ಪತಿಯ ಕುಟುಂಬಸ್ಥರ ಕಿರುಕುಳ: ಗೃಹಿಣಿ ಆತ್ಮಹತ್ಯೆ

ಬೆಂಗಳೂರು,ಮಾ 5 ಡೆತ್ ನೋಟ್ ಬರೆದಿಟ್ಟು ಗೃಹಿಣಿ ಆತ್ಮಹತ್ಯೆ ಗೆ ಶರಣಾಗಿರುವ ಘಟನೆ ಸಿಲಿಕಾನ್ ಸಿಟಿಯ ಸುಬ್ರಹ್ಮಣ್ಯ ನಗರದಲ್ಲಿ ನಡೆದಿದೆ.26 ವರ್ಷದ ನಂದಿನಿ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.ಸುಮಾರು 6 ವರ್ಷಗಳ ಹಿಂದೆ ನಂದಿನಿ, ರಾಜು ಎಂಬುವವರೊಂದಿಗೆ ಪ್ರೀತಿಸಿ ಮದುವೆಯಾಗಿದ್ದರು ಎಂದು ತಿಳಿದು ಬಂದಿದೆ.ಪತಿ  ರಾಜು ಹಾಗೂ ಆತನ ಕುಟುಂಬಸ್ಥರ ಕಿರುಕುಳಕ್ಕೆ ಬೇಸತ್ತು  ಆತ್ಮಹತ್ಯೆ  ಮಾಡಿಕೊಳ್ಳುತ್ತಿರುವುದಾಗಿ ನಂದಿನಿ ಡೇತ್ ನೋಟ್ ನಲ್ಲಿ ಬರೆದಿಟ್ಟಿದ್ದಾರೆ ಎಂದು  ತಿಳಿದು ಬಂದಿದೆ.ಘಟನೆಗೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.