳೆಯ ಆಡಳಿತ ನೀಡಬಹುದೆಂದು ಮುಧೋಳ ಸರ್ಕಾರಿ ಪ್ರಥಮ ಧರ್ಜೆ ಕಾಲೇಜಿನ ಪ್ರಾಚಾರ್ಯ ಎಸ್‌.ಎಮ್‌.ಹಾದಿಮನಿ ಹೇಳಿದರು. 

ಮುಧೋಳ ನಗರದ  ಎಸ್‌.ಆರ್‌.ಕಂಠಿ ಪದವಿ ಮಹಾವಿದ್ಯಾಲಯದ ಎನ್‌ಎಸ್‌ಎಸ್ ಘಟಕ 1ಮತ್ತು 2ರ ಆಶ್ರನ್‌ಎಸ್ಯದಲ್ಲಿ ತಾಲೂಕಿನ ದತ್ತುಗ್ರಾಮ ಕಸಬಾಜಂಬಗಿಯಲ್ಲಿ ಹಮ್ಮಿಕೊಂಡಿದ್ದ ಏಳು ದಿನಗಳ ವಾರ್ಷಿಕ ವಿಶೇಷ ಸೇವಾ ಶಿಬಿರಿದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿ ಸ್ಥಾನ ವಹಿಸಿ ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಮುಖ್ಯ, ನಿಸ್ವಾರ್ಥ, ತ್ಯಾಗ ಮನೋಭಾವದಿಂದ ಸೇವೆ ಸಲ್ಲಿಸಿದರೇ ಜೀವನ ಸಾರ್ಥಕವಾಗುತ್ತದೆ.

ಎನ್‌ಎಸ್‌ಎಸ್ ಶಿಬಿರವು ಸೇವಾ ಮನೋಭಾವನೆ ಬೆಳೆಸಿಕೊಳ್ಳುವ ವೇದಿಕೆಯಾಗಿದೆ. ಇಲ್ಲಿ ಕಲಿತ ತತ್ವಗಳನ್ನು ಜೀವನದುದ್ದಕ್ಕೂ ಅಳವಡಿಸಿಕೊಳ್ಳು ವಂತೆ ಶಿಬಿರಾರ್ಥಿಗಳಿಗೆ ಸಲಹೆ ನೀಡಿದ ಅವರು ‘ವಿದ್ಯಾರ್ಥಿ ಜೀವನದಲ್ಲಿ ಇಂತಹ ಶಿಬಿರಗಳು ನೈಜ ಜೀವನದ ಪಾಠ ಕಲಿಸುವ ಪಾಠಶಾಲೆಯಂತಿವೆ. ಸಮಾಜ ಸೇವೆ ಎಂದರೆ ಕೇವಲ ಒಂದು ದಿನದ ಕಾರ್ಯಕ್ರಮವಲ್ಲ. ಅದು ಜೀವನಪೂರ್ತಿ ಅಳವಡಿಸಿಕೊಳ್ಳಬೇಕಾದ ಮನೋಭಾವ' ಎಂದರು. 

ಸ.ಹಿ.ಪ್ರಾ.ಶಾಲೆಯ ಮುಖ್ಯೋಪಾಧ್ಯಯ ಎ.ಡಿ.ನಧಾಪ್ ಮಾತನಾಡಿ ‘ಇಂದಿನ ಯುವಕರು ಸಾಮಾಜಿಕ ಹೊಣೆಗಾರಿಕೆಯನ್ನು ಅರಿತುಕೊಳ್ಳುವಲ್ಲಿ ಮುಂಚೂಣಿಯಲ್ಲಿರಬೇಕು. ಶಿಬಿರದಲ್ಲಿನಅನುಭವವು ಭವಿಷ್ಯದ ನಾಯಕರಾಗಿ ರೂಪಗೊಳ್ಳಲು ಸಹಾಯಕವಾಗುತ್ತದೆ' ಎಂದರು. 

ಬಸವೇಶ್ವರ ಪ್ರೌಢ ಶಾಲೆಯ ಪ್ರಭಾರಿ ಮುಖ್ಯೋಪಾಧ್ಯಾಪಕಿ ಸಿ.ಎಸ್‌.ಹಿರೇಮಠ ಮಾತನಾಡಿ ‘ವಿದ್ಯಾರ್ಥಿಗಳು ಕೇವಲ ಅಕಾಡೆಮಿಕ್ ಯಶಸ್ಸಿನಲ್ಲೇ ಅಲ್ಲ, ಸಮಾಜಮುಖಿ ಕಾರ್ಯಗಳಲ್ಲೂ ತೊಡಗಿಸಿಕೊಂಡಾಗ ಮಾತ್ರ ನಿಜವಾದ ಶಿಕ್ಷಣದ ಅರ್ಥ ಸಾರ್ಥಕವಾಗುತ್ತದೆ' ಎಂದು ಹೇಳಿದರು. 

