ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ಖಂಡಿಸಿ ಎಸ್‌ಯುಸಿಐ ಪ್ರತಿಭಟನೆ

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ಖಂಡಿಸಿ ಎಸ್‌ಯುಸಿಐ ಪ್ರತಿಭಟನೆ SUCI protests against petrol and diesel price hike

ಲೋಕದರ್ಶನ ವರದಿ 

ಇಂದು ಧಾರವಾಡದ ವಿವೇಕಾನಂದ ವೃತ್ತದದಲ್ಲಿ  ಎಸ್‌ಯುಸಿಐ (ಕಮ್ಯುನಿಷ್ಟ್‌) ಪಕ್ಷದ ವತಿಯಿಂದ ಕೇಂದ್ರ ಸರ್ಕಾರದ ತೈಲ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ಮಾಡಲಾಯಿತು. 

ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಲೀಟರಿಗೆ 11 ದಿನಗಳಲ್ಲಿ 4 ಬಾರಿ ಏರಿಕೆ ಮಾಡಿರುವ ಕ್ರಮವನ್ನು ಖಂಡಿಸಲಾಯಿತು. 

ಧಾರವಾಡ 28: ಜಿಲ್ಲಾ ಕಾರ್ಯದರ್ಶಿ ಲಕ್ಷ್ಮಣ ಜಡಗನ್ನವರ ಅವರು ಮಾತನಾಡುತ್ತಾ, “ಇಂಧನಬೆಲೆ ಏರಿಕೆಯು ಬೇರೆಲ್ಲ ಅವಶ್ಯಕ ವಸ್ತುಗಳನ್ನು ದುಬಾರಿಗೊಳಿಸಿ, ಹಣದುಬ್ಬರಕ್ಕೆ ಕಾರಣವಾಗುತ್ತಿದೆ. ಅಮೆರಿಕಾ - ಇಸ್ರೇಲ್ ಕೂಟವು ಇರಾನ್ ಮೇಲೆ ನಡೆಸುತ್ತಿರುವ ಯುದ್ಧವೇ ಈ ಬೆಲೆ ಏರಿಕೆಗೆ ಕಾರಣ ಎಂದು ಕೇಂದ್ರ ಬಿಜೆಪಿ ಸರ್ಕಾರವು ಸಮರ್ಥಿಸಿಕೊಳ್ಳುತ್ತಿದೆ. ಆದರೆ ಮಾರ್ಚ ಮತ್ತು ಎಪ್ರಿಲ್ ನಲ್ಲಿ ಪಂಚರಾಜ್ಯಗಳ ಚುನಾವಣೆ ನಡೆಯಯತ್ತಿರವಾಗ, ದೇಶವು ಸಬಲವಾಗಿದೆ ಎಂದು ಹೇಳುತ್ತಾ , ಯುದ್ದದ ಪರಿಣಾಮ ಭಾರತದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ ಪ್ರದಾನಿಯ ನಿಜ ಬಣ್ಣ ಬಯಲಾಗಿದೆ ಎಂದರು.  

