ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳಕ್ಕೆ ಎಸ್.ಯು.ಸಿ.ಐ ಖಂಡನೆ
SUCI condemns increase in petrol and diesel prices
ಬಳ್ಳಾರಿ 17: ಎಸ್.ಯು.ಸಿ.ಐ (ಸಿ) ಪಕ್ಷದ ವತಿಯಿಂದ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳವನ್ನು ವಿರೋಧಿಸಿ ಕುರುಗೋಡು ಪಟ್ಟಣದಲ್ಲಿಂದು ಪ್ರತಿಭಟನೆ ಮಾಡಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಲೀಟರಿಗೆ ತಲಾ ರೂ. 3ರಂತೆ ಏರಿಸಿರುವ ಕ್ರಮವನ್ನು ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷವು ತೀವ್ರವಾಗಿ ಖಂಡಿಸುತ್ತದೆ.
ಇಂಧನ ಬೆಲೆ ಏರಿಕೆಯು ಬೇರೆಲ್ಲ ಅವಶ್ಯಕ ವಸ್ತುಗಳನ್ನು ದುಬಾರಿಗೊಳಿಸಿ, ಹಣದುಬ್ಬರಕ್ಕೆ ಕಾರಣವಾಗುತ್ತಿದೆ. ಅಮೆರಿಕಾ - ಇಸ್ರೇಲ್ ಕೂಟವು ಇರಾನ್ ಮೇಲೆ ನಡೆಸುತ್ತಿರುವ ಯುದ್ಧವೇ ಈ ಬೆಲೆ ಏರಿಕೆಗೆ ಕಾರಣ ಎಂದು ಕೇಂದ್ರ ಬಿಜೆಪಿ ಸರ್ಕಾರವು ಸಮರ್ಥಿಸಿಕೊಳ್ಳುತ್ತಿದೆ. ಆದರೆ ಭಾರತವು ರಷ್ಯಾದಿಂದ ರಿಯಾಯಿತಿ ದರದಲ್ಲಿ ತೈಲ ಖರೀದಿಸುವ ಅವಕಾಶವನ್ನು ಅಮೆರಿಕಾದ ಒತ್ತಡಕ್ಕೆ ಮಣಿದು ಕೈಚೆಲ್ಲಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಅಲ್ಲದೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಅರ್ಧದಷ್ಟು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಧಿಸುವ ತೆರಿಗೆ ಗಳೇ ಇವೆ. ಹಾಗಾಗಿ ತಕ್ಷಣವೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತೆರಿಗೆಗಳನ್ನು ಕಡಿತಗೊಳಿಸಬೇಕು, ತೈಲ ಕಂಪನಿಗಳ ಲಾಭಕ್ಕಾಗಿ, ದೇಶದೊಳಗೆಯೇ ಶುದ್ಧೀಕರಣ ಮಾಡಿ ಉತ್ಪಾದಿಸುವ ಪೆಟ್ರೋಲ್ ಮತ್ತು ಡೀಸೆಲ್ ಗಳಿಗೆ ಜಾಗತಿಕ ದರಗಳನ್ನು ನಿಗದಿ ಮಾಡುವ ನೀತಿಯನ್ನು ಕೈಬಿಡಬೇಕು. ಈ ಯುದ್ಧವನ್ನು ನಿಲ್ಲಿಸಿ, ಬೇರೆ ದೇಶಗಳ ಆಂತರಿಕ ವ್ಯವಹಾರಗಳಲ್ಲಿ ಮೂಗು ತೂರಿಸದಂತೆ ಅಮೆರಿಕಾದ ಸಾಮ್ರಾಜ್ಯಶಾಹಿಗಳ ಮೇಲೆ ಭಾರತವು ಒತ್ತಡ ಹೇರಬೇಕು ಎಂದು ಆಗ್ರಹಿಸಿದರು.
ಈ ಸಂಧರ್ಭದಲ್ಲಿ ಕುರುಗೋಡು ಸ್ಥಳೀಯ ಸಮಿತಿ ಕಾರ್ಯದರ್ಶಿ ಗೋವಿಂದ್, ಸಮಿತಿ ಸದಸ್ಯರಾದ ಗುರಳ್ಳಿ ರಾಜ , ಮಣಿಕಂಠ ಕಾರ್ಮಿಕರಾದ ಅಂಬರೀಷ್, ಕುರಿ ಮಲ್ಲಯ್ಯ, ವೀರೇಶ್ , ತಿಪ್ಪೇಸ್ವಾಮಿ, ಬಸವರಾಜ್, ಶ್ರೀನಿವಾಸ್ ಸೇರಿದಂತೆ ಇತರರು ಉಪಸ್ಥಿತರಿದ್ದರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 