ಪುಲ್ವಾಮದಲ್ಲಿ ಕಲ್ಲೆಸೆತ: 12 ಯುವಕರ ಬಂಧನ


ಶ್ರೀನಗರ, ಮಾ.11:  ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ನಡೆದ ಕಲ್ಲೆಸೆತ ಪ್ರಕರಣಕ್ಕೆ ಸಂಬಂಧಿಸಿ 12 ಯುವಕರನ್ನು ಬಂಧಿಸಲಾಗಿದೆ ಎಂದು ಬುಧವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಮಂಗಳವಾರ ರಾತ್ರಿ ಮತ್ತು ಬುಧವಾರ ಬೆಳಗ್ಗಿನ ಜಾವ ಪುಲ್ವಾಮಾದ ವಿವಿಧ ಹಳ್ಳಿಗಳ ಮೇಲೆ ಭದ್ರತಾ ಪಡೆಗಳು ದಾಳಿ ನಡೆಸಿದವು. ಕಲ್ಲು ತೂರಾಟದಲ್ಲಿ ಭಾಗಿಯಾದ ಆರೋಪದ ಮೇಲೆ 12 ಯುವಕರನ್ನು ಬಂಧಿಸಲಾಗಿದೆ, ಅವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ ಎಂದು ಅವರು ಹೇಳಿದರು, ಆದಾಗ್ಯೂ, ಯುವಕರು ಕಲ್ಲು ತೂರಾಟದಲ್ಲಿ ಭಾಗಿಯಾಗಿಲ್ಲ. ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಕುಟುಂಬದ ಸದಸ್ಯರು ಆಗ್ರಹಿಸಿದ್ದಾರೆ