ಭಾರತವು ರಷ್ಯಾದಿಂದ ರಿಯಾಯಿತಿ ದರದಲ್ಲಿ ತೈಲ ಖರೀದಿಸುವ ಅವಕಾಶವನ್ನು ಅಮೆರಿಕಾದ ಒತ್ತಡಕ್ಕೆ ಮಣಿದು ಕೈಚೆಲ್ಲಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಅಲ್ಲದೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಅರ್ಧದಷ್ಟು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಧಿಸುವ ತೆರಿಗೆ ಗಳೇ ಇವೆ. ಹಾಗಾಗಿ ತಕ್ಷಣವೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತೆರಿಗೆಗಳನ್ನು ಕಡಿತಗೊಳಿಸಬೇಕು, ತೈಲ ಕಂಪನಿಗಳ ಲಾಭಕ್ಕಾಗಿ, ದೇಶದೊಳಗೆಯೇ ಶುದ್ಧೀಕರಣ ಮಾಡಿ ಉತ್ಪಾದಿಸುವ ಪೆಟ್ರೋಲ್ ಮತ್ತು ಡೀಸೆಲ್ ಗಳಿಗೆ ಜಾಗತಿಕ ದರಗಳನ್ನು ನಿಗದಿ ಮಾಡುವ ನೀತಿಯನ್ನು ಕೈಬಿಡಬೇಕು. ಈ ಯುದ್ಧವನ್ನು ನಿಲ್ಲಿಸುವಂತೆ, ಬೇರೆ ದೇಶಗಳ ಆಂತರಿಕ ವ್ಯವಹಾರಗಳಲ್ಲಿ ಮೂಗು ತೂರಿಸದಂತೆ ಅಮೆರಿಕಾದ ಸಾಮ್ರಾಜ್ಯಶಾಹಿಗಳ ಮೇಲೆ ಭಾರತವು ಒತ್ತಡ ಹೇರಬೇಕು ಎಂದು ನಾವು ಒತ್ತಾಯಿಸುತ್ತೇವೆ.”  ಎಂದರು. 

“ಬಿಜೆಪಿ ಅಧಿಕಾರಕ್ಕೆ ಬಂದರೆ ಗುಜರಾತ್ ಮಾದರಿ ಸರ್ಕಾರ ಬರುತ್ತದೆ ಅಚ್ಛೇದೀನ್ ಬರುತ್ತದೆ ಎಂದು ಹೇಳಿ ಜನರಿಗೆ ಮೋಸ ಮಾಡಲಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ತೈಲಬೆಲೆ ಇಳಿಕೆ ಕಂಡರೂ ಸಹ ಅದರ ಲಾಭ ಗ್ರಾಹಕರಿಗೆ ಸಿಗುತ್ತಿಲ್ಲ. ಬದಲಿಗೆ ಬೆಲೆ ಏರಿಕೆ ಬರೆ ಹಾಕಲಾಗುತ್ತಿದೆ. ಆದರೆ ತೈಲ ಕಂಪನಿಗಳು ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡಿವೆ.ಈ ಹಿಂದಿನ ಕಾಂಗ್ರೆಸ್‌ನ ಬೆಲೆ ಏರಿಕೆ ನೀತಿಯನ್ನೇ ಬಿಜೆಪಿ ಮುಂದುವರಿಸಿದೆ. ಈ ಎರಡು ಪಕ್ಷಗಳು ಜನ ವಿರೋಧಿಯಾಗಿದ್ದು, ಕಾರ​‍್ೋರೇಟ್ ಕಂಪನಿಗಳ ಏಜೆಂಟ್ ಆಗಿವೆ. ಈ ಹಿನ್ನಲೆಯಲ್ಲಿ ಜನ ಹೋರಾಟ ತೀವ್ರಗೊಳಿಸಬೇಕು. ಇದೊಂದೇ ಪರಿಹಾರ” ಎಂದರು. 

ಅಧ್ಯಕ್ಷತೆಯನ್ನು ಜಿಲ್ಲಾ ಸಮಿತಿ ಮದುಲತಾ ಗೌಡರ ವಹಿಸಿದ್ದರು. ಜಿಲ್ಲಾ ಸಮಿತಿ ಹಿರಿಯ ಸದಸ್ಯರಾದ ಗಂಗಾಧರ ಬಡಿಗೇರ್, ಸದಸ್ಯರಾದ ಭುವನಾ ಬಳ್ಳಾರಿ, ದೀಪಾ ಧಾರವಾಡ , ಗಂಗಾ ಕೋಕರೆ ದೇವಮ್ಮ ದೇವತಕಲ್, ರುದ್ರಕಾಂತ, ದಾದ್ ಪೀರ್‌ಸಾಬ್, ಯಲ್ಲಪ್ಪ, ಸಿಂದು, ಶಶಿಕಲಾ,  ಮುಂತಾದವರು ಉಪಸ್ಥಿತರಿದ್ದರು.