ಶ್ರೀ ಎಸ್‌.ಆರ್‌.ಕಂಠಿ ಕಾಲೇಜಿನ ಪ್ರಾಚಾರ್ಯ ಡಾ.ಎಮ್‌.ಆರ್‌.ಜರಕುಂಟಿ ಅಧ್ಯಕ್ಷತೆವಹಿಸಿ ಮಾತನಾಡಿ ‘ಜೀವನದಲ್ಲಿ ದೊಡ್ಡ ಸ್ಥಾನ ಪಡೆಯುವುದಕ್ಕಿಂತ, ಒಳ್ಳೆಯ ಮಾನವಿಯ ಮೌಲ್ಯಗಳನ್ನು ಅಳವಡಿಸಿಕೊಂಡು ನಾಗರಿಕನಾಗುವುದು ಮುಖ್ಯ. ಈ ಶಿಬಿರದ ಅನುಭವಗಳು ನಿಮ್ಮ ವ್ಯಕ್ತಿತ್ವ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ'. ‘ಎನ್‌ಎಸ್‌ಎಸ್ ಶಿಬಿರವು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ನಾಯಕತ್ವ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ವೇದಿಕೆ ಆಗಿದೆ'. 

‘ಯುವಕರು ರಾಷ್ಟ್ರದ ಶಕ್ತಿ. ಅವರಿಂದ ಪ್ರಾರಂಭವಾಗುವ ಪ್ರತಿಯೊಂದು ಸಣ್ಣ ಸೇವಾ ಚಟುವಟಿಕೆ ದೇಶದ ಅಭಿವೃದ್ಧಿಗೆ ದಾರಿ ತೋರಿಸಬಹುದು'.‘ವಿದ್ಯಾರ್ಥಿಗಳು ಶ್ರಮ, ಶಿಸ್ತು ಮತ್ತು ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಿದ್ದು ಪ್ರಶಂಸನೀಯ. ಎನ್‌ಎಸ್‌ಎಸ್ ಕೇವಲ ಕಾರ್ಯಕ್ರಮ ವಲ್ಲ, ಅದು ವ್ಯಕ್ತಿತ್ವ ನಿರ್ಮಾಣದ ಪಾಠವಾಗಿದೆ' ಎಂದರು. 

ಗುರಯ್ಯ ಕಲಾದಗಿಮಠ ಸಾನಿಧ್ಯವಹಿಸಿ ಶಿಬಿರಾರ್ಥಿಗಳಿಗೆ ಹಿತನುಡಿಗಳನ್ನಾಡಿದರು. ಮಲ್ಲಪ್ಪ ತೇಲಿ, ಆರ್‌.ಬಿ.ಜೋಶಿ, ಎಸ್‌.ಆರ್‌.ನಾಯಕ, ಎ.ವ್ಹಿ.ಪತ್ತಾರ, ಚಿರಂಜೀವಿ ಎಲ್‌.ಎಮ್, ಕೆ.ಎಸ್‌.ಮಾಲಾಪೂರ, ವಿಶ್ವನಾಥ ಮುನವಳ್ಳಿ ಸೇರಿದಂತೆ ಗ್ರಾಮದ ಪ್ರಮುಖರು ವೇದಿಕೆ ಮೇಲೆ ಉಪಸ್ಥಿತರಿದ್ದರು. 

ಎನ್‌ಎಸ್‌ಎಸ್ ಘಟಕ 2ರ ಕಾರ್ಯಕ್ರಮಾಧಿಕಾರಿ ಪಿ.ಡಿ.ಕುಂಬಾರ ಸ್ವಾಗತಿಸಿದರು, ಪ್ರೊ.ಎ.ಎಚ್‌. ಹಿರೇಮಠ ವರದಿವಾಚನ ಮಾಡಿದರು, ಎನ್‌ಎಸ್‌ಎಸ್ ಘಟಕ 1ರ ಕಾರ್ಯಕ್ರಮಾಧಿಕಾರಿ ಡಾ.ಲೋಕೇಶ ರಾಠೋಡ ವಂದಿಸಿದರು. ಶಿಬಿರಾರ್ಥಿಗಳು ಕಾರ್ಯಕ್ರಮ ನಡೆಸಿಕೊಟ್ಟರು. ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಸೇವಾ ಶಿಬಿರಕ್ಕೆ ಸಹಾಯ ಸಹಕಾರ ನೀಡಿದವರನ್ನು ಸನ್ಮಾನಿಸಿ ಗೌರವಿಸಲಾಯಿತು.